ಬಾಗಲಕೋಟೆ | ಮುಡಾ ಪ್ರಕರಣ; ನ.6ರಂದು ಅರೆಬೆತ್ತಲೆ ಮೆರವಣಿಗೆಗೆ ದಸಂಸ ಕರೆ

Date:

ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗಪಡಿಸಿಕೊಂಡು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರ ದುರ್ಬಲಗೊಳಿಸಲು, ಚುನಾಯಿತ ಸರ್ಕಾರ ಪತನಗೊಳಿಸಲು ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿಯು ಬಾಗಲಕೋಟೆ ಜಿಲ್ಲಾ ನವನಗರದಲ್ಲಿ ನವೆಂಬರ್‌ 6ರಂದು ಬೆಳಿಗ್ಗೆ 11.30ಕ್ಕೆ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುವುದು ಎಂದು ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನವನಗರದ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುತ್ತದೆ. ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎಫ್‌ಐಆರ್ ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡ ನಿಗದಿಪಡಿಸಿದರೆ ಸಿದ್ದರಾಮಯ್ಯ ಮಾತ್ರವಲ್ಲ, ನರೇಂದ್ರ ಮೋದಿಯವರ ಸಂಪುಟದ 23ರಿಂದ 24 ಮಂದಿ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ, ರಾಜಭವನಗಳ ಮೂಲಕ ಮಟ್ಟಹಾಕಲು ಫ್ಯೂಡಲ್ ರಾಜಕಾರಣ ದೇಶದಲ್ಲಿ ನಡೆದಿದೆ. ಆದರೆ ಮುಡಾ ಪ್ರಕರಣ ಕೃತಕ ಕಾರಣಕ್ಕೆ ಹೆದರಿ ಸಿದ್ದರಾಮಯ್ಯನವರ ಸರ್ಕಾರ ನಿರ್ಗಮಿಸುವುದು ಎಂದರೆ ಈ ಸಮಾಜದ ಬಹುಜನರ ವಿಚಾರಧಾರೆಗೆ ಸೋಲಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಮುಸ್ಲಿಂ ಯುವಕನ ದೀಪಾವಳಿ ಸಂಭ್ರಮ; ಗೂಡುದೀಪ ತಯಾರಿಸಿ ಹಂಚಿದ ಅಶ್ಫಾಕ್

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ, ರವಿ ಕಾಂಬಳಿ, ಕಾಶಿಂಜಲಿ ಗೋರೆ, ಮಹಾಲಿಂಗಪ್ಪ ಅಲಬಾಳ, ಸದಾಶಿವ ಐನಾಪೂರ, ಬಸವರಾಜ ದೊಡ್ಡಮನಿ, ಮಾರುತಿ ಚಿಕ್ಕಾಲಗುಂಡಿ, ಹುಲ್ಲಪ್ಪ ಅಂಟರಟಾನ, ಆಪಾಸಿ ಕಾಂಬಳೆ, ಶ್ರಾವಣ ನಿಡೋಣಿ, ಯಾಸಿನ್ ಲೋದಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...