ಬಾಗಲಕೋಟೆ | ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಸ ಆ್ಯಂಬುಲೆನ್ಸ್‌

Date:

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆ್ಯಂಬುಲೆನ್ಸ್‌ಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ವೀಕ್ಷಣೆ ಮಾಡಿ ಮಾತನಾಡಿ, “ಹುನುಗುಂದ ಹಾಗೂ ಇಳಕಲ್ ಅವಳಿ ತಾಲೂಕಿಗೆ ಆ್ಯಂಬುಲೆನ್ಸ್ ಅವಶ್ಯಕತೆ ಇತ್ತು. ಇದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಆ್ಯಂಬುಲೆನ್ಸ್ ಒದಗಿಸುವಂತೆ ಮನವಿ ಮಾಡಿಕೊಂಡಾಗ ಅದಕ್ಕೆ ಸ್ಪಂದಿಸಿ ಅವಳಿ ತಾಲೂಕಿಗೆ ಎರಡು ನೂತನ ಆ್ಯಂಬುಲೆನ್ಸ್ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಕಳೆದ ಐದಾರು ವರ್ಷಗಳಿಂದ ಸಾರ್ವಜನಿಕ ಮತ್ತು ಸಮುದಾಯದ ಆಸ್ಪತ್ರೆಗಳಿಗೆ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಮೂಲಸೌಕರ್ಯಗಳ ಕಾಮಗಾರಿಗಳಿಗೆ ಈಗಾಗಲೇ ಭೂಮಿ ಪೂಜೆ ಮಾಡಲಾಗಿದೆ. ಹುನಗುಂದ ತಾಲೂಕು, ಆಸ್ಪತ್ರೆಗೆ ತಾಯಿ-ಮಗು ಆಸ್ಪತ್ರೆಗೆ ಈಗಾಗಲೇ ಮಂಜೂರಾತಿ ದೊರೆತಿದೆ. ಹುನಗುಂದ ಸಾರ್ವಜನಿಕ ಆಸ್ಪತ್ರೆಯ ಕೆಲವು ಕೊಠಡಿಗಲ್ಲಿ ಕೆಳಗಿನಿಂದ ನೀರಿನ ಬುಗ್ಗೆಗಳು(ಸೆಲೆ) ಉಂಟಾಗಿದ್ದರಿಂದ, ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರ ರಿಪೇರಿ ಹಾಗೂ ಸುರಕ್ಷಿತವಾಗಿ ನಿರ್ಮಾಣಕ್ಕೆ ಕ್ರಮ ಹಾಗೂ ಶಿಥಿಲಾವಸ್ಥೆ ಕಟ್ಟಡಗಳನ್ನು ಪುನಃ ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನ.25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ

ಆರೋಗ್ಯ ಸಮಿತಿ ಉಪಾಧ್ಯಕ್ಷ ಶಿವಾನಂದ ಕಂಠಿ, ಸಂಜು ಜೋಶಿ, ಸಂಗಣ್ಣ ಗಂಜಿಹಾಳ, ವಿಜಯ ಗದ್ದನಕೇರಿ, ತಾಲೂಕು ವೈದ್ಯಧಿಕಾರಿ ಡಾ. ಎಸ್ ಎಸ್ ಅಂಗಡಿ, ಮುಖ್ಯ ವೈದ್ಯಾಧಿಕಾರಿ ಡಾ. ಮಂಜುನಾಥ ಅಂಕೋಲ್ಕರ, ಸಂಗಣ್ಣ ಅವಾರಿ, ರಫೀಕ್ ವಾಲಿಕಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...