ಬಾಗಲಕೋಟೆ | ನ.17ರ ಸಿಎಂ ಕಾರ್ಯಕ್ರಮಕ್ಕೆ ಮುತ್ತಿಗೆ: ಕಬ್ಬು ಬೆಳೆಗಾರರ ಎಚ್ಚರಿಕೆ

Date:

ಕಬ್ಬು ಬೆಳೆಗಾರರಿಗೆ ಬೆಂಬಲ‌ ಬೆಲೆ ನೀಡದ ಸಮಸ್ಯೆ ಪರಿಹರಿಸದೆ ಹೋದರೆ ಮುಂಬರುವ ನ. 17ಕ್ಕೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬರುವುದನ್ನು ಮುತ್ತಿಗೆ ಹಾಕಿ ಗದ್ದನಕೇರಿ ಕ್ರಾಸ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲಾ ರೈತ ಸಂಘದ ಮುಖಂಡ ಮುತ್ತಪ್ಪ ಕೋಮರ ಎಚ್ಚರಿಕೆ ನೀಡಿದರು.

- Advertisement -

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಸಕ್ಕರೆ ಕಾರ್ಖಾನೆಯ ಮಾಲೀಕರೊಂದಿಗೆ ಈ ಮೊದಲು ಮುಧೋಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಸಭೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಕಬ್ಬು ಬೆಳೆಗೆ ಬೆಂಬಲ‌ ಬೆಲೆ ನೀಡದೆ ಹೋದರೆ, ನ. 17ರ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋದಾವರಿ ಸಕ್ಕರೆ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ₹3 ಸಾವಿರ ಬೆಲೆ ನೀಡುವುದಾಗಿ ಘೋಷಿಸಿದ್ದು ಅದನ್ನು ರೈತರು ಒಪ್ಪಿಕೊಳ್ಳುವುದಿಲ್ಲ. ಕನಿಷ್ಠ ಪ್ರತಿ ಟನ್‌ಗೆ ₹3,500 ನೀಡಬೇಕು. ಅದನ್ನು ಎಲ್ಲ ಕಾರ್ಖಾನೆಯವರು ಕೂಡಲೇ ಘೋಷಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮುಧೋಳ ಸೇರಿದಂತೆ ಎಲ್ಲೆಡೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ತಿಂಗಳಿಂದ ಸಭೆ ನಡೆಸುವಂತೆ ಆಗ್ರಹಿಸುತ್ತಿದ್ದರೂ ಸಚಿವರೂ ರೈತರ ಪರವಾಗಿ ಬಾಯಿ ಬಿಡುತ್ತಿಲ್ಲ ಎಂದು ದೂರಿದರು.

ಪಕ್ಕದ ಜಿಲ್ಲೆಗಳಿಂದ ಕಬ್ಬು ತರುವ ಕಾರ್ಖಾನೆಗಳವರು, ಕಬ್ಬು ಕಟಾವು, ಸಾಗಾಣಿಕೆಗಾಗಿ ಪ್ರತಿ ಟನ್‌ಗೆ ₹900 ರಿಂದ ₹1,000 ವಿಧಿಸುತ್ತಿದ್ದಾರೆ. ಇಲ್ಲಿಯವರೆಗೆ ಇಳುವರಿ ಪ್ರಮಾಣ ಅಳೆಯುವುದನ್ನು ರೈತರು ಕಂಡಿಲ್ಲ. ಮತ್ತು ಇಳುವರಿ ಪ್ರಮಾಣವೂ ಕಡಿಮೆ‌ ಆಗಿದೆ. ಇನ್ನು ಕಬ್ಬನ್ನು ನೆರೆ ಜಿಲ್ಲೆಗಳಿಂದ ತಂದರೂ ಅಧಿಕಾರಿಗಳು ಸುಮ್ಮನಿದ್ದು, ಕಾರ್ಖಾನೆಗಳೊಂದಿಗೆ ಶಾಮೀಲು ಆಗಿದ್ದಾರೆಂದು ಆರೋಪಿದರು.

ಮುಖಂಡ ಈರಪ್ಪ ಹಂಚಿನಾಳ ಮಾತನಾಡಿ, ಕಾರ್ಖಾನೆಯವರು ಹಿಂದಿನ ಬಾಕಿ ನೀಡಿಲ್ಲ. ವಾಣಿಜ್ಯ ಉದ್ದೇಶಕ್ಕೆ ಬಹುತೇಕ ಸಕ್ಕರೆ ಬಳಸಲಾಗುತ್ತದೆ. ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ ₹3,100 ಇದ್ದು, ಅದನ್ನು ₹4,100ಕ್ಕೆ ಏರಿಸಬೇಕು. ಬೆಂಬಲ ಬೆಲೆ ನಿಗದಿಯೂ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಸುದ್ಧಿಗೋಷ್ಠಿಯಲ್ಲಿ ಗೋವಿಂದಪ್ಪ ಮೆಟಗುಡ್ಡ, ಗಂಗಪ್ಪ ಮಾದರ, ಬಸವರಾಜ ಗೋನಾಳ, ರಾಜೇಂದ್ರ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...