ಬಾಗಲಕೋಟೆ | ನ. 17ಕ್ಕೆ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

Date:

ಮುಂಬರುವ ನವೆಂಬರ್ 17ಕ್ಕೆ ಬಾಗಲಕೋಟೆಯಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸಿ‌ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

- Advertisement -

ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಹಾಗೂ ಸಹಕಾರ ಸಚಿವರು, ರಾಜ್ಯದ ಗಣ್ಯ ವ್ಯಕ್ತಿಗಳು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು, ರಾಜ್ಯದ ಹಿರಿಯ ಸಹಕಾರಿಗಳು ಆಗಮಿಸಲಿದ್ದಾರೆ. ಆದ್ದರಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರದ ಹುಬ್ಬಳ್ಳಿ ಬೈಪಾಸ್ ರಸ್ತೆ, ಜಿಲ್ಲಾ ಪಶು ಆಸ್ಪತ್ರೆಯ ಎದುರಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ವಿವಿಧ ಸಹಕಾರ ಸಂಘಗಳ ಸಹಕಾರಿಗಳು, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಕೆಲಸವಾಗಬೇಕು ಎಂದರು.

ವೇದಿಕೆ ಪಕ್ಕದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೂ ವಿವಿಧ ಇಲಾಖೆ ಸೇರಿದಂತೆ 15ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆ ಹಾಕುವ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿಯ ಮಾಹಿತಿ ವರದಿ ಇರಬೇಕು. ವೇದಿಕೆ ನಿರ್ಮಾಣದ ಕಾರ್ಯವನ್ನು ಸಹಕಾರ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ ಜವಾಬ್ದಾರಿಯಾಗಿದ್ದು, ಅಚ್ಚುಕಟ್ಟಾಗಿ ವೇದಿಕೆ ನಿರ್ಮಿಸಲು ಸೂಚಿಸಿದರು.

ಈ ವರದಿ ಓದಿದ್ದೀರಾ? ಉತ್ತರ ಕನ್ನಡ | ಅನಾಥ ರಕ್ಷಕರ ಮೇಲೆ ಹಲ್ಲೆ, ಕೊಲೆ ಯತ್ನ : ತನಿಖೆಗೆ ಆಗ್ರಹ

ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ ಅವರು ಕಾರ್ಯಕ್ರಮದ ರೂಪುರೇಷೆಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...