ಬಾಗಲಕೋಟೆ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ; ಸೆ.19, 20ರಂದು ವಿಶೇಷ ಅಭಿಯಾನ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಸೆ.19, 20ರಂದು ಮತದಾರರ ನೋಂದಣಿ ವಿಶೇಷ ಅಭಿಯಾನ ನಡೆಯಲಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.19 ಮತ್ತು 20ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಲ್ಲಿ ಲಭ್ಯವಿರಲಿದ್ದಾರೆ. ಸಾರ್ವಜನಿಕರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

18 ವರ್ಷ ಪೂರ್ಣಗೊಂಡಿರುವ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಈ ವಿಶೇಷ ಅಭಿಯಾನದಲ್ಲಿ ಅವಕಾಶವಿದೆ. ಈ ಹಿಂದೆ ಹೆಸರು ಸೇರ್ಪಡೆ ಮಾಡಲು ಸಾಧ್ಯವಾಗದ ಅರ್ಹ ವಯೋಮಾನದವರೂ ಸಹ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಲ್ಲದೆ, ಈಗಾಗಲೇ ಮತದಾರರ ಪಟ್ಟಿಯಲ್ಲಿರುವವರ ಹೆಸರು, ವಿಳಾಸ ಸೇರಿದಂತೆ ಯಾವುದೇ ವಿವರಗಳಲ್ಲಿ ತಪ್ಪುಗಳಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಪ್ರತಿಯೊಬ್ಬ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಂಡು, ಅಗತ್ಯವಿದ್ದಲ್ಲಿ ನೋಂದಣಿ ಅಥವಾ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಹೇಳಿದರು.

ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಸೆ.23ರವರೆಗೆ ಹೊಸ ನೋಂದಣಿ ಹಾಗೂ ವಿವಿಧ ರೀತಿಯ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಸಾರ್ವಜನಿಕರು ಕೊನೆಯ ದಿನದವರೆಗೆ ಕಾಯದೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಚುನಾವಣಾ ವಿಭಾಗದ ಶಿರಸ್ತೇದಾರ ಮಹೇಶ ಪಾಂಡವ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಪ್ರಭು ಹಳ್ಳೂರ, ಕೃಷ್ಣಾ ಪಾಟೀಲ, ಶರದ್ ಪಾಟೀಲ ಹಾಗೂ ಮಲ್ಲು ಮುತ್ತಪ್ಪನವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...

ಹಾವೇರಿ | ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು...

ವಿಜಯಪುರ | ಗಾಂಧಿ ಚಿಂತನೆಗಳು ಇಂದಿಗೂ ಪ್ರಸ್ತುತ: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಶಾಂತಿ ಹಾಗೂ...