ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

Date:

ಬಾಗಲಕೋಟೆ ಜಿಲ್ಲೆ ಇಳಕಲ್‌ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್‌ ತಾಲೂಕು ಸಮಿತಿಯು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು.

- Advertisement -

“ನಗರದಲ್ಲಿ ಜನರು ದಿನನಿತ್ಯ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಈ ಮೊದಲಿಂದಲೂ ನಗರಸಭೆಗೆ ಮನವಿ ಸಲ್ಲಿಸಿದ್ದು, ಇದುವರೆಗೂ ಯಾವುದೇ ಸರಿಯಾದ ಕ್ರಮ ಕೈಗೊಳ್ಳದಿರುವುದು ಜನತೆಯಲ್ಲಿ ಅಸಮಾಧಾನ ಹುಟ್ಟಿಸಿದೆ. ಜನರ ಕಷ್ಟ ನಿರಂತರವಾಗಿ ಹೆಚ್ಚುತ್ತಿದ್ದು, ನಗರಪಾಲಿಕೆಯ ನಿರ್ಲಕ್ಷ್ಯ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ” ಎಂದು ಸಮಿತಿಯ ಪದಾಧಿಕಾರಿಗಳು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನೀರಿನ ಸರಬರಾಜು ವ್ಯವಸ್ಥೆಯನ್ನು ತಕ್ಷಣ ಸುಧಾರಿಸಬೇಕು ಮತ್ತು ನಿರಂತರ ನೀರಿನ ಪೂರೈಕೆ ಖಾತ್ರಿಯಾಗಬೇಕು. ಶಾಶ್ವತ ಪರಿಹಾರಕ್ಕಾಗಿ ದೀರ್ಘಾವಧಿ ಯೋಜನೆ ರೂಪಿಸುವುದಾಗಿ ಜನರಿಗೆ ಭರವಸೆ ನೀಡಬೇಕು. ಈಗಲೂ ಕೂಡ ಪ್ರಯೋಜನಕಾರಿ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮುಂದುವರಿದರೆ, ವೆಲ್ಫೇರ್ ಪಾರ್ಟಿ ಜನರ ಹಕ್ಕಿಗಾಗಿ ತೀವ್ರ ಹೋರಾಟ ಮಾಡಲು ನಿರ್ಧರಿಸಿದೆ. ಇದಕ್ಕೆ ಅವಕಾಶ ಕೊಡದೆ ಸಾರ್ವಜನಿಕ ಸಮಸ್ಯೆ ಬಗೆಹರಿಸಬೇಕು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿಯ ಬಾಗಲಕೋಟೆ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಜಾಕ್ ಕಲಾಲ್, ಜಿಲ್ಲಾ ಉಪಾಧ್ಯಕ್ಷ ಆಫ್ಜಲ್ ಹುಮ್ನಾಬಾದ್, ಇಳಕಲ್ ಅಧ್ಯಕ್ಷ ಸಿರಾಜ ಹುಣಚಗಿ, ರಫೀಕ್ ಬಲ್ಗನೂರ್, ಲಾಲ್ ಸಾಬ್ ಬಂಡಾರಿ, ಮುರ್ತುಜಾ ಸೈ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...