ಬಾಗಲಕೋಟೆ | ಸಕ್ಕರೆ ಕಾರ್ಖಾನೆಗಳ ತೂಕ ಮೋಸ ತಡೆಗೆ ಮುನ್ನೆಚ್ಚರಿಕೆ; 15ಕ್ಕೂ ಹೆಚ್ಚು ಯಂತ್ರಗಳ ಸಿದ್ಧತೆ

Date:

ಸಕ್ಕರೆ ಕಾರ್ಖಾನೆಗಳಿಗೆ ರೈತರು ಕಬ್ಬು ಪೂರೈಸುವಾಗ ತೂಕದಲ್ಲಿ ಮೋಸವಾಗುತ್ತದೆಂಬ ಆರೋಪ ಮಾಡುವ ಮುನ್ನ ದೂರು ನೀಡಿದರೆ ಕೂಡಲೇ ತೂಕದ ಯಂತ್ರ ತರಿಸಿ ಅಳವಡಿಸಿಕೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಈಗಾಗಲೇ 15ಕ್ಕೂ ಹೆಚ್ಚು ತೂಕದ ಯಂತ್ರಗಳನ್ನು ತರಿಸಿ ಇಡಲಾಗಿದೆ. ರೈತರು ದೂರು ಕೊಡಲು ಮುಂದೆ ಬರುತ್ತಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದು, ಖಾಸಗಿ ಸಕ್ಕರೆ ಕಾರ್ಖಾನೆಗಳ ಪೈಪೋಟಿ ಮಧ್ಯೆಯೂ ಸಹಕಾರಿ ಸಂಘದ ಸಕ್ಕರೆ ಕಾರ್ಖಾನೆಯೂ ಎಲ್ಲವನ್ನು ಸರಿಪಡಿಸಿಕೊಂಡು ಕಬ್ಬಿನ ಹಂಗಾಮ ಮುಂದುವರಿಸಬೇಕಾಗಿದೆ” ಎಂದರು.

“ಉತ್ತರ ಕರ್ನಾಟಕದಿಂದಲೇ ಅತಿ ಹೆಚ್ಚು ಕಬ್ಬು ನುರಿಸಲಾಗುತ್ತಿದೆ. ಒಂದೇ ಜಿಲ್ಲೆ ಒಂದು ತಾಲೂಕಿನ ಸಕ್ಕರೆ ಕಾರ್ಖಾನೆಗಳಿದ್ದರೂ ರಿಕವರಿ ಮಾತ್ರ ಬೇರೆ ಬೇರೆಯಾಗುತ್ತದೆ. ಭೂಮಿ, ನೀರು ಒಂದೇ ಇದ್ದಾಗ ರಿಕವರಿ ಬೇರೆ ಯಾಕೆಂಬ ಜಿಜ್ಞಾಸೆ ಎದುರಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನೆರೆ ಹಾವಳಿಗೆ ನಾಶವಾದ ಮನೆಗಳು; ನೈಜ ಫಲಾನುಭವಿಗಳಿಗಿಲ್ಲ ಆಶ್ರಯ

“ಕಬ್ಬು ಪೂರೈಸಿದ ರೈತರ ಕಬ್ಬಿನ ಬೆಳೆಗೆ 9, 10, 11 ರಿಕವರಿ ಬಂದಾಗ ಗೊಂದಲಕ್ಕೆ ಈಡಾಗುತ್ತಿದ್ದಾನೆ. ಇದನ್ನು ಕಾರ್ಖಾನೆಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ಕಬ್ಬು ನೀಡುತ್ತಿರುವುದರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಭಾರತ ದೇಶದಲ್ಲಿಯೇ ಉತ್ತರ ಕರ್ನಾಟಕದ ಸರ್ಕಾರ ಕಾರ್ಖಾನೆಗಳು ಸಕ್ಕರೆ ಧಾರಣೆ ನೀಡುತ್ತವೆ. ರೈತರು, ಕಾರ್ಮಿಕರ ಸಹಕಾರ ಬೇಕು. ಮಾಲೀಕರಲ್ಲಿ ಹೃದಯ ವೈಶಾಲ್ಯತೆ ಇದ್ದಾಗಲೇ ಬೆಲೆ ಸಿಗಲು ಸಾಧ್ಯವಿದೆ” ಎಂದರು.

“ಸಹಕಾರ ರಂಗದಲ್ಲಿ ಕೆಲವರು ನಿರ್ದೇಶಕರಾಗಿ ಸ್ವಂತ ಸಕ್ಕರೆ ಕಾರ್ಖಾನೆ ಆರಂಭಿಸಿರುವ ದಾಖಲೆಗಳಿವೆ. ಅವಳಿ ಜಿಲ್ಲೆಯಲ್ಲಿ 1997ರಿಂದ ಡಿಸಿಸಿ ಬ್ಯಾಂಕ್‌ನಿಂದ ರಾಜ್ಯದ 27 ಸಕ್ಕರೆ ಕಾರ್ಖಾನೆಗಳಿಗೆ ಸಾಲ ಕೊಟ್ಟಿದ್ದೇವೆ. ಸಹಕಾರ ರಂಗದ ಮೂಲಕ ಸಕ್ಕರೆ ಕಾರ್ಖಾನೆಗಳಿಗೆ ಶಕ್ತಿ ಬಂದಂತಾಗಿದೆ” ಎಂದು ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...