ಬಾಗಲಕೋಟೆ | ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿದ ನಾಲ್ಕು ಲೇಬರ್ ಕೋಡ್ ಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಮುಷ್ಕರದ ಕರೆಯ ಮೇರೆಗೆ ಬಾಗಲಕೋಟೆಯಲ್ಲಿ ಬಾಗಲಕೋಟೆ ನಗರದ ಎಲ್‌ಐಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಿ, ಪ್ರತಿಭಟನಾ ಸಭೆ ನಡೆಸಿದರು.

- Advertisement -

ದೇಶದ ಕಾರ್ಮಿಕ ಸಂಘಟನೆಗಳು ಅನೇಕ ಸಲ ಸಂಘಟಿಸಿದ ಅಖಿಲ ಭಾರತ ಮುಷ್ಕರಗಳನ್ನು ಹಾಗೂ ದೇಶದ ಜನರ ಪ್ರತಿರೋಧವನ್ನು ಲೆಕ್ಕಿಸದೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಮತ್ತು ವಿದೇಶಿ ಬಂಡವಾಳಗಾರರ ಹಿತವನ್ನು ಕಾಪಾಡಲೆಂದು; ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆಗಳನ್ನಾಗಿ ಬದಲಾಯಿಸಿ ನವೆಂಬರ್ 21, 2025 ರಂದು ಜಾರಿಗೆ ತರುವದಾಗಿ ಘೋಷಿಸಿದೆ. ಈ ಸಂಹಿತೆಗಳು ಸಂಪೂರ್ಣ ದುಡಿಯುವ ಜನರ ಜೀವನವನ್ನು ವಿನಾಶ ಮಾಡುವ ಸ್ವರೂಪ ಹೊಂದಿವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ವೇಳೆ ಶ್ರೀಕಾಂತ್ ಕೊಂಡುಗೂಳಿ ಮಾತನಾಡಿ, ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಶ್ಚಿತ ಅವಧಿಯ ಉದ್ಯೋಗ ಒಪ್ಪಂದವನ್ನು ಪ್ರಸ್ತಾಪಿಸಲಾಗಿದೆ. ಅಂದರೆ ಕಾಯಂ ಉದ್ಯೋಗವನ್ನು ನಾಶಗೊಳಿಸುವ ಹುನ್ನಾರ ಮಾಡಲಾಗಿದೆ. ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ 14 ದಿನದ ಮುಂಚಿತವಾಗಿ ಮುಷ್ಕರದ ಸೂಚನೆ ನೀಡಬೇಕೆನ್ನುವ ನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ. ಕೈಗಾರಿಕಾ ಸಂಸ್ಥೆಗಳ ಕಾರ್ಮಿಕರ ಸಂಖ್ಯೆಯನ್ನು 100 ರಿಂದ 300ಕ್ಕೆ ಹೆಚ್ಚಿಸಲಾಗಿದೆ. ಇದರಿಂದಾಗಿ ಪ್ರಮಾಣಿಕೃತ ಸ್ಥಾಯಿ ಆದೇಶವು ಶೇ.85ಕ್ಕಿಂತ ಹೆಚ್ಚು ಸಂಸ್ಥೆಗಳಿಗೆ ಅನ್ವಯ ಆಗದಂತೆ ಮಾಡಲಾಗಿದೆ. ರೂಪಾಯಿ 178 ಕ್ಕೆ ತಳಮಟ್ಟದ ವೇತನವನ್ನು ಪರಿಚಯಿಸಲಾಗಿದೆ ಎಂದು ಆರೋಪಿಸಿದರು.

ಈ ರೀತಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ಕಾರ್ಮಿಕರ ಅಲ್ಪಸ್ವಲ್ಪ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಮಾಲೀಕರ ಲಾಭವನ್ನು ಹೆಚ್ಚಿಸುವ, ಅವರಿಗೆ ಅನುಕೂಲ ಮಾಡಿಕೊಡುವ ಬದಲಾವಣೆಗಳನ್ನು ಈ ಸಂಹಿತೆಯಲ್ಲಿ ಮಾಡಲಾಗಿದೆ. ಆದ್ದರಿಂದ ಇಡೀ ದೇಶದ ಕಾರ್ಮಿಕರು ಹಾಗೂ ಎಲ್ಲ ಜನತೆ ಈ ಲೇಬರ್ ಕೋಡ್‌ಗಳನ್ನು ವಿರೋಧಿಸಿ ಬೃಹತ್ ಹೋರಾಟ ಬೆಳೆಸುವ ಅವಶ್ಯಕತೆ ಇದೆ ಎಂದರು.

ಇದನ್ನೂ ಓದಿ ವಿಜಯಪುರ | ಎಸ್‌ಐಆರ್ ಗೆ ಬಲಿ ಪಶುಗಳಾಗುವವರು; ಎಲ್ಲಾ ಜಾತಿ, ಧರ್ಮಿಯರು: ಚಿಂತಕ ಶಿವಸುಂದರ್

ಎಐಯುಟಿಯುಸಿ ಜಿಲ್ಲಾ ನಾಯಕಿ ಕಮಲಾ ತೇಲಿ, ರುಕ್ಸಾನಾ ನಾಗಠಾಣ, ಸೈನಾಜ್ ಜಂಗಿ, ಮಂಜುಳಾ ನಾಯಕ್, ವಾಸಂತಿ ಪುಜಾರಿ, ದಾನಮ್ಮ, ಭಾರತಿ ಚವ್ಹಾಣ, ಮಂಜುಳಾ ಸರ್ಕಾರ್, ಬಸಮ್ಮ ಕರಡಿ, ಗೀತಾ ಬದಾಮಿ, ಸುರೇಖಾ ಕಾಳೆ, ರಮೇಶ ಬಂಡಿವಡ್ಡರ, ನಾರಾಯಣ ಇಂಗಳೆ, ರಮೇಶ ಗೌಡರ್ ಹಾಗೂ ಸಂಘಟನಾಕಾರ ಹಯ್ಯಾಳಪ್ಪ ಎಚ್. ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...