ಬಾಗಲಕೋಟೆ | ಕುರಿಗಾಹಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Date:

Advertisements

ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಶರಣಪ್ಪ ಜಮ್ಮನಕಟ್ಟಿ ಹಾಗೂ ಬಸವ ಕಲ್ಯಾಣ ತಾಲೂಕಿನ ಪ್ರಭು ಮೇತ್ರಿ ಅವರನ್ನು ಕುರಿಗಳ್ಳರು ಕೊಲೆ ಮಾಡಿದ್ದರು. ಧಾರವಾಡದ ಕುಂದಗೋಳ ತಾಲೂಕಿನ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಅವರನ್ನು ಕೂಡಾ ಕೊಲೆ ಮಾಡಲಾಗಿದೆ. ಹೀಗೆ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮುಂದುವರೆಯುತ್ತಲೇ ಇದೆ. ಹಾಗಾಗಿ ರಾಜ್ಯ ಸರ್ಕಾರ ಶೀಘ್ರ ಈ ಸಂಬಂಧ ಕ್ರಮ ಕೈಗೊಳ್ಳಬೇಕು. ಸಾಂಪ್ರದಾಯಿಕ ಕುರಿಗಾಹಿಗಳ ಹಿತಕ್ಷಣ ಕಾಯ್ದೆಯನ್ನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

WhatsApp Image 2025 07 01 at 12.44.32 PM

ಸಮಿತಿಯ ಮುಖಂಡ ರಂಗನಗೌಡ ಪಾಟೀಲ ಮಾತನಾಡಿ, “ರಾಜ್ಯದಲ್ಲಿರುವ ಕುರಿಗಾಹಿಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದು, ಸರ್ಕಾರವು ಎಲ್ಲ ವರ್ಗದ ಮಹಿಳೆಯರ, ಮಕ್ಕಳ ಮತ್ತು ಶೋಷಿತ ವರ್ಗಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿಶೇಷ ಕಾಯ್ದೆಗಳನ್ನು ಮಾಡುತ್ತಿದೆ. ಅದೇ ರೀತಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು” ಎಂದರು.

ಇದನ್ನೂ ಓದಿ: ಬಾಗಲಕೋಟೆ | ಸಿಬ್ಬಂದಿಗಳಿಲ್ಲದ ಬಲಕುಂದಿ ಗ್ರಾಮ ಪಂಚಾಯಿತಿಗೆ ಬೀಗ

ಪ್ರಭು ಮುಧೋಳ ಹಾಗೂ ಗಂಗಾಧರ ಮೇಟಿ ಮಾತನಾಡಿ, “ಆಡು, ಕುರಿಗಳಿಗೆ ನೀಡುತ್ತಿರುವ ಲಸಿಕೆಯನ್ನು ಸರ್ಕಾರ ಬಂದ್ ಮಾಡಿದೆ. ಇದರಿಂದಾಗಿ ಕುರಿಗಳಿಗೆ ಮತ್ತು ಕುರಿಗಾಹಿಗಳಿಗೆ ಬಹಳಷ್ಟು ತೊಂದರೆಯಾಗಿದೆ‌. ಈ ಕ್ರಮವನ್ನು ಕೂಡಲೇ ಹಿಂಪಡೆಯಬೇಕು. ಕುರಿಗಾರರಿಗೆ ರಕ್ಷಣೆ ಒದಗಿಸಬೇಕು” ಎಂದರು.

ಪ್ರತಿಭಟನೆಯಲ್ಲಿ ಮಾಳು ಹಿಪ್ಪರಗಿ, ಮಲ್ಲಪ್ಪ ಸಿಂಗಾಡಿ, ಗಜಪ್ಪ ಕರಿಗಾರ, ಶಿವಗೊಂಡ ಸನದಿ, ಪರಪ್ಪ ಪ್ರಜಾರಿ, ಮಹಾದೇವ ಆಲಕನೂರ, ಹೊನ್ನಪ್ಪ ಬಿರಡಿ, ಮಾಲಿಂಗ ಮಾಯನ್ನವರ, ಪ್ರಭು ವಗ್ಗ, ಅರ್ಜುನ ಜಿಡ್ಡಿಮನಿ, ಮಲ್ಲೇಶ ತುಂಗಳ ಸೇರಿದಂತೆ ತೇರದಾಳದ ನೂರಾರು ಕುರಿಗಾಹಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X