ಬಾಗಲಕೋಟೆ | ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಉಪ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಮಹಿಳಾ ಸಂಘಟನೆಗಳ ಒಕ್ಕೂಟದ ಅಧ್ಯಕ್ಷೆ ಮಹಾದೇವಿ ಬೀಳಗಿ ಮಾತನಾಡಿ, ಒಲಂಪಿಕ್ಸ್ ನಲ್ಲಿ ದೇಶಕ್ಕೆ ಚಿನ್ನದ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪುಟಗಳ ಮೇಲೆನ ಲೈಂಗಿಕ ಕಿರುಕುಳದ ವಿರುದ್ಧ ಪಟುಗಳ ಹಲವಾರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಭಾರತಕ್ಕೆ ಪದಕ ತಂದು ಕೊಟ್ಟವರ ಪರಿಸ್ಥಿತಿ ಹೀಗಾದರೆ ಇನ್ನು ಜನ ಸಾಮಾನ್ಯರ ಪರಿಸ್ಥಿತಿ ಯಾವ ಲೆಕ್ಕ. ಪುಧಾನ ಮಂತ್ರಿಗಳು ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳುತ್ತಾರೆ. ಇದು ಎಲ್ಲಿದೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯೆ ಸುಮಂಗಲ ಗುತ್ತೆಣ್ಣವರ ಮಾತನಾಡಿ, ಭಾರತಕ್ಕೆ ಪದಕ ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಘಟನೆಯ ವಿರುದ್ಧ ರೈತ ಸಮುದಾಯ ಸಂಯುಕ್ತ ಕಿಸಾನ್ ಮೋರ್ಚಾ ದೇಶ ವ್ಯಾಪಿ ಹೋರಾಟಕ್ಕೆ ಕರೆ ನೀಡಿದೆ. ಇದು ಮಹಿಳಾ ಆತ್ಮ ಗೌರವಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದರು.

ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಕುಸ್ತಿ ಪಟುಗಳ ಹೋರಾಟವನ್ನೇ ಹತ್ತಿಕ್ಕುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಹಾಗಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಇಂದಿರಾ ಕಲಾದಗಿ ಹಾಗೂ ಒಕ್ಕೂಟದ ಸದ್ಯಸರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಮುಂಗಾರು ಹಂಗಾಮು ಪ್ರಾರಂಭ; ಕೃಷಿಕರಿಗೆ ಅಧಿಕಾರಿಗಳಿಂದ ಸಲಹೆ-ಸೂಚನೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...