ಬಾಗಲಕೋಟೆ | ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಡಿವಿಪಿ ಒತ್ತಾಯ

Date:

ದೇಶಕ್ಕೆ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಶಿವರಾಜ್ ಒತ್ತಾಯಿಸಿದರು.

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಹೋಬಳಿ ಉಪ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಡಿವಿಪಿ ತಾಲೂಕು ಅಧ್ಯಕ್ಷ ವಿನೋದ ಕಲಾದಗಿ ಮಾತನಾಡಿ, “ಒಲಂಪಿಕ್ಸ್‌ನಲ್ಲಿ ದೇಶಕ್ಕೆ, ಚಿನ್ನದ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳ ಮೇಲೆನ ಲೈಂಗಿಕ ಕಿರುಕುಳದ ವಿರುದ್ಧ ಪಟುಗಳೇ ಹಲವಾರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಅದು ನೂತನ ಸಂಸತ ಭವನ ಉದ್ಘಾಟನೆ ದಿನದಂದು ಬೆಳಕಿಗೆ ಬಂದಿದೆ. ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟವರ ಪರಿಸ್ಥಿತಿಯೇ ಹೀಗಾದರೆ ಇನ್ನು ಜನಸಾಮಾನ್ಯರ ಪರಿಸ್ಥಿತಿ ಯಾವ ಲೆಕ್ಕ. ಪ್ರಧಾನ ಮಂತ್ರಿಯವರು ಹೇಳುವ ಬೇಟಿ ಬಚಾವೋ ಬೇಟಿ ಪಡಾವೋ ಎಲ್ಲಿದೆ ಎಂಬುದು ಸಂಶಯ ಮೂಡಿಸುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

“ಘಟನೆಯ ವಿರುದ್ಧ ರೈತ ಸಮುದಾಯ ಸಂಯುಕ್ತ ಕಿಸಾನ್ ಮೋರ್ಚಾ ದೇಶ ವ್ಯಾಪ್ತಿ ಹೋರಾಟಕ್ಕೆ ಕರೆ ನೀಡಿದ್ದು, ಮಹಿಳಾ ಆತ್ಮ ಗೌರವಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಆದ ಕಾರಣ ಲೈಂಗಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನಿನ ಕ್ರಮ ತೆಗೆದುಕೊಂಡು ಕುಸ್ತಿ ಪಟುಗಳಿಗೆ ನ್ಯಾಯ ದೊರಕಿಸಿ ಕೊಡಬೇಕು” ಎಂದು ಡಿವಿಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ ಕಲಾದಗಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಮಂಜುನಾಥ ಹೊಸಮನಿ, ರಾಜು ಹೊಸಮನಿ, ಸಾಗರ್ ದಂಡಿನ್, ಅಭಿಷೇಕ್ ಕೋಳಿ, ಲಕ್ಷ್ಮಣ್ ತಳವಾರ್, ಬಸವರಾಜ್ ಮಾದರ್, ಮಾಂತೇಶ್ ಮೈತ್ರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...