ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

Date:

ಅಕ್ಟೋಬರ್‌ 20ರಂದು ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಹು-ಅಂಬೇಡ್ಕರ್ ಪರ್ವ ಎಂಬ ವಿಚಾರ ಸಂಕಿರಣ ಬೀಳಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಜಿಎಲ್‌ಬಿಸಿಐಬಿಯಲ್ಲಿ ಸತ್ಯಶೋಧಕ ಸಂಘದಿಂದ ಛತ್ರಪತಿ ಶಾಹು ಮಹಾರಾಜ ಹಾಗೂ ಬಿ ಆರ್ ಅಂಬೇಡ್ಕರ್‌ ಜಯಂತಿಯ ಅಂಗವಾಗಿ ಅ.20ರಂದು ಬೀಳಗಿಯ ಅಂಜುಮನ್ ಶಾದಿಮಹಲ್‌ನಲ್ಲಿ ನಡೆಯಲಿರುವ ಶಾಹು-ಅಂಬೇಡ್ಕರ್ ಪರ್ವ ಕಾರ್ಯಕ್ರಮದ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಮೀಸಲಾತಿ ತೆಗೆದುಕೊಳ್ಳದೇ ಇರುವವರು ಭಾರತ ದೇಶದಲ್ಲಿ ಯಾರೂ ಉಳಿದಿಲ್ಲ. ಮೀಸಲಾತಿ ಬಡತನ ನಿರ್ಮೂಲಣೆ ಮಾಡಲು ಇರುವ ಸಂವಿಧಾನಾತ್ಮಕ ಕಾರ್ಯಕ್ರಮವಲ್ಲ. ಎಸ್‌ಸಿ/ಎಸ್‌ಟಿ/ಓಬಿಸಿ ಅಂದರೆ ಏನೆನ್ನುವುದನ್ನು ತಿಳಿಸುವದು, ಹಾಗೂ ಈ ಕಾರ್ಯಕ್ರಮ ಮಿಸಲಾತಿ-ಸಾಮಾಜಿಕ ಪ್ರಾತಿನಿಧ್ಯ ಮತ್ತು ಖಾಸಗೀಕರಣದ ಸವಾಲುಗಳನ್ನು ಮನದಟ್ಟು ಮಾಡುವ ವಿಚಾರ ಸಂಕಿರಣದ ಕಾರ್ಯಕ್ರಮವಾಗಿದೆ. ವಿಶೇಷವಾಗಿ ಈ ಕಾರ್ಯಕ್ರದಲ್ಲಿ ನೌಕರರು ಮತ್ತು ವಿದ್ಯಾರ್ಥಿಗಳಿಗೆ ಹೇಚ್ಚು ಅನುಕೂಲಕರವಾಗಲಿದೆ” ಎಂದರು.

ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ ಮಾತನಾಡಿ, “ಈ ವಿಚಾರ ಸಂಕಿರಣದ ಉದ್ಘಾಟನೆಯನ್ನು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ ಟಿ ಪಾಟೀಲ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಹಾಗೂ ಅಹಿಂದ ಜಿಲ್ಲಾಧ್ಯಕ್ಷ ಡಾ. ಸಾಗರ ತೆಕ್ಕೆನ್ನವರ, ವಿಶೇಷ ಉಪನ್ಯಾಸವನ್ನು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ, ಮುಖ್ಯ ಅತಿಥಿಗಳಾಗಿ ಯುವ ಮುಖಂಡರಾದ ಬಸವಪ್ರಭು ಸರನಾಡಗೌಡರ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಎನ್ ಪಾಟೀಲ, ಜಿ.ಪಂ. ಮಾಜಿ ಅಧ್ಯಕ್ಷ ಯಮನಪ್ಪ ರೊಳ್ಳಿ, ಜಿ.ಪಂ. ಮಾಜಿ ಸದಸ್ಯ ಹನಮಂತ ಕಾಖಂಡಕಿ, ತಾ.ಪಂ. ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಅಬುಶಮಾ ಖಾಜಿ ಸೆರಿದಂತೆ ಇನ್ನೂ ಅನೇಕ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕುರಿಪಾಳ್ಯದಲ್ಲಿ ಮನೆಕುಸಿತ : ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ರಾಜು ಬೋರ್ಜಿ, ತಾಲೂಕು ಅಹಿಂದ ಅಧ್ಯಕ್ಷ ಸಿದ್ದು ಸಾರಾವರಿ, ಚಿನ್ನಪ್ಪ ಬಂಡಿವಡ್ಡರ, ಕೊರ್ತಿ ಗ್ರಾ.ಪಂ. ಸದಸ್ಯ ಶಿವು ಚಲವಾದಿ, ಶಿಖಂದರ ಹುದ್ದಾರ, ಖಾಶಿಮಲಿ ಗೋತೆ, ಮಹಮದ್ ರಫೀಕ ಮುಜಾವರ, ತಹಶೀಲ್ದಾರ್‌ ಸ್ವಾಜಾಮೈನುದ್ದೀನ, ಸಂತೋಷ ಕೋಟಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...