ಬಾಗಲಕೋಟೆ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ; ಮೆಳ್ಳಿಗೇರಿಯ ಅಂಕಿತಾ ರಾಜ್ಯಕ್ಕೆ ಪ್ರಥಮ

Date:

2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಅಂಕಿತಾ ಬಸಪ್ಪ ಕೊನ್ನೂರು ಅವರು ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಅಂಕಿತಾ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

- Advertisement -

ಫಲಿತಾಂಶದ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ಅಂಕಿತಾ, ಶೇ.100ರಷ್ಟು ಅಂಕ ಬಂದಿರುವುದಕ್ಕೆ ತುಂಬಾ ಖುಷಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹೆಚ್ಚು ಅಂಕ ಪಡೆಯುವಂತೆ ನನಗೆ ಮನೆಯಲ್ಲಿ ಯಾವುದೇ ಒತ್ತಡ ಇರಲಿಲ್ಲ. ನಾನು ಪ್ರತಿ ನಿತ್ಯ 2-3 ಗಂಟೆ ಮಾತ್ರ ಓದುತ್ತಿದ್ದೆ. ಶಾಲೆಯಲ್ಲಿ ಮಾಡಿದ ಪಾಠವನ್ನು ಅಂದೇ ಓದುವುದು ಮುಖ್ಯ. ಜನವರಿ- ಫೆಬ್ರವರಿ ವೇಳೆಗೆ ಎಲ್ಲ ಪಾಠ್ಯವನ್ನು ಅರ್ಥ ಮಾಡಿಕೊಳ್ಳಬೇಕು. ಪರೀಕ್ಷೆ ಹತ್ತಿರ ಬಂದಾಗ ಅರ್ಥಮಾಡಿಕೊಳ್ಳಲು ಆಗಲ್ಲ. ಶಾಲೆಯಲ್ಲಿ ಎಲ್ಲದಕ್ಕೂ ಬೆಂಬಲ ಕೊಡುತ್ತಿದ್ದರು. ಸ್ಮಾರ್ಟ್ ಕ್ಲಾಸ್ ಮೂಲಕ ಶಿಕ್ಷಕರು ಅರ್ಥ ಮಾಡಿಸುತ್ತಿದ್ದರು” ಎಂದು ಅಂಕಿತಾ ಹೇಳಿದ್ದಾರೆ.

“ನನ್ನ ಫಲಿತಾಂಶದಿಂದ ಅಪ್ಪ-ಅಮ್ಮ ಖುಷಿಯಾಗಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಖುಷಿಯಾಗಿದ್ದಾರೆ. ಮುಂದೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮುಂದುವರಿಯುತ್ತೇನೆ. ಮೊದಲಿನಿಂದ ಸೈನ್ಸ್ ಹಾಗೂ ಗಣಿತದ ಬಗ್ಗೆ ಒಲುವು ಇತ್ತು. ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಆಸೆಯಿದೆ” ಎಂದು ಎಸ್‍ಎಸ್‍ಎಲ್‍ಸಿ ಟಾಪರ್ ಅಂಕಿತಾ ಹೇಳಿದ್ದಾರೆ.

“ನಮ್ಮ ಹಾಸ್ಟೆಲ್‍ನಲ್ಲಿ ಫೋನ್ ಇರಲಿಲ್ಲ. ನನ್ನ ಶಿಕ್ಷಣಕ್ಕೆ ಬೇಕಾದ ವಿಷಯವನ್ನು ಕಂಪ್ಯೂಟರ್‌ನಲ್ಲಿ ಯೂಟ್ಯೂಬ್‍ನಲ್ಲಿ ನೋಡುತ್ತಿದ್ದೆ. ಜತೆಗೆ ಸೋಶಿಯಲ್ ಮೀಡಿಯಾ ಬಳಕೆ ಕಡಿಮೆ ಮಾಡಬೇಕು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...