ಬಾಗಲಕೋಟ | ಬಾಕಿ ಹಣ ಬಿಡುಗಡೆ ಮಾಡುವಂತೆ ಕಬ್ಬು ಬೆಳೆಗಾರರು ಒತ್ತಾಯ

Date:

ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಆಶ್ವಾಸನೆ ನೀಡಿದ್ದರು. ಆದರೆ ಅದಾವುದನ್ನು ಮಾಡಿಲ್ಲ. ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಿ ಕಬ್ಬು ಬೆಳೆಗಾರರಿಗೆ ಕೊಡಬೇಕು” ಎಂದು ರೈತ ಸಂಘದ ಅಧ್ಯಕ್ಷ ಬಸವಂತ ಕಾಂಬಳೆ ಒತ್ತಾಯಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕಳೆದ ವರ್ಷದ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರರವರು ಹಾಗೂ ಜಿಲ್ಲಾಧಿಕಾರಿಗಳು ಕಾರ್ಖಾನೆಗಳಿಂದ ಬರಬೇಕಾಗಿದ್ದ ಬಾಕಿ ಹಣದ ಕುರಿತು ರೈತರು ಹಾಗೂ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಧ್ಯಸ್ಥಿಕೆ ವಹಿಸಿ, ಡಿಸೆಂಬರ್  ಡಿ. 31 ರೊಳಗಾಗಿ ಹಣ ಪಾವತಿಸುವಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.ಹೇಳಿದ ಮಾತನ್ನು ಉಳಿಸಿಕೊಳ್ಳಿ” ಎಂದು ಆಗ್ರಹಿಸಿದರು.

“ನಿರಾಣಿ ಕಾರ್ಖಾನೆ ಬಾಕಿ ಹಣದಲ್ಲಿ ಒಂಬತ್ತು ಕೋಟಿ ಮತ್ತು ಗುಡಗುಂಟಿ ಕಾರ್ಖಾನೆಯ ಮೂರು ಕೋಟಿಯಷ್ಟು ನೀಡಿದ್ದಾರೆ. ರೈತರ ಉಳಿದ ಬಾಕಿ ಹಣವನ್ನು ನೀಡಿಲ್ಲ. ಜನವರಿ ಹದಿನೈದು ಆದರೂ   ರೈತರಿಗೆ ಬಾಕಿ ಹಣ ಕಾರ್ಖಾನೆಯವರು ಪಾವತಿಸಿರುವುದಿಲ್ಲ. ಆದ್ದರಿಂದ ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು” ಎಂದು ಬಸವಂತ ಕಾಂಬಳೆ ಹೇಳಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ದುಂಡಪ್ಪ ಯರಗಟ್ಟಿ ಮಾತನಾಡಿ, “ಈ ಕುರಿತು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದರೆ, ಎಫ್ ಆರ್ ಪಿ ಪ್ರಕಾರ ಮಾತ್ರ ತಾವು ನಡೆದುಕೊಳ್ಳಲು ಸಾಧ್ಯವೆಂದು ತಿಳಿಸಿದ್ದಾರೆ. ಅಲ್ಲದೇ ಎಫ್ ಆರ್ ಪಿ ಕಾಯ್ದೆ ಪ್ರಕಾರ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಹದಿನಾಲ್ಕು ದಿನಗಳ ಒಳಗೆ ಬಿಲ್ ಪಾವತಿಸಬೇಕು. ತಪ್ಪಿದಲ್ಲಿ ಶೇ ಹದಿನೆಂಟರಷ್ಟು ಬಡ್ಡಿ ಸಮೇತ ಬಿಲ್ ಪಾವತಿಸಬೇಕಾಗುತ್ತದೆ. ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

ಪತ್ರಿಕಾ ಗೋಷ್ಠಿಯಲ್ಲಿ  ರೈತ ಮುಖಂಡ ಸುಭಾಷ ಶಿರಭೂರ, ಮಹೇಶ ಪಾಟೀಲ, ಹನಮಂತಗೌಡ ಪಾಟೀಲ, ಕಲ್ಮೇಶ ಹಣಗುಜಿ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...