ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಿಕ್ಷಕ ಶಿಕ್ಷಣ ಇಲಾಖೆಯಲ್ಲಿ ‘ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ’ (ಸಿಆರ್‌ಪಿ) ಕೂಡ ಆಗಿದ್ದಾರೆ. ಅವರು ತಾವು ಕೆಲಸ ಮಾಡುವ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಶಿಕ್ಷಕನನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.