ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

Date:

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್‌ ರಸ್ತೆಯಲ್ಲಿ ನಡೆದಿದೆ.

- Advertisement -

ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ ರಜನಿ ವಂದಕುದರಿ, 20 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅಭಿಷೇಕ್ ದೋತ್ರಿ ಮೃತಪಟ್ಟ ದುರ್ದೈವಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಗರದ ಹೆಲಿಪ್ಯಾಡ್‌ ರಸ್ತೆಯಲ್ಲಿ ಸ್ಕೂಟಿಯಲ್ಲಿದ್ದ ಇಬ್ಬರು ಮಹಿಳೆಯರು ದ್ವಿಚಕ್ರ ವಾಹನದಲ್ಲಿ ಡಿವೈಡರ್ ಕ್ರಾಸ್ ಮಾಡುವ ಸಂದರ್ಭದಲ್ಲಿ ವೇಗವಾಗಿ ಹೊರಟಿದ್ದ ಯಮಾಹಾ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ

ಶೃತಿ ವಂದಕುದರಿ ಬಾಗಲಕೋಟೆ ಬಸವೇಶ್ವರ ದಂತ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದು, ರಜನಿ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು.

ಅವರು ಸ್ಕೂಟಿಯಲ್ಲಿ ಡಿವೈಡರ್ ಕ್ರಾಸ್ ಮಾಡುತ್ತಿದ್ದಾಗ ವೇಗವಾಗಿ ಆರ್15 ಬೈಕ್‌ನಲ್ಲಿ ಬಂದ ಯುವಕರು ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಸಂದೀಪ ಹುಲಸಗೇರಿ ಎಂಬಾತನಿಗೂ ತೀವ್ರತರ ಗಾಯಗಳಾಗಿದ್ದು, ಹಿಂಬದಿ ಕುಳಿತಿದ್ದ ಅಭಿಷೇಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಚಾರಿ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಅಪಘಾತದ ರಭಸಕ್ಕೆ ಬೈಕ್‌ಗಳು ತುಂಡು ತುಂಡಾಗಿದೆ. ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...