ಬಾದಾಮಿ | ಗಣಪನ ಪೂಜಿಸಿದ ಮುಸ್ಲಿಂ ಧರ್ಮಗುರು: ಧಾರ್ಮಿಕ ಸಾಮರಸ್ಯದ ಸಂದೇಶ

Date:

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕಲಾಲ ಖಾಟೀಕ ಸಮಾಜ ಅಭಿವೃದ್ಧಿ ಸಂಘ (ರಿ), ಬಾದಾಮಿ ವತಿಯಿಂದ ಆಯೋಜಿಸಲಾಗಿದ್ದ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಹಜರತ್ ಸೈಯದ್ ಮುಬಾರಕ್ ಬಾದಷಾ ಪೀಠಾಧಿಪತಿಗಳು, ಹಜರತ್ ಸೈಯದ್ ಬಾದಷಾ (ರ.ಹ) ದರ್ಗಾ ಶಕ್ತಿಪೀಠ, ಬಾದಾಮಿ ಅವರು ಭಾಗವಹಿಸಿ, ಗಣಪತಿ ಮೂರ್ತಿಗೆ ಸ್ವತಃ ಪೂಜೆ ಸಲ್ಲಿಸಿದರು.

- Advertisement -

ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದ ಧರ್ಮಗುರುಗಳ ನಡೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು. ಧಾರ್ಮಿಕ ಭಿನ್ನತೆಗಳಿಗಿಂತ ಮಾನವೀಯತೆ, ಪರಸ್ಪರ ಗೌರವ ಮತ್ತು ಸಹೋದರತ್ವವೇ ಮುಖ್ಯ ಎಂಬ ಸಂದೇಶವನ್ನು ಈ ಸಂದರ್ಭ ಸಾರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಪ್ರಸಾದ ಸೇವೆಗೂ ಪೂಜೆ ಸಲ್ಲಿಸಿದ ಹಜರತ್ ಸೈಯದ್ ಮುಬಾರಕ್ ಬಾದಷಾ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಶುಭ ಹಾರೈಸಿದರು. ಅವರ ಈ ನಡೆ ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಯಿತು.

ಬಾದಾಮಿ ಐತಿಹಾಸಿಕವಾಗಿ ವಿವಿಧ ಧರ್ಮ, ಸಂಸ್ಕೃತಿ ಹಾಗೂ ಪರಂಪರೆಗಳು ಜೊತೆಯಾಗಿ ಬೆಳೆದ ನೆಲ. ಇಂತಹ ನೆಲದಲ್ಲಿ ವಿವಿಧ ಸಮುದಾಯಗಳ ಪ್ರಮುಖರು ಪರಸ್ಪರ ಧಾರ್ಮಿಕ ಆಚರಣೆಗಳಿಗೆ ಗೌರವ ನೀಡುವ ಮೂಲಕ ಸೌಹಾರ್ದತೆಯ ವಾತಾವರಣವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಇಂದಿನ ಸಂದರ್ಭದಲ್ಲಿ ಮಹತ್ವ ಪಡೆದುಕೊಂಡಿದೆ.

“ಧರ್ಮಗಳು ಬೇರೆ ಇರಬಹುದು, ಆದರೆ ಮಾನವೀಯತೆ ಒಂದೇ” ಎಂಬ ಆಶಯವನ್ನು ಪ್ರತಿಬಿಂಬಿಸಿದ ಈ ಕಾರ್ಯಕ್ರಮ, ಧಾರ್ಮಿಕ ಸಾಮರಸ್ಯ ಹಾಗೂ ಸಹಬಾಳ್ವೆಗೆ ಮಾದರಿಯಾಯಿತು.

ಭಕ್ತಿ, ಪ್ರೀತಿ, ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಎಲ್ಲರೂ ಒಂದಾಗಿ ಬಾಳುವ ಬಾದಾಮಿಯ ಬಹುತ್ವದ ಸಂಸ್ಕೃತಿಗೆ ಇದು ಹೆಮ್ಮೆಯ ಕ್ಷಣ ಎಂಬ ಅಭಿಪ್ರಾಯಗಳು ವ್ಯಕ್ತವಾದವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...