ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

Date:

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗೊಳಿಸುವುದು ಹಾಗೂ ಹೊಸ ರೈಲು ಮಾರ್ಗಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಹಕಾರ ಒದಗಿಸುವಂತೆ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿ ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಬಾಗಲಕೋಟೆಯಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉಮಾಶ್ರೀ ಅವರನ್ನು ಭೇಟಿ ಮಾಡಿದ ಕುತುಬುದ್ದೀನ್ ಕಾಜಿ ನೇತೃತ್ವದ ರೈಲ್ವೆ ಹೋರಾಟ ಸಮಿತಿಯ ಮುಖಂಡರು, ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ತ್ವರಿತಗೊಳಿಸುವುದು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ಹಲವು ವರ್ಷಗಳಿಂದ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಈ ಮಾರ್ಗಕ್ಕೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಈಗಾಗಲೇ ಒದಗಿಸಿದ್ದು, ಕಾಮಗಾರಿಗೆ ವೇಗ ನೀಡುವಂತೆ ರೈಲ್ವೆ ಇಲಾಖೆಯ ಮೇಲೆ ರಾಜ್ಯ ಸರ್ಕಾರ ಒತ್ತಡ ತರಬೇಕು ಎಂದು ಕುತುಬುದ್ದೀನ್ ಕಾಜಿ ಆಗ್ರಹಿಸಿದರು.

ಇದೇ ವೇಳೆ, ಲೋಕಾಪುರ–ಧಾರವಾಡ ಮಾರ್ಗವಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರವನ್ನು ಸಂಪರ್ಕಿಸುವ ಹೊಸ ರೈಲು ಮಾರ್ಗ ಹಾಗೂ ಆಲಮಟ್ಟಿ–ಕುಷ್ಟಗಿ ರೈಲು ಮಾರ್ಗಗಳ ಅನುಷ್ಠಾನಕ್ಕೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಲೋಕಾಪುರ ಭಾಗದಲ್ಲಿ ರೈಲು ಮಾರ್ಗ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ರೈಲ್ವೆ ಇಲಾಖೆ ಮುಂದಾಗಬೇಕು. ಸರಕು ಸಾಗಣೆಗೆ ನೀಡುವ ಆದ್ಯತೆಯಂತೆಯೇ ಸಾರ್ವಜನಿಕ ಪ್ರಯಾಣಕ್ಕೂ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದ ಜನರ ಬಹುದಿನಗಳ ರೈಲ್ವೆ ಸಂಪರ್ಕದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಹಕಾರ ದೊರಕಿಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಬೇಕು ಎಂದು ಉಮಾಶ್ರೀ ಅವರಿಗೆ ಮನವಿ ಸಲ್ಲಿಸಿದರು.

ನಿಯೋಗ ಕರೆತನ್ನಿ, ಮುಖ್ಯಮಂತ್ರಿಗಳೊಂದಿಗೆ ಚರ್ಚೆಗೆ ಅವಕಾಶ ಕಲ್ಪಿಸುತ್ತೇನೆ: ಉಮಾಶ್ರೀ
ರೈಲ್ವೆ ಹೋರಾಟ ಸಮಿತಿಯ ಮುಖಂಡರ ಬೇಡಿಕೆಗಳನ್ನು ಆಲಿಸಿದ ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಅವರು, ಬಾಗಲಕೋಟೆ ಜಿಲ್ಲೆಯ ನಿಯೋಗವನ್ನು ಕರೆದುಕೊಂಡು ಬರುವಂತೆ ಸೂಚಿಸಿದರು.

ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸಿ, ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ರೈಲ್ವೆ ಮಾರ್ಗಗಳ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಯತ್ನಿಸಲಾಗುವುದು. ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ರಾಜ್ಯ ಸರ್ಕಾರದ ಸಹಕಾರದ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಉತ್ತರ ಕರ್ನಾಟಕದ ರೈಲ್ವೆ ಸಂಪರ್ಕ ಬಲಪಡಿಸುವುದು, ಬಾಕಿ ಕಾಮಗಾರಿಗಳಿಗೆ ವೇಗ ನೀಡುವುದು ಹಾಗೂ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಈ ಸಂದರ್ಭದಲ್ಲಿ ರೈಲ್ವೆ ಹೋರಾಟ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್ ಬಳ್ಳಾರಿ, ಮೈನುದ್ದೀನ್ ಕಾಜಿ, ಜೈಶ್ರೀ ಗುಳಬಾಳ, ಪ್ರೇಮಾ ರಾಥೋಡ್ ಸೇರಿದಂತೆ ಸಮಿತಿಯ ಇತರ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...