ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

Date:

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸುವುದು ಹಾಗೂ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಯೋಜನೆಯ ಮುಂದಿನ ಹಂತಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲು ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ಮುಂದಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳ ರೈತ ಹಾಗೂ ಹೋರಾಟಗಾರರ ಮಹತ್ವದ ಸಭೆ ಬುಧವಾರ ಆಲಮಟ್ಟಿಯಲ್ಲಿ ನಡೆಯಿತು. ಸಭೆಯಲ್ಲಿ ಕೃಷ್ಣಾ ಕೊಳ್ಳದ ನೀರಿನ ಹಕ್ಕು, ಆಲಮಟ್ಟಿ 3ನೇ ಹಂತದ ಯೋಜನೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರಾಜಕಾರಣಿಗಳ ನಿರ್ಲಕ್ಷ್ಯದಿಂದಾಗಿ ಆಲಮಟ್ಟಿ ಯೋಜನೆ ಇಂದಿಗೂ ಸಂಪೂರ್ಣಗೊಂಡಿಲ್ಲ. ಇದರಿಂದ ಕೃಷ್ಣಾ ಕೊಳ್ಳದ ರೈತರು ಮತ್ತೊಮ್ಮೆ ತೀವ್ರ ಹೋರಾಟಕ್ಕೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಆಲಮಟ್ಟಿ ಯೋಜನೆಯ ಪೂರ್ಣತೆಗೆ ಒತ್ತಡ ಹೇರುವ ಉದ್ದೇಶದಿಂದ ವಿಜಯಪುರ ಹಾಗೂ ಬಾಗಲಕೋಟೆ ಸೇರಿದಂತೆ ಅವಳಿ ಜಿಲ್ಲೆಗಳ ಹೋರಾಟಗಾರರ ಸಭೆ ಕರೆಯಲಾಗಿದೆ. ಮುಂದಿನ ಹಂತದಲ್ಲಿ ಹೋರಾಟವನ್ನು ಯಾವ ರೀತಿಯಲ್ಲಿ ಸಂಘಟಿಸಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ರೈತರನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದರು.

ಜಲ ತಜ್ಞ ರಾಜೇಂದ್ರ ಪೊದ್ದಾರ ಹಾಗೂ ನಿವೃತ್ತ ನ್ಯಾಯಮೂರ್ತಿ ಬಿ.ಸಿ. ಬಿರಾದಾರ ಮಾತನಾಡಿ, ಆಲಮಟ್ಟಿ ಯೋಜನೆಗೆ ಸಂಬಂಧಿಸಿದಂತೆ ಒಂದರ ಮೇಲೊಂದರಂತೆ ಆಯೋಗಗಳನ್ನು ರಚಿಸಲಾಗುತ್ತಿದೆ. ಕಾನೂನಾತ್ಮಕ ಅಡೆತಡೆಗಳ ನೆಪದಲ್ಲಿ ಆಲಮಟ್ಟಿ 3ನೇ ಹಂತದ ಯೋಜನೆಯನ್ನು ವಿಳಂಬಗೊಳಿಸುವುದು ಸರಿಯಲ್ಲ ಎಂದು ಹೇಳಿದರು.

ಕೃಷ್ಣಾ ಕೊಳ್ಳದ ಜನಪ್ರತಿನಿಧಿಗಳು ಈ ವಿಚಾರದಲ್ಲಿ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕು. ರೈತರು ಕೂಡ ತಮ್ಮ ನೀರಿನ ಹಕ್ಕಿನ ಬಗ್ಗೆ ಜಾಗೃತರಾಗಿ ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ರೈತ ಮುಖಂಡ ಎಸ್.ವಿ. ಪಾಟೀಲ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸುಪ್ರೀಂ ಕೋರ್ಟ್‌ನಲ್ಲಿನ ವಿಚಾರಣೆಯ ನೆಪದಲ್ಲಿ ಅನಗತ್ಯ ಕಾಲಹರಣ ಮಾಡುತ್ತಿವೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಭೋಗೇಶ ಸೋಲಾಪುರ, ಲಲಿತಾ ಬಿಜ್ಜರ್ಗಿ, ಶ್ರೀನಾಥ್ ಪೂಜಾರಿ, ನೀಲಂಬಿಕಾ ಬಿರಾದಾರ, ಭರತಕುಮಾರ ಎಚ್, ಟಿ, ಎಂ. ಪಡಶೆಟ್ಟಿ, ಸುರೇಶ್ ಬಿಜಾಪುರ, ಹಾಗೂ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಬೆಲೆ ಏರಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಹಾಲಿನ ಬೆಲೆ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ...

ಬಾಗಲಕೋಟೆ | ವಕೀಲ ವೃತ್ತಿ ಯಶಸ್ಸಿಗೆ ನಿರಂತರ ಅಧ್ಯಯನ, ಭಾಷಾ ಪ್ರೌಢಿಮೆ ಅಗತ್ಯ: ಪದ್ಮಾವತಿ ಮಾನೆ

ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ...

ಶೈನ್ ಶೆಟ್ಟಿಯ ‘ಶಂಕರಾಭರಣ’ ಟ್ರೇಲರ್‌ಗೆ ಪ್ರೇಕ್ಷಕರಿಂದ ಮೆಚ್ಚುಗೆ; ನವೆಂಬರ್ 20ಕ್ಕೆ ಸಿನಿಮಾ ಬಿಡುಗಡೆ!

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಜ್ಜಾಗಿರುವ ನಟ...

ವಿಜಯಪುರ | ನ.17, 18ರಂದು ಕಲಾ ಪ್ರತಿಭೋತ್ಸವ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಕ್ಕಳು ಮತ್ತು ಯುವಜನರಲ್ಲಿನ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ...