9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಅಕ್ಟೋಬರ್ 5ರಿಂದ 11ರವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನಾ ಸಪ್ತಾಹದ ಅಂಗವಾಗಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಗಲಿರುಳು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಸರ್ಕಾರ ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಒಂಬತ್ತು ವರ್ಷಗಳಲ್ಲಿ ಹೆಚ್ಚಳ ಕೇವಲ ₹1,500!

ಕಳೆದ ಒಂಬತ್ತು ವರ್ಷಗಳಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ ₹1,500 ಮಾತ್ರ ಹೆಚ್ಚಳವಾಗಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ, ಅದಕ್ಕೆ ತಕ್ಕಂತೆ ಗೌರವಧನ ಹೆಚ್ಚಳವಾಗದಿರುವುದು ಕಾರ್ಯಕರ್ತೆಯರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಇತರ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಗಣನೀಯವಾಗಿ ಹೆಚ್ಚಿಸಲಾಗಿದ್ದರೂ, ಕರ್ನಾಟಕದಲ್ಲಿ ವೇತನ ಹೆಚ್ಚಳದ ಕುರಿತು ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಒಂದು ವರ್ಷದಿಂದ ಗೌರವಧನ ಮತ್ತು ಪ್ರೋತ್ಸಾಹಧನ ನಿಗದಿತ ಸಮಯಕ್ಕೆ ಪಾವತಿಯಾಗದೆ ಕಾರ್ಯಕರ್ತೆಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ಪ್ರೋತ್ಸಾಹಧನ ಬಾಕಿ ಉಳಿದಿದ್ದು, ತಾವು ನಿರ್ವಹಿಸಿದ ಕೆಲಸಕ್ಕೆ ಅನುಗುಣವಾಗಿಯೂ ಪೂರ್ಣ ಪ್ರಮಾಣದ ಪ್ರೋತ್ಸಾಹಧನ ದೊರೆಯುತ್ತಿಲ್ಲ. ಇದರಿಂದ ಪ್ರತಿ ತಿಂಗಳು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ದೂರಿದರು.

ಮೊಬೈಲ್ ಸೌಲಭ್ಯವಿಲ್ಲದೆ ಆ್ಯಪ್ ಬಳಕೆಗೆ ಒತ್ತಡ*
ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಮೊಬೈಲ್ ಸೌಲಭ್ಯ ಒದಗಿಸದೆ, ತಾಂತ್ರಿಕ ತೊಂದರೆಗಳು ಮತ್ತು ಸರ್ವರ್ ಸಮಸ್ಯೆಗಳನ್ನು ಪರಿಹರಿಸದೆ ‘ಸಮಸ್ತ’ ಆ್ಯಪ್ ಮೂಲಕವೇ ಕೆಲಸ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದಕ್ಕೆ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಆಶಾ ಕಾರ್ಯಕರ್ತೆಯರು ತಂತ್ರಜ್ಞಾನಕ್ಕೆ ವಿರೋಧಿಗಳಲ್ಲ. ಆದರೆ, ಅಗತ್ಯ ಮೂಲಸೌಕರ್ಯಗಳಿಲ್ಲದೆ ಮೊಬೈಲ್ ಆ್ಯಪ್‌ಗಳ ಮೂಲಕ ಕೆಲಸ ಮಾಡುವಂತೆ ಒತ್ತಾಯಿಸುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು. ಡಿಜಿಟಲ್ ದಾಖಲಾತಿ ವ್ಯವಸ್ಥೆಯಿಂದಾಗಿ ಒಂದೆಡೆ ಭೌತಿಕ ದಾಖಲೆಗಳನ್ನು ನಿರ್ವಹಿಸಿ, ಮತ್ತೊಂದೆಡೆ ಮೊಬೈಲ್‌ನಲ್ಲಿ ಮಾಹಿತಿ ದಾಖಲಿಸಲು ಹೆಚ್ಚಿನ ಸಮಯ ವ್ಯಯವಾಗುತ್ತಿದೆ. ಇದರಿಂದ ಜನರಿಗೆ ಆರೋಗ್ಯ ಸೇವೆ ಒದಗಿಸುವ ಕಾರ್ಯದ ಮೇಲಿನ ಗಮನವೂ ಕಡಿಮೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಡಿಜಿಟಲೀಕರಣ ಅನಿವಾರ್ಯವಾದರೆ ಕಾರ್ಯಕರ್ತೆಯರಿಗೆ ಸೂಕ್ತ ಮೊಬೈಲ್ ಸೌಲಭ್ಯ ಒದಗಿಸುವುದರ ಜತೆಗೆ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ*
ರಾಜ್ಯ ಸರ್ಕಾರದ ಗೌರವಧನ ಹಾಗೂ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು. ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣವೇ ಕಾರ್ಯಕರ್ತೆಯರ ಖಾತೆಗಳಿಗೆ ಜಮಾ ಮಾಡಬೇಕು. ಪ್ರತಿ ತಿಂಗಳು ಗೌರವಧನ ಮತ್ತು ಪ್ರೋತ್ಸಾಹಧನವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡಬೇಕು. ಸಮಸ್ತ ಸೇರಿದಂತೆ ಮೊಬೈಲ್ ಆಧಾರಿತ ಕೆಲಸ ನಿರ್ವಹಿಸಲು ಅಗತ್ಯವಿರುವ ಮೊಬೈಲ್‌ಗಳನ್ನು ಒದಗಿಸಿ, ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಸಪ್ತಾಹದ ಮೂಲಕ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಆಶಾ ಸಂಘದ ರಾಜ್ಯ ಮುಖಂಡ ಮಲ್ಲಿಕಾರ್ಜುನ ಎಚ್.ಟಿ., ಜಿಲ್ಲಾ ಮುಖಂಡರಾದ ಸೈನಾಜ ಜಂಗಿ, ರುಕ್ಷಣ ನಾಗಠಾಣ, ಮಂಜುಳಾ ಸರಕರಿ, ಭಾರತಿ ಚವ್ಹಾಣ, ಸುರೇಖಾ ಕಾಳೆ, ವಾಸಂತಿ ಪೂಜಾರಿ, ಹನುಮವ್ವ ತಳವಾರ, ಬೋರವ್ವ ಮಾನಂದ, ದರೆಣ್ಣವರ ಹಾಗೂ ಸುನಿತಾ ಜಂಬಗಿ ಸೇರಿದಂತೆ ಹಲವರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ಸಂಸದ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಚಿಕ್ಕಮಗಳೂರು | ಮಾನವ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು; ಹರೀಶ್ ಎನ್.ಆರ್

ಕಳಸ : ಇಂದಿನ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...