ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

Date:

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಜಾನನ ಬಾಲೆ ಅವರು ಗುರುವಾರ ಬಾದಾಮಿ ತಾಲೂಕಿನ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಈ ವೇಳೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಆಸ್ಪತ್ರೆ ಹಾಗೂ ಕುಟುಕನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ವಿದ್ಯುತ್ ಇಲ್ಲದೆ ರೋಗಿಗಳಿಗೆ ತೊಂದರೆ:

ಬಾದಾಮಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದರೂ ಪರ್ಯಾಯ ವ್ಯವಸ್ಥೆಯಾಗಿ ಯುಪಿಎಸ್, ಇನ್ವರ್ಟರ್ ಅಥವಾ ಜನರೇಟರ್ ವ್ಯವಸ್ಥೆ ಇಲ್ಲದಿರುವುದು ಸಿಇಒ ಅವರ ಗಮನಕ್ಕೆ ಬಂದಿತು. ಇದರಿಂದ ಒಳರೋಗಿಗಳು ಹಾಗೂ ತುರ್ತು ಚಿಕಿತ್ಸೆಗಾಗಿ ಆಗಮಿಸುವ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಕಂಡು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಆಸ್ಪತ್ರೆಯಲ್ಲಿ ತುರ್ತು ಸೇವೆಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಕೇಳಿದರು.

ಶಾಲಾ ಮೈದಾನದಲ್ಲಿ ಗಿಡಗಂಟಿ, ಕಸದ ರಾಶಿ:

ನಂತರ ಕೆಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟುಕನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಿಇಒ, ಶಾಲಾ ಆವರಣ ಹಾಗೂ ಆಟದ ಮೈದಾನವನ್ನು ಪರಿಶೀಲಿಸಿದರು. ಈ ವೇಳೆ ಮೈದಾನವು ಗಿಡಗಂಟಿಗಳಿಂದ ಆವೃತವಾಗಿದ್ದು, ಕಸದಿಂದ ಅಸ್ವಚ್ಛವಾಗಿರುವುದು ಕಂಡುಬಂದಿತು. ಅಲ್ಲದೆ, ಶಾಲಾ ಆವರಣದಲ್ಲಿ ದನಕರುಗಳು ಅಡ್ಡಾಡುತ್ತಿರುವುದು ಹಾಗೂ ಮೈದಾನವನ್ನು ಸ್ಥಳೀಯರು ಶೌಚಾಲಯವಾಗಿ ಬಳಸುತ್ತಿರುವುದೂ ಗಮನಕ್ಕೆ ಬಂದಿತು.

ಮಕ್ಕಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಬಾದಾಮಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದರು.

ನಿರ್ಲಕ್ಷ್ಯ ಸಹಿಸುವುದಿಲ್ಲ:

ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಶಾಲಾ ಮಕ್ಕಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಗಜಾನನ ಬಾಲೆ ಎಚ್ಚರಿಕೆ ನೀಡಿದರು.

ನೋಟಿಸ್ ಪಡೆದ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಲಿಖಿತ ವಿವರಣೆ ಸಲ್ಲಿಸಬೇಕು. ಅಲ್ಲದೆ, ಪರಿಶೀಲನೆ ವೇಳೆ ಕಂಡುಬಂದ ಲೋಪಗಳನ್ನು ತಕ್ಷಣ ಸರಿಪಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...