ಬಾದಾಮಿ | ಮನರೇಗಾ ಕಾಯ್ದೆ ತಿದ್ದುಪಡಿ ಮೂಲಕ ಎರಡನೇ ಬಾರಿ ಮಹಾತ್ಮ ಗಾಂಧೀಜಿ ಹತ್ಯೆ: ಶಾಸಕ ಜೆ ಟಿ ಪಾಟೀಲ್‌

Date:

ದೇಶದ ಪ್ರತಿಯೊಂದು ಹಳ್ಳಿಯ ಬಡಜನರು ನಿರುದ್ಯೋಗಿಗಳಾಗದೆ ಆರ್ಥಿಕವಾಗಿ ಶಕ್ತರಾಗಿರಲು ಆಗಿನ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಕೇಂದ್ರದ ಮೋದಿ ಸರ್ಕಾರ ಮನರೇಗಾ ಕಾಯ್ದೆಯನ್ನು ತಿದ್ದುಪಡಿ ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಯೋಜನೆ ಜಾರಿ ಮಾಡುವ ಮೂಲಕ ಮಹಾತ್ಮ ಗಾಂಧೀಜಿಯನ್ನು ಎರಡನೇ ಬಾರಿ ಹತ್ಯೆ ಮಾಡಿದೆ ಎಂದು ಬೀಳಗಿ ಶಾಸಕ ಜೆ ಟಿ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಸಮೀಪ ಹೊಲಗೇರಿ ಗ್ರಾಮದಲ್ಲಿ ನಡೆದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕೇಂದ್ರದ ಬಿಜೆಪಿ ಸರ್ಕಾರ ಬಡವರ ಆರ್ಥಿಕ ಶಕ್ತಿಯನ್ನು ಕಸಿದುಕೊಳ್ಳುವ ಮೂಲಕ ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಳ ಮಾಡಲು ಹೊರಟಿದೆ” ಎಂದು ಆರೋಪಿಸಿದರು.

ಮನರೇಗಾ ಕಾಯ್ದೆ ತಿದ್ದುಪಡಿ ವಿರುದ್ಧ ಆಕ್ರೋಶ

“ಗ್ರಾಮೀಣ ಭಾಗದಲ್ಲಿ ದುಡಿಯುವ ಬಡ ವರ್ಗದ ಜನರ ಕೈಗಳನ್ನು ಕಸಿದುಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಗಾಂಧೀಜಿಯವರ ಗ್ರಾಮಗಳ ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಕನಸನ್ನು ಕೇಂದ್ರ ಸರ್ಕಾರ ನಾಶ ಮಾಡಿದೆ. ತೆರಿಗೆ ವಂಚನೆ, ಐಟಿ ದಾಳಿ, ಇ.ಡಿ ದಾಳಿ ನಡೆಸುವ ಮೂಲಕ ದೇಶದ ವಿವಿಧ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಹತ್ತಿಕ್ಕುವ ಹುನ್ನಾರ ನಡೆಸಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕುಶಾಲನಗರ | ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿ: ಟಿ ಜಿ ಪ್ರೇಮ್ ಕುಮಾರ್

ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ದುಡಿಯುವ ಕೈಗಳಿಗೆ ಕೆಲಸ ಸಿಗುವವರೆಗೂ ಹೋರಾಟ ನಡೆಸೋಣ.

ಕುಮಾರ ಕಕರೆಡ್ಡಿ,ಅಶೋಕ ಕೊಪ್ಪದ, ಪರಶುರಾಮ ಎಂಡಿಗೇರಿ, ನಾರಾಯಣ ತಿಮ್ಮಾಪುರ, ರಮೇಶ ಯಡಹಳ್ಳಿ, ಲಚ್ಚಪ್ಪ ಅರೆಕೇರಿ, ಧರ್ಮಣ್ಣ ಭಗವತಿ, ಸವಿತಾ ನಾಗಪ್ಪನವರ, ಗೀತಾ ಅರಕೇರಿ, ರತ್ನವ್ವ ವಡ್ಡರ, ನಾಗವ್ವ ರೆಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪಕ್ಷದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...