ದಲಿತರ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯ ಹೋರಾಟವನ್ನು ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲಾಗುವುದು ಎಂದು ಡಿಎಸ್‌ಎಸ್ (ಅಂಬೇಡ್ಕರ್‌ವಾದ) ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಯುವರಾಜ ಬಂಡಿ ತಿಳಿಸಿದರು.
ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿಯು ಸಂವಿಧಾನ ವಿರೋಧಿ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸಾವಿರಾರು ಕಾರ್ಯಕರ್ತರು ನಿರಂತರವಾಗಿ ಶ್ರಮಿಸಿದ್ದಾರೆ. ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ತಾಲೂಕು ಘಟಕದ ಡಿಎಸ್‌ಎಸ್ ಅಧ್ಯಕ್ಷ ರವಿ ಅಬ್ಬಿಗೇರಿ “ಶೋಷಿತ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಅಧಿಕಾರ ಹಂಚಿಕೆಯಲ್ಲಿ ಪಾಲುದಾರರನ್ನಾಗಿಸಿಕೊಳ್ಳಬೇಕು. ದಲಿತರ ನೀತಿ ಹಾಗೂ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಪರಿಣಾಮ ಮತ್ತು ಪ್ರಮಾಣದಲ್ಲಿ ಅವುಗಳು ಸೋತಿವೆ” ಎಂದು ಆರೋಪಿಸಿದರು.
ದಲಿತರ ಸಮಗ್ರ ಸಬಲೀಕರಣಕ್ಕೆ ಅನಿರ್ದಿಷ್ಟವಧಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ನಿರ್ಲಕ್ಷ್ಯವನ್ನು ವಿರೋಧಿಸಲು ಸಮರೋಪಾದಿಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿತಿನ್ ಹೊಸಮನಿ, ಪ್ರಕಾಶ ಎಲ್, ಹುಲಿಗಪ್ಪ ವಡ್ಡರ, ಪರಶುರಾಮ ಕಟ್ಟಿಮನಿ, ಕುಮಾರ ನಾಯ್ಕರ್ ಇದ್ದರು.




