ಬಾದಾಮಿ | ಬಾಣಂತಿಯರ ಸಾವಿನ ಸಂಖ್ಯೆ ಏರಿಕೆ: ಬಾಲ್ಯವಿವಾಹದ ಗುಮಾನಿ

Date:

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಬಾಣಂತಿಯರ ಸಾವಿನ ಸಂಖ್ಯೆಯ ಏರಿಕೆ ಆತಂಕಕ್ಕೆ ಕಾರಣವಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಹೆರಿಗೆ ಸಾವುಗಳನ್ನು ತಡೆಯಲು ತುರ್ತು ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಹೆರಿಗೆ ವೇಳೆ ಮೃತಪಟ್ಟ ಮಹಿಳೆಯರಲ್ಲಿ ಹೆಚ್ಚಿನವರು ಕಿರಿಯ ವಯಸ್ಸಿನವರಾಗಿದ್ದು, ಬಾಲ್ಯವಿವಾಹ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆದ್ದರಿಂದ, ಬಾಲ್ಯವಿವಾಹ ತಡೆ ಕುರಿತು ಸಂಬಂಧಿಸಿದ ಇಲಾಖೆಗಳು ಗ್ರಾಮಮಟ್ಟದಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಗರ್ಭಿಣಿಯರ ಆರೈಕೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿರುವುದರಿಂದ ಅವರಿಗೆ ಸಮರ್ಪಕ ತರಬೇತಿ ನೀಡಬೇಕು. ಗ್ರಾಮೀಣ ಪ್ರದೇಶದ ಗರ್ಭಿಣಿಯರು ನಿಯಮಿತವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು” ಎಂದು ಸೂಚಿಸಿದರು.

ಅಗತ್ಯ ಔಷಧಗಳ ಕೊರತೆ ಉಂಟಾಗದಂತೆ ಕ್ರಮವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಹೆರಿಗೆ ನೋವು ಆರಂಭವಾದಾಗ ಸರ್ಕಾರಿ ಆಸ್ಪತ್ರೆಗೆ ಬದಲಾಗಿ ಅಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಸಿಜೇರಿಯನ್ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ದಯಾನಂದ ಕರೆಣ್ಣನವರ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಕೋಣಿ, ತಾಲ್ಲೂಕು ವೈದ್ಯಾಧಿಕಾರಿ ಮಂಜುಳಾ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...