ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

Date:

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ‌ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು ಸಾರ್ವಜನಿಕ, ಶೈಕ್ಷಣಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆಹ್ವಾನ ಪತ್ರಿಕೆಯ ಚಿತ್ರ ವೈರಲ್ ಆಗಿದ್ದು, ನೆಟ್ಟಿಗರು ಹಾಗೂ ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಅವರ ಹೆಸರಿನಲ್ಲಿ ವಿವಿಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ಅಧಿಕೃತ ಆಹ್ವಾನ ಹೊರಡಿಲಾಗಿದೆ. ಅದರಲ್ಲಿ ದಿನಾಂಕ 11-08-2026 (ಮಂಗಳವಾರ) ರಂದು ಬೆಳಿಗ್ಗೆ 10.30 ಕ್ಕೆ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ಕುಲಪತಿಗಳ ವಸತಿಗೃಹದಲ್ಲಿ ‘ಶ್ರೀ ಸತ್ಯನಾರಾಯಣ ಪೂಜೆ, ನವಗ್ರಹ ಶಾಂತಿ ಹೋಮ ಹಾಗೂ ಶ್ರೀ ಮಹಾಗಣಪತಿ ಪೂಜಾ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಅಷ್ಟೇ ಅಲ್ಲದೆ, ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕಾರ್ಮಿಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ವೈಯಕ್ತಿಕವಾಗಿ ಭಾಗವಹಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಉಲ್ಲೇಖಿಸಲಾಗಿದೆ.

ವಿಶ್ವವಿದ್ಯಾಲಯದ ಕುಲಪತಿಗಳ ಈ ಧೋರಣೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಗಳು‌ ವ್ಯಕ್ತವಾಗಿವೆ. ಸರ್ಕಾರಿ ಅನುದಾನದಲ್ಲಿ ನಡೆಯುವ ಹಾಗೂ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಉನ್ನತ ಶಿಕ್ಷಣ ಸಂಸ್ಥೆಯೊಂದರಲ್ಲಿ ಇಂತಹ ಧಾರ್ಮಿಕ ಆಚರಣೆಗಳನ್ನು ನಡೆಸುವುದು ಮತ್ತು ಅದಕ್ಕೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ಆಹ್ವಾನಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗಳು ಎದ್ದಿವೆ.

1001936860

“ವಿಶ್ವವಿದ್ಯಾಲಯಗಳು ವೈಜ್ಞಾನಿಕ ಮನೋಭಾವನೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುವ ಕೇಂದ್ರಗಳಾಗಬೇಕು. ವಿಜ್ಞಾನವನ್ನು ಬೋಧಿಸುವ ಸಂಸ್ಥೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು ಹೋಮ, ಹವನ ಮತ್ತು ನವಗ್ರಹ ಶಾಂತಿ ಪೂಜೆಗಳನ್ನು ಪ್ರಚುರಪಡಿಸುವುದು ವೈಜ್ಞಾನಿಕ ಆಲೋಚನೆಗಳಿಗೆ ಹಿನ್ನೆಡೆ ತರುತ್ತದೆ. ಶಿಕ್ಷಣ ಸಂಸ್ಥೆಗಳ ಅಧಿಕೃತ ವೇದಿಕೆಯಲ್ಲಿ ಇಂತಹ ಆಚರಣೆಗಳು ಸರಿಯಲ್ಲ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

“ಸರ್ಕಾರಿ ಮತ್ತು ಶೈಕ್ಷಣಿಕ ಸಂಸ್ಥೆಗಳು ಎಲ್ಲ ಧರ್ಮ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಸಮಾನವಾದ ಜಾತ್ಯತೀತ ಸ್ಥಳಗಳಾಗಿವೆ. ಕುಲಪತಿಗಳು ತಮ್ಮ ವೈಯಕ್ತಿಕ ವೆಚ್ಚದಲ್ಲಿ ವಸತಿಗೃಹದಲ್ಲಿ ಪೂಜೆ ಮಾಡಿಕೊಳ್ಳುವುದಕ್ಕೆ ಅಭ್ಯಂತರವಿಲ್ಲ, ಆದರೆ ವಿಶ್ವವಿದ್ಯಾಲಯದ ಲೋಗೋ ಹಾಗೂ ಅಧಿಕೃತ ಪತ್ರವನ್ನು ಬಳಸಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಆಹ್ವಾನಿಸಿರುವುದು ಸಂವಿಧಾನದ ಜಾತ್ಯತೀತ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿದ್ಯಾರ್ಥಿಗಳನ್ನು ಅಭ್ಯಾಸ ಮತ್ತು ಸಂಶೋಧನೆಗಳತ್ತ ಗಮನ ಹರಿಸುವಂತೆ ಪ್ರೇರೇಪಿಸಬೇಕಾದ ಆಡಳಿತ ಮಂಡಳಿಯೇ ಪೂಜೆ-ಪುನಸ್ಕಾರಗಳಲ್ಲಿ ಭಾಗವಹಿಸುವಂತೆ ಕರೆ ನೀಡುವುದು ಶೈಕ್ಷಣಿಕ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ. ವಿಶ್ವವಿದ್ಯಾಲಯದ ಸಂಪನ್ಮೂಲಗಳು ವೈಜ್ಞಾನಿಕ ಬೆಳವಣಿಗೆಗೆ ಬಳಕೆಯಾಗಬೇಕೇ ಹೊರತು ಧಾರ್ಮಿಕ ಚಟುವಟಿಕೆಗಳಿಗಲ್ಲ” ಎಂಬ ಆಕ್ಷೇಪಗಳು ಇವೆ.

ಮಾತ್ರವಲ್ಲದೆ, “ಮಾರಮ್ಮನ ಹಬ್ಬ ಆಯೋಜಿಸಿದಾಗ ಕರೆಯಿರಿ ತಪ್ಪದೇ ಊಟಕ್ಕೆ ಬರುತ್ತೇವೆ” ಎಂದು ಕೆಲವರು ಲೇವಡಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಜ್ಯೂನಿಯರ್ಸ್‌ ಮೇಲೆ ಕ್ರೂರ ರ‍್ಯಾಂಗಿಂಗ್; 9 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಬಿಬಿಎ ...

ರಾಜ್ಯದ ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಆಗ್ರಹ; ಎಷ್ಟಿದೆ ಸಾಲ?

ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ...

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....