ಬಾಗಲಕೋಟೆ |ಎಣ್ಣೆಕಾಳು, ದ್ವಿದಳ ಧಾನ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಶೇ.೩೩ರಷ್ಟು ಸಹಾಯಧನ

Date:

ರೈತರು ಹಾಗೂ ಕೃಷಿ ಆಧಾರಿತ ಸಂಸ್ಥೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ೨೦೨೬-೨೭ನೇ ಸಾಲಿನಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಹಾಗೂ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

- Advertisement -

ಈ ಯೋಜನೆಗಳಡಿ ಎಣ್ಣೆಕಾಳು ಮತ್ತು ದ್ವಿದಳ ಧಾನ್ಯಗಳ ಕೊಯ್ಲೋತ್ತರ ನಿರ್ವಹಣೆ, ಸಂಸ್ಕರಣೆ ಹಾಗೂ ಮೌಲ್ಯವರ್ಧನೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಯೋಜನೆಯಡಿ ಸೂರ್ಯಕಾಂತಿ, ಸೋಯಾಅವರೆ, ಎಳ್ಳು ಹಾಗೂ ಶೇಂಗಾ ಬೆಳೆಗಳ ಸಂಸ್ಕರಣಾ ಘಟಕ ಸ್ಥಾಪನೆಗೆ ಅಗತ್ಯವಿರುವ ಯಂತ್ರೋಪಕರಣ ಮತ್ತು ಸಲಕರಣೆಗಳ ಖರೀದಿಗೆ ಅನುಮೋದಿತ ಯೋಜನಾ ವೆಚ್ಚದ ಶೇ.೩೩ರಷ್ಟು ಅಥವಾ ಗರಿಷ್ಠ ₹೯.೯೯ ಲಕ್ಷದವರೆಗೆ ಸಹಾಯಧನ ಒದಗಿಸಲಾಗುತ್ತದೆ.ಅದೇ ರೀತಿ, ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಯೋಜನೆಯಡಿ ದ್ವಿದಳ ಧಾನ್ಯಗಳ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ಘಟಕಗಳನ್ನು ಸ್ಥಾಪಿಸಲು ಯೋಜನಾ ವೆಚ್ಚದ ಶೇ.೩೩ರಷ್ಟು ಅಥವಾ ಗರಿಷ್ಠ ₹೨೫ ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.

ರೈತ ಉತ್ಪಾದಕ ಸಂಸ್ಥೆಗಳು, ಸಹಕಾರ ಸಂಘಗಳು, ನೋಂದಾಯಿತ ಸಂಸ್ಥೆಗಳು ಹಾಗೂ ಅರ್ಹ ವೈಯಕ್ತಿಕ ಫಲಾನುಭವಿಗಳು ನಿಗದಿತ ಅರ್ಹತೆ ಮತ್ತು ಷರತ್ತುಗಳನ್ವಯ ಈ ಯೋಜನೆಗಳ ಸೌಲಭ್ಯ ಪಡೆಯಲು ಅವಕಾಶವಿದೆ.

ಆಸಕ್ತರು ಅಗತ್ಯ ದಾಖಲೆಗಳು ಹಾಗೂ ವಿಸ್ತೃತ ಯೋಜನಾ ವರದಿಯೊಂದಿಗೆ ಡಿಸೆಂಬರ್ ೫ರೊಳಗಾಗಿ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾದರಿ ನಗರ ನಿರ್ಮಾಣಕ್ಕೆ ಆದ್ಯತೆ: ಸಚಿವ ಬಸವರಾಜ ರಾಯರೆಡ್ಡಿ

ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ...

ಉದ್ಯೋಗ ಸ್ಥಳದಲ್ಲಿ ಮಹಿಳೆಯರೊಂದಿಗೆ ಸಂಯಮ, ಜವಾಬ್ದಾರಿಯಿಂದ ವರ್ತಿಸಿ: ಸಂತೋಷ್ ಎಂ.ಎಸ್

ಪುರುಷರು ಉದ್ಯೋಗ ಸ್ಥಳದಲ್ಲಿ ಮಹಿಳೆಯರೊಂದಿಗೆ ಹೆಚ್ಚಿನ ಜವಾಬ್ದಾರಿ, ಸಂಯಮ ಮತ್ತು ಜಾಗೃತಿಯಿಂದ...

ಯುಪಿ ಚುನಾವಣೆ 2027 |ಸೀಟು ಹಂಚಿಕೆ ಮಾತುಕತೆ ನಡುವೆಯೇ ಎಸ್‌ಪಿ ಐದು ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಮಾತುಕತೆ ನಡುವೆಯೇ, ಸಮಾಜವಾದಿ ಪಕ್ಷ ಮಂಗಳವಾರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್ ಪಾರಾಗಲು ಸಾಧ್ಯವೇ?

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ...