ಬಾಗಲಕೋಟೆ | ನನೆಗುದಿಗೆ ಬಿದ್ದ ಯೋಜನೆಗಳ ಸಾಲು: ಕಾಶಪ್ಪನವರ್‌ ಉಸ್ತುವಾರಿಯಿಂದ ಚಿಗುರಿದ ನಿರೀಕ್ಷೆ

Date:

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಅವಕಾಶ ಪಡೆದಿರುವ ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿರುವುದರಿಂದ ಜನರ ನಿರೀಕ್ಷೆಯೂ ಹೆಚ್ಚಿದೆ. ಆದರೆ, ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಸಚಿವರ ಮುಂದಿರುವ ದೊಡ್ಡ ಸವಾಲಾಗಿದೆ.

- Advertisement -

ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರದ ಆರಂಭಿಕ ಅವಧಿಯಲ್ಲಿ ಪಕ್ಕದ ಜಿಲ್ಲೆಯವರಾದ ಎಂ.ಬಿ ಪಾಟೀಲ್ ಅವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡಲಾಗಿತ್ತು. ಇದೀಗ ಜಿಲ್ಲೆಯವರೇ ಆ ಜವಾಬ್ದಾರಿ ವಹಿಸಿಕೊಂಡಿರುವುದರಿಂದ ಜಿಲ್ಲೆಯ ಸಮಸ್ಯೆಗಳಿಗೆ ತಮ್ಮದೇ ಸರ್ಕಾರದಲ್ಲಿ ಧ್ವನಿಯಾಗಿ, ಅಗತ್ಯ ಅನುದಾನ ತರಿಸಿ ಪರಿಹಾರ ಕಂಡುಕೊಳ್ಳುವ ಅವಕಾಶ ಕಾಶಪ್ಪನವರಿಗೆ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಕೃಷ್ಣಾ ಮೇಲ್ದಂಡೆ ಸಂತ್ರಸ್ತರ ಕಣ್ಣೀರು ಒರೆಸುವರೇ?

ಜಿಲ್ಲೆಯ ನೀರಾವರಿ ಭವಿಷ್ಯವನ್ನೇ ಬದಲಿಸುವ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ವೇಗ ನೀಡುವುದು ಮೊದಲ ಆದ್ಯತೆಯಾಗಬೇಕಿದೆ. ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ಸಾವಿರಾರು ರೈತರಿಗೆ ಭೂಸ್ವಾಧೀನ ಪರಿಹಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ.

ರಾಜ್ಯ ಸರ್ಕಾರ ಘೋಷಿಸಿರುವಂತೆ ಒಣಭೂಮಿಗೆ ಎಕರೆಗೆ ₹30 ಲಕ್ಷ ಹಾಗೂ ನೀರಾವರಿ ಭೂಮಿಗೆ ₹40 ಲಕ್ಷ ಪರಿಹಾರ ಪಾವತಿಸಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಒದಗಿಸುವ ನಿಟ್ಟಿನಲ್ಲಿ ಸಚಿವರು ಪ್ರಯತ್ನಿಸಬೇಕಿದೆ.

ಇದರ ಜತೆಗೆ ಬಾಗಲಕೋಟೆ ನಗರದಲ್ಲಿ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಬಾಧಿತವಾಗಿರುವ ಸಂತ್ರಸ್ತರ ಸ್ಥಳಾಂತರವೂ ಪ್ರಮುಖ ಸಮಸ್ಯೆಯಾಗಿದೆ. ಮೂರನೇ ಯುನಿಟ್ ಕಾಮಗಾರಿಗೆ ವೇಗ ದೊರೆತರೆ ಪರಿಹಾರ ವಿತರಣೆ ಹಾಗೂ ಸ್ಥಳಾಂತರ ಪ್ರಕ್ರಿಯೆಗೂ ಚುರುಕು ಬರಲಿದೆ.

ಕಿಲ್ಲಾ ನಡುಗಡ್ಡೆ ಪ್ರದೇಶದ ಸುಮಾರು 1,200 ಮನೆಗಳ ಸ್ಥಳಾಂತರವೂ ಹಲವು ವರ್ಷಗಳಿಂದ ಬಾಕಿಯಿದೆ. ಈ ಪ್ರಕ್ರಿಯೆಗೆ ಮರುಚಾಲನೆ ನೀಡಿ ನಡುಗಡ್ಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಜವಾಬ್ದಾರಿಯೂ ಸಚಿವರ ಮೇಲಿದೆ.

ಬಾದಾಮಿ–ಐಹೊಳೆ: ಸ್ಥಳಾಂತರಕ್ಕೆ ಬೇಕಿದೆ ವೇಗ

ಜಿಲ್ಲೆಯ ಪ್ರವಾಸೋದ್ಯಮದ ಪ್ರಮುಖ ಕೇಂದ್ರಗಳಾದ ಬಾದಾಮಿ ಮತ್ತು ಐಹೊಳೆಯ ಸ್ಮಾರಕಗಳ ಸುತ್ತಮುತ್ತಲಿನ ಮನೆಗಳ ಸ್ಥಳಾಂತರವೂ ದಶಕಗಳಿಂದ ಪೂರ್ಣಗೊಳ್ಳದ ಯೋಜನೆಯಾಗಿದೆ. ಬಾದಾಮಿ ಗುಹಾಂತರ ದೇವಾಲಯಗಳ ಸುತ್ತಮುತ್ತಲಿನ 96 ಕಟ್ಟಡಗಳ ಸ್ಥಳಾಂತರಕ್ಕೆ ಲೇಔಟ್ ಸಿದ್ಧಗೊಂಡಿದೆ. ಫಲಾನುಭವಿಗಳಿಗೆ ನಿವೇಶನ ವಿತರಿಸಿ ಕಟ್ಟಡ ತೆರವು ಪ್ರಕ್ರಿಯೆ ಆರಂಭಿಸಿದರೆ ಸ್ಮಾರಕಗಳ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ.

ಹುನಗುಂದ ತಾಲೂಕಿನ ಐಹೊಳೆಯಲ್ಲಿ 134 ಮನೆಗಳ ಸ್ಥಳಾಂತರಕ್ಕಾಗಿ ಜಮೀನು ಖರೀದಿಸಲಾಗಿದ್ದರೂ ಲೇಔಟ್ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಯಾಗಬೇಕಿದೆ. ಸರ್ಕಾರದ ಮಟ್ಟದಲ್ಲಿ ಸಚಿವರು ಮುತುವರ್ಜಿ ವಹಿಸಿದರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ಥಳಾಂತರ ಪ್ರಕ್ರಿಯೆಗೆ ಅಂತ್ಯ ಹಾಡಬಹುದು.

ರಸ್ತೆ ಗುಂಡಿಗಳಿಗೆ ಮುಕ್ತಿ ಯಾವಾಗ?

ಜಿಲ್ಲೆಯಾದ್ಯಂತ ರಾಜ್ಯ ಹೆದ್ದಾರಿ, ಸಂಪರ್ಕ ರಸ್ತೆ ಹಾಗೂ ಗ್ರಾಮೀಣ ರಸ್ತೆಗಳ ಸ್ಥಿತಿ ಹದಗೆಟ್ಟಿದೆ. ಬಾಗಲಕೋಟೆ ನಗರದಲ್ಲೇ ನೂರಕ್ಕೂ ಹೆಚ್ಚು ರಸ್ತೆ ಗುಂಡಿಗಳಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾವಿರಾರು ಗುಂಡಿಗಳು ವಾಹನ ಸವಾರರನ್ನು ಕಾಡುತ್ತಿವೆ.

ಬೇಸಿಗೆ ಅವಧಿಯಲ್ಲೇ ರಸ್ತೆ ಗುಂಡಿಗಳನ್ನು ಗುರುತಿಸಿ ದುರಸ್ತಿ ಮಾಡಬೇಕಾಗಿದ್ದರೂ ಸಮರ್ಪಕವಾಗಿ ಕಾಮಗಾರಿ ನಡೆದಿಲ್ಲ. ಮಳೆಗಾಲ ಆರಂಭವಾಗಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ರಸ್ತೆ ಗುಂಡಿ ಮುಚ್ಚುವ ವಿಶೇಷ ಅಭಿಯಾನ ಕೈಗೊಂಡು ಏಕಕಾಲದಲ್ಲಿ ನಗರ ಹಾಗೂ ಗ್ರಾಮೀಣ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕಿದೆ.

ಜವಳಿ ಪಾರ್ಕ್; ನೇಕಾರರ ಬದುಕಿಗೆ ಹೊಸ ಭರವಸೆ

ಸಣ್ಣ ಕೈಗಾರಿಕೆ ಖಾತೆ ಸಚಿವರಾಗಿರುವ ವಿಜಯಾನಂದ ಕಾಶಪ್ಪನವರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದು ದೊಡ್ಡ ಅವಕಾಶವಾಗಿದೆ. ಇಳಕಲ್ ನೇಕಾರಿಕೆ, ರಬಕವಿ-ಬನಹಟ್ಟಿ, ತೇರದಾಳ, ಮಹಾಲಿಂಗಪುರ, ಗುಳೇದಗುಡ್ಡ, ಅಮೀನಗಡ, ಸೂಳೇಭಾವಿ ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳು ನೇಕಾರಿಕೆ ಉದ್ಯಮಕ್ಕೆ ಹೆಸರುವಾಸಿಯಾಗಿವೆ.

ಒಂದು ಕಾಲದಲ್ಲಿ ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡುತ್ತಿದ್ದ ಜವಳಿ ಉದ್ಯಮ ಇಂದು ಸಂಕಷ್ಟದಲ್ಲಿದೆ. ಉದ್ಯಮ ಕುಸಿತದಿಂದ ನೇಕಾರರು ಪರ್ಯಾಯ ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಾದರೆ ನೇಕಾರಿಕೆಗೆ ಆಧುನಿಕ ತಂತ್ರಜ್ಞಾನ, ಮಾರುಕಟ್ಟೆ, ಉದ್ಯೋಗ ಹಾಗೂ ಹೂಡಿಕೆಗೆ ಉತ್ತೇಜನ ದೊರೆಯುವ ಸಾಧ್ಯತೆಯಿದೆ. ಹೀಗಾಗಿ ಸಣ್ಣ ಕೈಗಾರಿಕೆ ಸಚಿವರಾಗಿರುವ ಕಾಶಪ್ಪನವರು ತಮ್ಮ ಜಿಲ್ಲೆಯ ನೇಕಾರರ ಬದುಕಿಗೆ ಹೊಸ ದಿಕ್ಕು ನೀಡುವ ನಿಟ್ಟಿನಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಆದ್ಯತೆ ನೀಡಬೇಕಿದೆ.

ನಿರೀಕ್ಷೆ ದೊಡ್ಡದು, ಸವಾಲುಗಳೂ ದೊಡ್ಡವು

ನೀರಾವರಿ ಯೋಜನೆ, ಭೂಸ್ವಾಧೀನ ಪರಿಹಾರ, ಸಂತ್ರಸ್ತರ ಪುನರ್ವಸತಿ, ಐತಿಹಾಸಿಕ ಸ್ಮಾರಕಗಳ ಸುತ್ತಮುತ್ತಲಿನ ಸ್ಥಳಾಂತರ, ರಸ್ತೆ ದುರಸ್ತಿ ಹಾಗೂ ಜವಳಿ ಉದ್ಯಮದ ಪುನಶ್ಚೇತನ—ಹೀಗೆ ಜಿಲ್ಲೆಯ ಮುಂದೆ ಹಲವು ಗಂಭೀರ ಸವಾಲುಗಳಿವೆ.

ಜಿಲ್ಲೆಯವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಜನರ ನಿರೀಕ್ಷೆ ಸಹಜವಾಗಿಯೇ ಹೆಚ್ಚಿದೆ. ಅಧಿಕಾರಾವಧಿಯಲ್ಲಿ ಈ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಮಟ್ಟದಲ್ಲಿ ಅಗತ್ಯ ಅನುದಾನ ಮತ್ತು ಯೋಜನೆಗಳನ್ನು ತಂದು ಕಾರ್ಯರೂಪಕ್ಕೆ ತಂದರೆ ಮಾತ್ರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಮಹತ್ವ ಮತ್ತಷ್ಟು ಹೆಚ್ಚಲಿದೆ. ಇದೀಗ ಸಚಿವ ವಿಜಯಾನಂದ ಕಾಶಪ್ಪನವರ ಮುಂದೆ ಸವಾಲುಗಳ ಸರಮಾಲೆಯೇ ಇದ್ದು, ಪರಿಹಾರದ ವೇಗ ಎಷ್ಟಿರಲಿದೆ ಎಂಬುದನ್ನು ಜಿಲ್ಲೆಯ ಜನತೆ ಕಾದು ನೋಡುತ್ತಿದ್ದಾರೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...