ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

Date:

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ ಎಂಬುವವರು ಈ ಬಗ್ಗೆ ದೂರು ನೀಡಿದ್ದು, ಬಾಗಲಕೋಟ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುನಗ ಗ್ರಾಮದ  ಸರ್ವೆ ನಂ. 250/1 ರಲ್ಲಿರುವ 08ಎಕರೆ ಜಮೀನಿನ ಪಿ.ಟಿ ಶೀಟ್ ಮಾಡಿಕೊಡುವ ಸಲುವಾಗಿ ಸರ್ವೆಯರ್ ಮಹಾಂತೇಶ್ ಕವಳಿಕಟ್ಟಿ ಈ ಮೊದಲು 28,000ರೂ. ಫೀ ಎಂದು ತೆಗೆದುಕೊಂಡಿದ್ದರು.

ಕೆಲಸ ಮಾಡಿ ಕೊಟ್ಟಿರಲಿಲ್ಲ ನಂತರ ದೂರು ದಾರ ಅಣೇಶಿ ಪಿ.ಟಿ ಶೀಟ್ ಬಗ್ಗೆ ವಿಚಾರಿಸಿದಾಗ ಇನ್ನೂ 37,000 ರೂ. ಲಂಚಕ್ಕೆ ಬೇಡಿಕೆ ಇಟ್ಟು, ಸದ್ಯ 15,000ರೂಗಳನ್ನೂ ತಂದುಕೊಡಲು ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರೋಪಿ ಮಹಾಂತೇಶ್ ಕವಳಿಕಟ್ಟಿ ಕಚೇರಿಯಲ್ಲಿ 15 ಸಾವಿರ ಲಂಚದ ಹಣ ಪಡೆದುಕೊಳ್ಳುವಾಗ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹನುಮಂತರಾಯ ಐಪಿಎಸ್ ಪೊಲೀಸ್ ಅಧೀಕ್ಷಕರು ಮತ್ತು ಕರ್ನಾಟಕ ಲೋಕಾಯುಕ್ತರ ಮಾರ್ಗದರ್ಶನದಲ್ಲಿ, ಪುಷ್ಪಲತಾ ಎನ್‌ಡಿಎಸ್‌ಪಿ ಕರ್ನಾಟಕ ಲೋಕಾಯುಕ್ತರ ನೇತೃತ್ವದ ತಂಡ ಟ್ರ್ಯಾಪ್ ಪ್ರಕ್ರಿಯೆಯನ್ನು ನಡೆಸಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...