ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

Date:

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಆಸಕ್ತ ಉದ್ಯಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉದ್ಯಮಿಗಳು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಈ ಯೋಜನೆಯಡಿ ಬ್ಯಾಂಕ್ ಮೂಲಕ ಯೋಜನಾ ವೆಚ್ಚದ ಶೇ.90ರಷ್ಟು ಸಾಲ ಸೌಲಭ್ಯ ದೊರೆಯಲಿದ್ದು, ಫಲಾನುಭವಿಯು ಶೇ.10ರಷ್ಟು ಸ್ವಂತ ವಂತಿಗೆ ಭರಿಸಬೇಕಾಗುತ್ತದೆ. ಯೋಜನೆಗೆ ಅನುಮೋದನೆಯಾದ ನಂತರ ಘಟಕಗಳಿಗೆ ಕೇಂದ್ರ ಸರ್ಕಾರದಿಂದ ಶೇ.35ರಷ್ಟು ಮತ್ತು ರಾಜ್ಯ ಸರ್ಕಾರದಿಂದ ಶೇ.15ರಷ್ಟು ಸೇರಿ ಒಟ್ಟು ಶೇ.50ರಷ್ಟು ಸಹಾಯಧನ ಪಡೆಯುವ ಅವಕಾಶವಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ತೋಟಗಾರಿಕೆ ಆಧಾರಿತ ಉದ್ಯಮಗಳು, ಸಹಕಾರಿ ಸಂಸ್ಥೆಗಳು, ರೈತ ಉತ್ಪಾದಕರ ಸಂಘಗಳು(ಎಫ್‌ಪಿಒ), ಸ್ವಸಹಾಯ ಸಂಘಗಳು(ಎಸ್‌ಎಚ್‌ಜಿ), ಖಾಸಗಿ ಲಿಮಿಟೆಡ್ ಕಂಪನಿಗಳು ಸೇರಿದಂತೆ ಅರ್ಹ ಘಟಕಗಳು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರಿಶಿನ ಪುಡಿ, ಮಸಾಲೆ ಪದಾರ್ಥಗಳ ಸಂಸ್ಕರಣೆ, ಚಿಪ್ಸ್ ತಯಾರಿಕೆ, ಅಣಬೆ ಮೌಲ್ಯವರ್ಧನೆ, ಗಿಡಮೂಲಿಕೆ ಹಾಗೂ ಹರ್ಬಲ್ ಉತ್ಪನ್ನಗಳ ತಯಾರಿಕೆ, ಜೇನು ಸಂಸ್ಕರಣೆ, ಕೋಲ್ಡ್ ಸ್ಟೋರೇಜ್, ಉಪ್ಪಿನಕಾಯಿ, ಹಣ್ಣಿನ ಜ್ಯೂಸ್, ವಿವಿಧ ಸೊಪ್ಪಿನ ಪುಡಿಗಳು, ವ್ಯಾಕ್ಯೂಮ್ ಫ್ರೈಡ್ ಚಿಪ್ಸ್, ಸಾಸ್, ಕೆಚಪ್ ಹಾಗೂ ತೆಂಗಿನ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಯೋಜನೆಯಡಿ ಸಹಾಯಧನ ಲಭ್ಯವಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ? ಗದಗ | ಯುವಜನತೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು: ಎಸ್ ವ್ಹಿ ಸಂಕನೂರ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸುಜಾತಾ(7847841435), ಪೂಜಾರಿ (9741403143), ಶಂಕರಗೌಡ (9886711550), ಭಪ್ರಿ (9845256456), ರಂಗಪ್ಪ ಹಂದಿಗುಂದಿ (8147921582), ಇನಾಯತ್ ಲಾನಧಾಪ್ (8884112284), ಸುಧೀರ ಕುಲಕರ್ಣಿ (8130097949), ಸಂದೀಪಕುಮಾರ (9964082001), ಮೊಯಿನ್ ಜಮಖಂಡಿ (9481878610) ಹಾಗೂ ವಿಜಯಲಕ್ಷ್ಮೀ ಪಾಟೀಲ (8618099490) ಅವರನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...