ಬಾಗಲಕೋಟೆ | ʼಕಾಯಕವೇ ಕೈಲಾಸʼವೆಂದು ಮನುಕುಲಕ್ಕೆ ಸಂದೇಶ ಸಾರಿದವರು ಬಸವಣ್ಣ: ವೀರಣ್ಣ ಚರಂತಿಮಠ

Date:

ಕಾಯಕವೇ ಕೈಲಾಸ ಹಾಗೂ ದಾಸೋಹ ಪರಂಪರೆಯನ್ನು ಮನುಕುಲಕ್ಕೆ ಸಾರಿದ ವಿಶ್ವಗುರು ಬಸವಣ್ಣನವರ ತತ್ವ ಆದರ್ಶಗಳು, ಚಿಂತನೆಗಳು ಇಂದಿಗೂ ಮಾನವ ಕುಲಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ಮಾಜಿ ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಹೇಳಿದರು.

- Advertisement -

ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಶ್ರೀ ಕಣವಿ ವೀರಭದ್ರೇಶ್ವರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಡೆದ ಜಗಜ್ಯೋತಿ ಮಹಾತ್ಮ ಬಸವಣ್ಣನವರ ಜಯಂತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ದತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣ. ಅವರು ಕಾಯಕವೇ ಕೈಲಾಸ ಎಂಬ ಸಂದೇಶ ಸಾರಿದ, ದಾಸೋಹ ಪರಂಪರೆಯನ್ನು ಜಗತ್ತಿಗೆ ಕೊಡುಗೆಯಾಗಿಸಿ ವಿಶ್ವಗುರುವಾದರು. ಬಸವಣ್ಣನವರ ತತ್ವ ಆದರ್ಶಗಳು, ಚಿಂತನೆಗಳು ಇಂದಿಗೂ ಮಾನವ ಕುಲಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ. ʼದಯವೇ ಧರ್ಮದ ಮೂಲವಯ್ಯ, ದಯವಿಲ್ಲದ ಧರ್ಮ ಯಾವುದಯ್ಯ ದಯೆವೇ ಬೇಕು ಸಕಲ ಪ್ರಾಣಿಗಳಲ್ಲಿʼ ಎಂದು ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ಬಸವಣ್ಣನವರು” ಎಂದರು.

ಇದನ್ನೂ ಓದಿ> ಬಾಗಲಕೋಟೆ | ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ: ಸಿದ್ದರಾಮಯ್ಯ ತಿರುಗೇಟು

ಟೀಕಿನಮಠದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, “ಕಳಬೇಡ, ಕೋಲಬೇಡ… ಹುಸಿಯ ನುಡಿಯಲೂ ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ. ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ ಇದೇ ಅಂತರಂಗ ಶುದ್ದಿ ಇದೇ ಬಹಿರಂಗ ಶುದ್ದಿʼ ಎಂದು ತಮ್ಮ ವಚನಗಳಲ್ಲಿ ಬದುಕಿನ ಸಾರವನ್ನು ತಿಳಿಸಿದವರು ಬಸವಣ್ಣನವರು. ಕರ್ನಾಟಕದ ಪಾಲಿಗೆ ಹನ್ನೆರಡನೇ ಶತಮಾನ ಎಂಬುದು ಬಹಳ ಮಹತ್ವದ್ದು, ಸಮಾಜದಲ್ಲಿ ಹೊಸ ಚಿಂತನೆ ರೂಪಗೊಂಡ ಕಾಲವದು. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ವಿಶಿಷ್ಟವಾದ ಕಾಲಘಟ್ಟವದು. ʼಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ ಇವ ನಮ್ಮವನೆಂದೆನಿಸಯ್ಯಾ ಕೂಡಲ ಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯಾʼ ಎಂಬ ವಚನ ಪ್ರಸ್ತುತ ಕಾಲಕ್ಕೂ ಸೂಕ್ತವಾದ್ದದ್ದು” ಎಂದರು.

ಇದನ್ನೂ ಜೋದಿ>ಬಾಗಲಕೋಟೆ | ಡಾ. ಬಿ ಆರ್‌ ಅಂಬೇಡ್ಕರ್ ಸಮಾನತೆಯ ಹರಿಕಾರ: ದಮ್ಮ ಪಾಲ ಬಂತೇಜಿ

ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿಯ ಶ್ರೀ ಬೀಳೂರ ಗುರುಬಸವ ಮಂದಿರದಲ್ಲಿ ಪೂಜೆ ಸಲ್ಲಿಸಿ ಸಕಲ ವಾದ್ಯ ವೈಭವಗಳೊಂದಿಗೆ ಆರಂಭವಾದ ಭಾವಚಿತ್ರ ಮೆರವಣಿಗೆ ಟೀಕಿನಮಠ ಮುಂದೆ ಹಾಯ್ದು ಬೀಳೂರ ಶ್ರೀ ಗುರುಬಸವ ಮಂದಿರ ತಲುಪಿ ಅಂತ್ಯಗೊಂಡಿತು. ಬಣ್ಣ ಬಣ್ಣದಿಂದ ಶೃಂಗರಿಸಿದ ನೂರಾರು ಎತ್ತುಗಳು ಮೆರವಣಿಗೆಯ ಉದ್ದಕ್ಕೂ ನೆರೆದ ಜನರ ಗಮನ ಸೆಳೆದವು.

67d73183 a811 4b88 87c6 37cd3d0dd76d

ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಕಚೇರಿಯಲ್ಲಿ ಬಸವಣ್ಣನಮೂರ್ತಿ ಹಾಗೂ ವಚನ ಸಂಪುಟಗಳನ್ನು ಪಲ್ಲಕ್ಕಿಯಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಸಂಘದ ಕೇಂದ್ರ ಕಚೇರಿಯಿಂದ ಪಲ್ಲಕ್ಕಿ ಉತ್ಸವ ಪ್ರಾರಂಭವಾಗಿ ಭವ್ಯ ಮೆರವಣಿಗೆಯೊಂದಿಗೆ ಅಂತ್ಯಗೊಂಡಿತು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಜಿ ಎನ್ ಪಾಟೀಲ, ಕಣವಿ ವೀರಭದ್ರೇಶ್ವರ ಟ್ರಸ್ಟ್ ಅಧ್ಯಕ್ಷ ಪ್ರಕಾಶ ರೇವಡಿಗಾರ, ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕುಮಾರಸ್ವಾಮಿ ಹಿರೇಮಠ(ಚಿತ್ತರಗಿ), ಬಸವರಾಜ ಇಂಡಿ, ಬಸವರಾಜು ಮುಕುಪಿ, ಮಲ್ಲಿಕಾರ್ಜುನ ಮಠ, ಸಂಗಣ್ಣ ಶಿರೂರ, ರಾಮಣ್ಣ ಜುಮನಾಳ, ಮಹೇಶ ಕಕರೆಡ್ಡಿ, ಮಲ್ಲಿಕಾರ್ಜುನ ಹಂಡಿ, ಚಂದ್ರಶೇಖರ ಶೆಟ್ಟರ, ವಿರೇಶ ಉಪ್ಪಿನ, ಗುರುಬಸವ ಸೂಳಿಬಾವಿ, ರಾಜು ಪಾಟೀಲ, ಮಹಾಂತೇಶ ಶೆಟ್ಟರ, ವಿಜಯಕುಮಾರ ಅಂಗಡಿ, ಅಶೋಕ ಕರಡಿ, ಶಿವಾನಂದ ಶಹಬಾದಿ, ವೀರಣ್ಣ ಹಲಕುರ್ಕಿ, ಸುರೇಶಬಾಬು ನಿಡಗುಂದಿ, ರವಿ ಸರದೇಸಾಯಿ, ಪ್ರಭುಸ್ವಾಮಿ ಸರಗಣಾಚಾರಿ ಸೇರಿದಂತೆ ಅಕ್ಕನ ಬಳಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸಾವಿರಾರು ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...