ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

Date:

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ ಗ್ರಾಹಕರ ಸಹಕಾರದಿಂದ ಇಂದು ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿದೆ ಎಂದು ಬಿಟಿಡಿಎ ಅಧ್ಯಕ್ಷ ಹಾಗೂ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.

- Advertisement -

ಬಾಗಲಕೋಟೆ ನಗರದ ಬಾಗಲಕೋಟೆ ಯೂನಿಯನ್ ಆಫ್ ಮರ್ಚಂಟ್ಸ್ ಅಂಡ್ ಎಂಟ್ರಪ್ರೆನರ್ಸ್ ಅಸೋಸಿಯೇಷನ್ (ಬೂಮಾ) ವತಿಯಿಂದ ಆಯೋಜಿಸಿದ್ದ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕಿನ ನೂತನ ನಿರ್ದೇಶಕರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

1983ರಲ್ಲಿ ಹಿರಿಯರ ನೇತೃತ್ವದಲ್ಲಿ ಬ್ಯಾಂಕಿನ ಆಡಳಿತದ ಜವಾಬ್ದಾರಿ ವಹಿಸಿಕೊಂಡ ಬಳಿಕ, ಎಲ್ಲರ ಸಹಕಾರ ಮತ್ತು ಹಿತಾಸಕ್ತಿಗೆ ಆದ್ಯತೆ ನೀಡುತ್ತಾ ಬ್ಯಾಂಕನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಾಗಿದೆ. ಇಂದು ಬ್ಯಾಂಕ್ ಐದು ಜಿಲ್ಲೆಗಳಲ್ಲಿ ಕಾರ್ಯಕ್ಷೇತ್ರ ವಿಸ್ತರಿಸಿಕೊಂಡಿದ್ದು, ಕಾಲಕ್ಕೆ ತಕ್ಕಂತೆ ಆಧುನಿಕ ತಂತ್ರಜ್ಞಾನ ಹಾಗೂ ಹೊಸ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಬಾಗಲಕೋಟೆ ಮುಳುಗಡೆಯಾದ ಬಳಿಕ ನಗರದ ವಾಣಿಜ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ವಾಣಿಜ್ಯ ಚಟುವಟಿಕೆಗಳ ಪುನರುತ್ಥಾನಕ್ಕಾಗಿ ಬೂಮಾ ಸಂಘಟನೆಯು ಒಂದೇ ಕಡೆ 200 ಎಕರೆ ಜಾಗದಲ್ಲಿ ನಿವೇಶನಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದೆ. ಹಿಂದಿನ ಶಾಸಕ ದಿವಂಗತ ಎಚ್.ವೈ. ಮೇಟಿ ಅವರು ಕೂಡ ನಗರದ ವಾಣಿಜ್ಯ ಕ್ಷೇತ್ರವನ್ನು ಪುನಶ್ಚೇತನಗೊಳಿಸಲು ಸಾಕಷ್ಟು ಪ್ರಯತ್ನಿಸಿದ್ದರು.ವ್ಯಾಪಾರಸ್ಥರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಿಟಿಡಿಎ ವತಿಯಿಂದಲೂ ಸಾಧ್ಯವಾದ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಬ್ಯಾಂಕಿನ ನೂತನ ನಿರ್ದೇಶಕ ಆನಂದ ಎಸ್. ಜಿಗಜಿನ್ನಿ ಅವರು ಸನ್ಮಾನಿತರ ಪರವಾಗಿ ಮಾತನಾಡಿ, ನಗರದ ಬಹುತೇಕ ವ್ಯಾಪಾರಸ್ಥರು ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕಿನ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಇದರಿಂದ ಬಾಗಲಕೋಟೆಯ ವಾಣಿಜ್ಯ ಚಟುವಟಿಕೆಗಳ ಬೆಳವಣಿಗೆಗೆ ನೆರವಾಗಿದೆ ಎಂದು ಹೇಳಿದರು.

ಪ್ರಕಾಶ ತಪಶೆಟ್ಟಿ ಅವರು ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಬ್ಯಾಂಕಿನ ಅಭಿವೃದ್ಧಿ ನಿರಂತರವಾಗಿ ಮೇಲ್ಮುಖವಾಗಿ ಸಾಗುತ್ತಿದೆ. ಕಾಲಕ್ಕೆ ತಕ್ಕಂತೆ ಬ್ಯಾಂಕಿನ ವಹಿವಾಟನ್ನು ಆಧುನೀಕರಣಗೊಳಿಸಿ ಗ್ರಾಹಕರಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದು ಶ್ಲಾಘಿಸಿದರು. ತಮ್ಮ ಮೇಲೆ ವಿಶ್ವಾಸವಿಟ್ಟು ನಿರ್ದೇಶಕರನ್ನಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಬ್ಯಾಂಕಿನ ಅಭಿವೃದ್ಧಿಗಾಗಿ ಎಲ್ಲರ ಆಶಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೂಮಾ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಬ್ಯಾಂಕ್ ಮತ್ತು ಬೂಮಾ ಸಂಘಟನೆಗಳು ನಗರದ ವ್ಯಾಪಾರಸ್ಥರು ಹಾಗೂ ಉದ್ಯಮಿಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಬೂಮಾ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಅಮೃತಕರ ಮಾತನಾಡಿ, ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ಹಾಗೂ ನಗರದ ವ್ಯಾಪಾರಸ್ಥರ ನಡುವೆ ಅವಿನಾಭಾವ ಸಂಬಂಧವಿದೆ. ಬಾಗಲಕೋಟೆಯ ವ್ಯಾಪಾರಸ್ಥರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೂರನೇ ಯುನಿಟ್‌ನಲ್ಲಿ ಏಕೀಕೃತ ಮಾರುಕಟ್ಟೆ ಪ್ರದೇಶ ಅಭಿವೃದ್ಧಿಪಡಿಸುವ ಯೋಜನೆಗೆ ಪ್ರಕಾಶ ತಪಶೆಟ್ಟಿ ಅವರು ನಿರಂತರ ಪ್ರಯತ್ನ ನಡೆಸಿದ್ದಾರೆ. ಈ ಯೋಜನೆ ಸರ್ಕಾರದ ಮಟ್ಟದಲ್ಲಿ ಜಾರಿಯ ಹಂತದಲ್ಲಿದೆ ಎಂದು ತಿಳಿಸಿದರು.

ಬೂಮಾ ಉಪಾಧ್ಯಕ್ಷ ಶ್ರೀನಿವಾಸ ಬಳ್ಳಾರಿ, ಜಂಟಿ ಕಾರ್ಯದರ್ಶಿ ಬಾಳು ಉಳ್ಳಾಗಡ್ಡಿ, ರಾಜು ಕುಕರೇಜಾ, ಸುನೀಲ ಕಲಬುರ್ಗಿ, ಶಂಕರ ತಪಶೆಟ್ಟಿ, ಪುಕರಾಜ ಬೇತಾಳ, ಸಿದ್ದು ಪಟ್ಟಣಶೆಟ್ಟಿ, ಆಂಜನೇಯ ಕಾಗೆ, ಮಸಾಬ ದೊಡ್ಡಮನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...