ಬಾಗಲಕೋಟೆ | ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ: ಗಮನ ಸೆಳೆದ ಡಿಸಿ, ಸಿಇಒ

Date:

ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಬೈಕ್ ರ‍್ಯಾಲಿ ಮೂಲಕ ಸಂಚರಿಸಿ ಗಮನ ಸೆಳೆದರು.‌

- Advertisement -

ಬಾಗಲಕೋಟೆ ಜಿಲ್ಲಾ ಸ್ವೀಪ್ ಹಾಗೂ ಜಿಲ್ಲಾ ನೌಕರರ ಸಂಘದ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಬೈಕ್ ರ‍್ಯಾಲಿ ಮೂಲಕ ಮತದಾರರ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಚಾಲನೆ ನೀಡಿದರು. ನಂತರ ಬೈಕ್‌ನಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬೈಕ್ ರ‍್ಯಾಲಿ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ಬಸ್ ನಿಲ್ದಾಣ, ಎಲ್‌ಐಸಿ ವೃತ್ತ, ಭಾರತೀಯ ಸ್ಟೇಟ್ ಬ್ಯಾಂಕ್, ಜಿಲ್ಲಾ ಆಸ್ಪತ್ರೆ, ಕಾಳಿದಾಸ ಸರ್ಕಲ್, ವಿದ್ಯಾಗಿರಿ ಸರ್ಕಲ್, ವಿದ್ಯಾಗಿರಿ ಮೂರನೇ ಕ್ರಾಸ್, ಅಯೋಧ್ಯ ಹೋಟೆಲ್, ಮುಚಖಂಡಿ ಕ್ರಾಸ್, ಕೃಷ್ಣಾ ಟಾಕೀಜ್, ವಲ್ಲಭಾಯಿ ಚೌಕ, ಬಸವೇಶ್ವರ ಸರ್ಕಲ್, ರೈಲ್ವೆ ಸ್ಟೇಷನ್, ರೋಟರಿ ಸರ್ಕಲ್ ಹಾಗೂ ಎಪಿಎಂಸಿ ಕ್ರಾಸ್ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾ ನಿರ್ದೇಶಕ ಅಲ್ಲಮಪ್ರಭು, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಯೋಜನಾ ಸಹಾಯಕ ಭೀಮಪ್ಪ ತಳವಾರ, ಸಹಾಯಕ ನಿರ್ದೇಶಕ ಎಸ್ ಎಂ ಕಾಂಬಳೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಂಗಾವಿ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳಾದ ಎಂ ಬಿ ಬಳ್ಳಾರಿ, ಎಸ್ ವಿ ಸತ್ಯರೆಡ್ಡಿ, ವಿಠಲ ವಾಲಿಕಾರ, ಗೋಪಾಲ ನೀಲನಾಯಕ, ಬಿ ಸಿ ಹೊಸಳ್ಳಿ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್‌ನ ವಾಲ್ಮೀಕಿ ನಾಯಕರ ಗೈರು: ನಿರ್ಲಕ್ಷ್ಯವೇ? ಬಣ ಬಡಿದಾಟವೇ?

ಬೈಕ್ ರ‍್ಯಾಲಿಯಲ್ಲಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಯ ನೌಕರರು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಪಾಲ್ಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ರ‍್ಯಾಲಿಯಲ್ಲಿ ಮತದಾನ ಜಾಗೃತಿಯ ಘೋಷಣಾ ಫಲಕಗಳನ್ನು ಪ್ರದರ್ಶಿಸುವ ಮೂಲಕ ಕೂಗಲಾಯಿತು. ನಿಮ್ಮ ಹಕ್ಕು, ನಿಮ್ಮ ಧ್ವನಿ ನಿಮ್ಮ ಕರ್ತವ್ಯ, ಆಶೆ ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಿ. ನಿಮ್ಮ ಮತ ನಿಮ್ಮ ಭವಿಷ್ಯ, ವೋಟ್ ಮಾಡಿದವನೇ ಹೀರೋ, ನಿಮ್ಮ ನಡೆ ಮತಗಟ್ಟೆ ಕಡೆ ಘೋಷಣೆಗಳನ್ನು ಕೂಗಿದರು. ರ‍್ಯಾಲಿ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆಚರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...