ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

Date:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಎಚ್.ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಣಕ್ಕಿಳಿಸಲು ಆಡಳಿತಾರೂಢ ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಪಕ್ಷವು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯ ನಂತರ, ಕುಟುಂಬದ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳು ಶಮನಗೊಂಡಿವೆ. ಉಮೇಶ್ ಮೇಟಿಗೆ ಟಿಕೆಟ್‌ ಕೊಡಲು ಮೇಟಿ ಕುಟುಂಬದಲ್ಲಿ ಒಮ್ಮತದ ಸಮ್ಮತಿ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಸ್ಥಾನವನ್ನು ತಮ್ಮದೇ ಕುಟುಂಬಕ್ಕೆ ನೀಡಬೇಕೆಂದು ಶಾಮನೂರು ಕುಟುಂಬ ಪಟ್ಟು ಹಿಡಿದಿದೆ. ಇನ್ನೊಂದೆಡೆ, ಅಲ್ಪಸಂಖ್ಯಾತ ನಾಯಕರು, ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ, ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂದು ಒತ್ತಾಯಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ 27 ವರ್ಷದ ಮೊಮ್ಮಗ ಸಮರ್ಥ್ ಶಾಮನೂರು, ಪಕ್ಷವು ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸುವ ಮೊದಲೇ ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ರಮವು ಅಲ್ಪಸಂಖ್ಯಾತ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಶಿವಶಂಕರಪ್ಪ ಅವರು ತಮ್ಮ ಅವಧಿಯ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಅಭ್ಯರ್ಥಿಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರೆಂದು ಕೆಲವು ನಾಯಕರು ಹೇಳುತ್ತಿದ್ದಾರೆ.

ಸಮರ್ಥ್ ಅವರು ನಾಮಪತ್ರ ಸಲ್ಲಿಸಿರುವುದನ್ನು ಲಘುವಾಗಿ ಪರಿಗಣಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಅದೊಂದು ಶುಭ ದಿನವಾಗಿದ್ದರಿಂದ ಮಾತ್ರ ನಾಮಪತ್ರ ಸಲ್ಲಿಸಲಾಗಿದೆ ಎಂಬುದಾಗಿ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ (ಸಮರ್ಥ್ ತಂದೆ) ಸ್ಪಷ್ಟಪಡಿಸಿದ್ದಾರೆ. ಪಕ್ಷವು ಬೇರೆ ನಿರ್ಧಾರ ಕೈಗೊಂಡರೆ ನಾಮಪತ್ರವನ್ನು ಹಿಂಪಡೆಯುತ್ತಾರೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ, 85,000 ಮುಸ್ಲಿಂ ಮತದಾರರನ್ನು ಹೊಂದಿರುವ ದಾವಣಗೆರೆ ದಕ್ಷಿಣ ಕ್ಷೇತ್ರವು ಅಲ್ಪಸಂಖ್ಯಾತರಿಗೆ ಪ್ರಬಲ ಹಕ್ಕು ಇರುವ ಕೆಲವೇ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಮುಸ್ಲಿಂ ನಾಯಕರು ವಾದಿಸಿದ್ದಾರೆ. ಹೆಚ್ಚಿನ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಪಟ್ಟು ಹಿಡಿದಿದ್ದಾರೆ. ಆದಾಗ್ಯೂ, ಮತಗಳ ವಿಭಜನೆಯನ್ನು ತಪ್ಪಿಸಲು ಈ ಸಮಸ್ಯೆಯು ಸೌಹಾರ್ದಯುತವಾಗಿ ಬಗೆಹರಿಯಲಿದೆ ಎಂಬ ಆಶಾವಾದವನ್ನು ಮುಸ್ಲಿಂ ನಾಯಕರು ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ಎರಡು ದಿನಗಳಿಂದ ಅಲ್ಪಸಂಖ್ಯಾತ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. “ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತನ ಅಭಿಪ್ರಾಯವೂ ನಮಗೆ ಮುಖ್ಯವಾಗಿರುವುದರಿಂದ ನಾವು ಸುದೀರ್ಘವಾಗಿ ಚರ್ಚಿಸಲು ಬಯಸಿದ್ದೆವು. ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...