ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15ನೇ ಸುತ್ತಿನಲ್ಲಿ 9555 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಮೇಟಿ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು, ನಾಯಕರ ಫೋಟೋಗಳನ್ನು ಹಿಡಿದು ಜಯಘೋಷ ಕೂಗುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಕಾಂಗ್ರೆಸ್ ಅಭ್ಯರ್ಥಿ ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆವವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು, ಏಪ್ರಿಲ್ 9ರಂದು ಮತದಾನ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಹಾಗೂ ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದರು.




