ಬಾಗಲಕೋಟೆ | ದಲಿತ ಬಹುಜನ ಸಂಘಟನೆಗಳ ಏಕೀಕರಣಕ್ಕೆ ಚೇತನ್‌ ಅಹಿಂಸ ಮುಂದಾಳತ್ವ

Date:

ರಾಜ್ಯದಲ್ಲಿ ಸಮಾಜಮುಖಿ ಶಕ್ತಿಗಳನ್ನು ಒಂದೇ ವೇದಿಕೆಯಡಿ ತರಲು ಹೊಸ ರಾಜಕೀಯ ಹಾಗೂ ಸಾಮಾಜಿಕ ಸಂಘಟನಾ ಪ್ರಯತ್ನ ಆರಂಭಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸ ತಿಳಿಸಿದ್ದಾರೆ.

- Advertisement -

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದಲಿತರು, ಬಹುಜನರು ಹಾಗೂ ಸಮಾಜಪರ ಚಿಂತನೆ ಹೊಂದಿರುವ ವಿವಿಧ ಸಂಘಟನೆಗಳ ಮುಖಂಡರನ್ನು ಒಗ್ಗೂಡಿಸಿ ಬಲಿಷ್ಠ ಸಂಘಟನೆ ರೂಪಿಸುವ ಉದ್ದೇಶ ಹೊಂದಿದ್ದು, ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪೂರ್ವಭಾವಿ ಸಭೆಗಳು ನಡೆಯುತ್ತಿದೆ. ಮುಂದಿನ ಹಂತವಾಗಿ 2027ರ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುವುದು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, “ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಭಾವಿ ವಲಯಗಳು ರೈತರ ಭೂಮಿಯನ್ನು ವಿವಿಧ ಯೋಜನೆಗಳ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ, ಕೃಷಿ ಯೋಗ್ಯ ಫಲವತ್ತಾದ ಭೂಮಿ ಮತ್ತು ಬಯಲು ಪ್ರದೇಶಗಳನ್ನು ಸಂರಕ್ಷಿಸುವ ಅಗತ್ಯವಿದ್ದು, ರೈತರ ಭೂ ಹಕ್ಕುಗಳಿಗೆ ಧಕ್ಕೆಯಾಗುವ ಯಾವುದೇ ಕ್ರಮಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಭೂ ಕಬಳಿಕೆ ಮತ್ತು ಭೂ ಬಳಕೆಯಲ್ಲಿನ ಅಸಮತೋಲನದ ಪ್ರಶ್ನೆಗಳನ್ನು ಜನರ ಮುಂದೆ ತಂದು, ರೈತರ ಪರವಾದ ಹೋರಾಟಗಳನ್ನು ಮತ್ತಷ್ಟು ಬಲಪಡಿಸಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...