ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ; ಫಲಿಸಿತು ದಶಕಗಳ ಬೇಡಿಕೆ

Date:

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮೊದಲ ವರ್ಷದ ತರಗತಿಗಳು ಆರಂಭಗೊಂಡಿವೆ. ಇದರೊಂದಿಗೆ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣದ ಹೊಸ ಅಧ್ಯಾಯ ಆರಂಭವಾಗಿದೆ.

ನವನಗರದ ಎರಡನೇ ಯುನಿಟ್‌ನ 88ನೇ ಸೆಕ್ಟರ್‌ನಲ್ಲಿರುವ ಸರ್ಕಾರಿ ಕಟ್ಟಡದಲ್ಲಿ ಕಾಲೇಜು ತಾತ್ಕಾಲಿಕವಾಗಿ ಕಾರ್ಯಾರಂಭ ಮಾಡಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೂಲಕ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ 93 ವಿದ್ಯಾರ್ಥಿಗಳು ಪ್ರವೇಶ ಪಡೆದು ವೈದ್ಯಕೀಯ ಶಿಕ್ಷಣಕ್ಕೆ ಅಡಿಯಿಟ್ಟಿದ್ದಾರೆ.

- Advertisement -

ಮೂಲಸೌಕರ್ಯಕ್ಕೆ ಆದ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಕಾಲೇಜು ಆರಂಭಕ್ಕೆ ಭಾರತೀಯ ವೈದ್ಯಕೀಯ ಮಂಡಳಿಯಿಂದ (ಎನ್‌ಎಂಸಿ) ಅನುಮೋದನೆ ದೊರೆತಿದ್ದು, ಆರಂಭಿಕ ಹಂತದಲ್ಲಿಯೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರಸ್ತುತ ಅನಾಟಮಿ, ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿ ವಿಭಾಗಗಳಲ್ಲಿ ಬೋಧನಾ ಚಟುವಟಿಕೆಗಳು ಆರಂಭಗೊಂಡಿವೆ.

ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ನಾಲ್ಕು ಬೃಹತ್ ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಒಂದು ಕೊಠಡಿ ಸಿದ್ಧಗೊಂಡಿದ್ದು, ಅಲ್ಲಿ ತರಗತಿಗಳು ನಡೆಯುತ್ತಿವೆ. ಇನ್ನುಳಿದ ಮೂರು ಕೊಠಡಿಗಳು ಒಂದು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಾಲೇಜಿನಲ್ಲಿ ಸಭಾಂಗಣ, ಮ್ಯೂಸಿಯಂ ಹಾಗೂ ಗ್ರಂಥಾಲಯದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

68 ವೈದ್ಯರ ನೇಮಕಕ್ಕೆ ಸಿದ್ಧತೆ

ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಅಗತ್ಯವಾದ ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೂ ಸರ್ಕಾರ ಚಾಲನೆ ನೀಡಿದೆ. ಬೋಧನೆಗಾಗಿ ಒಟ್ಟು 68 ವೈದ್ಯರ ಅಗತ್ಯವಿದ್ದು, ಈಗಾಗಲೇ ಸಂದರ್ಶನ ಪ್ರಕ್ರಿಯೆ ಪೂರ್ಣಗೊಂಡಿದೆ. ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕವಾದರೆ ಬೋಧನಾ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ.

ಇದರ ಜತೆಗೆ ಎರಡನೇ ಯುನಿಟ್‌ನಲ್ಲಿಯೇ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ವಸತಿ ನಿಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

400 ಕೋಟಿ ರೂ. ವೆಚ್ಚದಲ್ಲಿ ಭವಿಷ್ಯದ ಕ್ಯಾಂಪಸ್

ಸದ್ಯ ತಾತ್ಕಾಲಿಕ ಕಟ್ಟಡದಲ್ಲಿ ಆರಂಭಗೊಂಡಿರುವ ಮೆಡಿಕಲ್ ಕಾಲೇಜಿಗೆ ನವನಗರದ ಮೊದಲ ಯುನಿಟ್‌ನ 1 ಮತ್ತು 13ನೇ ಸೆಕ್ಟರ್‌ಗಳ ವ್ಯಾಪ್ತಿಯ 33 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಬೃಹತ್ ಕಟ್ಟಡ ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರ ಇದಕ್ಕಾಗಿ 400 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಕೈಗೆತ್ತಿಕೊಳ್ಳುವ ಯೋಜನೆಯಿದೆ.

ಬೃಹತ್ ಕ್ಯಾಂಪಸ್ ನಿರ್ಮಾಣಗೊಂಡ ಬಳಿಕ ವೈದ್ಯಕೀಯ ಶಿಕ್ಷಣಕ್ಕೆ ಅಗತ್ಯವಾದ ಆಧುನಿಕ ಸೌಲಭ್ಯಗಳು ಒಂದೇ ಆವರಣದಲ್ಲಿ ಲಭ್ಯವಾಗಲಿವೆ. ಇದರೊಂದಿಗೆ ನವನಗರದ ಮೊದಲ ಯುನಿಟ್ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳಿಗೂ ಹೊಸ ವೇಗ ಸಿಗುವ ನಿರೀಕ್ಷೆಯಿದೆ.

ಜಿಲ್ಲಾಸ್ಪತ್ರೆಯೇ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಯ ಕೇಂದ್ರ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸಲಿರುವ ವೈದ್ಯಕೀಯ ಕಾಲೇಜಿಗೆ ಜಿಲ್ಲಾಸ್ಪತ್ರೆಯನ್ನು ಸಂಯೋಜಿಸಲಾಗಿದೆ. ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದ ಪ್ರಾಯೋಗಿಕ ತರಬೇತಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಪಡೆಯಲಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ 12 ಹಾಗೂ ಮೆಡಿಕಲ್ ಕಾಲೇಜಿನಲ್ಲಿ 8 ವಿಭಾಗಗಳು ಆರಂಭಗೊಳ್ಳಲಿವೆ. ಎಂಬಿಬಿಎಸ್ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿದಂತೆ, ವೈದ್ಯಕೀಯ ತರಬೇತಿಯ ಭಾಗವಾಗಿ ರೋಗಿಗಳ ಚಿಕಿತ್ಸಾ ಸೇವೆಯಲ್ಲಿಯೂ ಅವರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ. ಮುಂದಿನ ದಿನಗಳಲ್ಲಿ ಅಗತ್ಯ ಮೂಲಸೌಕರ್ಯಗಳು ಪೂರ್ಣಗೊಂಡರೆ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್‌ಗಳನ್ನು ಆರಂಭಿಸಲು ಅವಕಾಶ ದೊರೆಯಲಿದೆ.

ವೈದ್ಯಕೀಯ ಸೇವೆಗೂ ಶಿಕ್ಷಣಕ್ಕೂ ಹೊಸ ಬಲ:

ಬಾಗಲಕೋಟೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗಿರುವುದು ಕೇವಲ ಮತ್ತೊಂದು ಶಿಕ್ಷಣ ಸಂಸ್ಥೆಯ ಉದಯವಲ್ಲ. ಜಿಲ್ಲೆಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶ ವಿಸ್ತರಿಸುವುದರ ಜೊತೆಗೆ, ಭವಿಷ್ಯದಲ್ಲಿ ತಜ್ಞ ವೈದ್ಯರ ಲಭ್ಯತೆ ಹೆಚ್ಚಿಸಲು ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ನೆರವಾಗುವ ಮಹತ್ವದ ಬೆಳವಣಿಗೆಯಾಗಿದೆ.

ಇದುವರೆಗೆ ಉನ್ನತ ವೈದ್ಯಕೀಯ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಗಳನ್ನು ಅವಲಂಬಿಸಬೇಕಾಗಿದ್ದ ಸ್ಥಳೀಯ ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲಿಯೇ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಂತಾಗಿದೆ. ಕಾಲೇಜಿನ ಪೂರ್ಣ ಪ್ರಮಾಣದ ಕಟ್ಟಡ, ಸಿಬ್ಬಂದಿ ನೇಮಕಾತಿ ಹಾಗೂ ವೈದ್ಯಕೀಯ ವಿಭಾಗಗಳ ವಿಸ್ತರಣೆ ಸಮರ್ಪಕವಾಗಿ ನಡೆದರೆ ಬಾಗಲಕೋಟೆ ಜಿಲ್ಲೆ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯ ಪ್ರಮುಖ ಕೇಂದ್ರವಾಗಿ ಬೆಳೆಯುವ ನಿರೀಕ್ಷೆಯಿದೆ.

ಸದ್ಯ 93 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡಿರುವ ಈ ವೈದ್ಯಕೀಯ ಪಯಣ ಮುಂದಿನ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಎಷ್ಟರಮಟ್ಟಿಗೆ ಹೊಸ ಶಕ್ತಿ ತುಂಬಲಿದೆ ಎಂಬುದು ಅದರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕಾರ್ಯನಿರ್ವಹಣೆಯ ಮೇಲೆ ಅವಲಂಬಿತವಾಗಿದೆ.

WhatsApp Image 2025 02 05 at 18.09.20 1
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌ ರೈತನಿಗಿಲ್ಲ ಲಾಭ!

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ...

ಅರಕಲಗೂಡು | ನ.26ರಂದು ‘ಸಹಬಾಳ್ವೆ ಉದ್ಯಾನವನ’ ಲೋಕಾರ್ಪಣೆ: ಎ.ಟಿ. ರಾಮಸ್ವಾಮಿ

ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಸಾಮಾಜಿಕ ಸಹಬಾಳ್ವೆಯ ಮಹತ್ವವನ್ನು...

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...