ಬಾಗಲಕೋಟೆ | ನೀರಾವರಿ ಕಾಲುವೆ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಿ:‌ ವಿರುಪಾಕ್ಷಯ್ಯ ಪ. ಹಿರೇಮಠ

Date:

ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳಿಂದ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ನದಿಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದ್ದರೂ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮೂಲಕ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಆದ್ದರಿಂದ ಕಾಲುವೆಗಳನ್ನು ತಕ್ಷಣ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ, ಉತ್ತರ ಪ್ರಾಂತದ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ವಿರುಪಾಕ್ಷಯ್ಯ ಪ. ಹಿರೇಮಠ ಆಗ್ರಹಿಸಿದ್ದಾರೆ.

- Advertisement -

ಮಳೆಯ ಕೊರತೆಯಿಂದ ರೈತರು ಜಮೀನುಗಳಲ್ಲಿ ಬಿತ್ತನೆ ಮಾಡಿರುವ ವಿವಿಧ ಬೆಳೆಗಳು ಸಮರ್ಪಕವಾಗಿ ಮೊಳಕೆಯೊಡೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಈಗಾಗಲೇ ರೈತರು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ನೀರಿನ ಕೊರತೆ ಮುಂದುವರೆದರೆ ಬೆಳೆಗಳು ಒಣಗಿ ರೈತರ ಸಂಪೂರ್ಣ ಕೃಷಿ ವೆಚ್ಚ ವ್ಯರ್ಥವಾಗುವ ಆತಂಕ ಎದುರಾಗಿದೆ. ಇನ್ನು ಹಲವು ಕಾಲುವೆಗಳಲ್ಲಿ ಮುಳ್ಳು-ಕಂಟಿ, ಕೊಳಚೆ ಹಾಗೂ ಹೂಳು ತುಂಬಿಕೊಂಡಿರುವುದರಿಂದ ನೀರು ಸರಾಗವಾಗಿ ಹರಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ನದಿಗಳಲ್ಲಿ ಲಭ್ಯವಿರುವ ನೀರು ಕಾಲುವೆಗಳ ಕೊನೆಭಾಗದ ಜಮೀನುಗಳಿಗೆ ತಲುಪುತ್ತಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

“ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕಾಲುವೆಗಳ ಸ್ಥಿತಿಗತಿ ಪರಿಶೀಲಿಸಿ, ಮುಳ್ಳು-ಕಂಟಿ, ಹೂಳು ಹಾಗೂ ಕೊಳಚೆಯನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ನದಿಗಳಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಾಲುವೆಗಳ ಕೊನೆಭಾಗದವರೆಗೂ ನೀರು ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿದ್ದೀರಾ? ಸ್ವಾತಂತ್ರ್ಯ ಹೋರಾಟದಲ್ಲಿ ಅಂಬೇಡ್ಕರ್‌ ಪಾತ್ರ: ರಾಜಕೀಯ ಸ್ವಾತಂತ್ರ್ಯದಿಂದ ಸಾಮಾಜಿಕ ವಿಮೋಚನೆಯವರೆಗೆ…

“ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಂಡು ರೈತರ ಬೆಳೆಗಳನ್ನು ಉಳಿಸಲು ಮುಂದಾಗಬೇಕು. ಕಾಲುವೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರದೆ ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ವಿರುಪಾಕ್ಷಯ್ಯ ಪ. ಹಿರೇಮಠ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP)...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ...