ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

Date:

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ 190 ಕಿ.ಮೀ ಉದ್ದದ ಕಾರು ಜಾಗೃತಿ ರ್ಯಾಲಿ ಆಯೋಜಿಸಲಾಯಿತು.

- Advertisement -

ವಿಶ್ವ ಪೋಲಿಯೋ ಮುಕ್ತ ದಿನಾಚರಣೆಯ ಅಂಗವಾಗಿ ನಡೆದ ಈ ಅಭಿಯಾನವು ಮಕ್ಕಳ ಆರೋಗ್ಯದ ರಕ್ಷಣೆ ಮತ್ತು ಪೋಲಿಯೋ ನಿರ್ಮೂಲನೆಯ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬಾಗಲಕೋಟೆಯಿಂದ ಆರಂಭಗೊಂಡ ರ್ಯಾಲಿಯು ಮುಧೋಳ, ಜಮಖಂಡಿ, ರಾಮತೀರ್ಥ ಮಾರ್ಗವಾಗಿ ವಿಜಯಪುರ ತಲುಪಿತು. ಸುಮಾರು 190 ಕಿ.ಮೀ ಸಂಚರಿಸಿದ ರ್ಯಾಲಿಯ ಮೂಲಕ ಪೋಲಿಯೋ ನಿರ್ಮೂಲನೆಗೆ ನಿರಂತರ ಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವನ್ನು ಸಾರಲಾಯಿತು.

ವಿದ್ಯಾರ್ಥಿಗಳಿಂದಲೂ ಜಾಗೃತಿ ಅಭಿಯಾನಕಾರು ರ್ಯಾಲಿಯ ಜೊತೆಗೆ ಬಾಗಲಕೋಟೆ ನಗರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ರೋಟರಿ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ಮಕ್ಕಳ ಆರೋಗ್ಯ, ಪೋಲಿಯೋ ತಡೆಗಟ್ಟುವಿಕೆ ಹಾಗೂ ರೋಗ ನಿರ್ಮೂಲನೆಗೆ ಜನರ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿದರು.

ಪೋಲಿಯೋ ನಿರ್ಮೂಲನೆಗಾಗಿ ಆರೋಗ್ಯ ಜಾಗೃತಿಯನ್ನು ಜನಸಾಮಾನ್ಯರ ಬದುಕಿನ ಭಾಗವಾಗಿಸಬೇಕು. ಮಕ್ಕಳಿಗೆ ಅಗತ್ಯವಿರುವ ಲಸಿಕೆಗಳನ್ನು ಕೊಡಿಸುವುದು ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಸಹಕರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ರೋಟರಿ ಕ್ಲಬ್ ಬಾಗಲಕೋಟೆಯ ಅಧ್ಯಕ್ಷ ವಿಜಯಕುಮಾರ ಹೊಸೂರ, ಕಾರ್ಯದರ್ಶಿ ಡಾ. ಅವಿನಾಶ ಕಟ್ಟಿಮನಿ, ಖಜಾಂಚಿ ತುಕಾರಾಮ್ ಟಿ.ಎನ್. ಹಾಗೂ ಹಿರಿಯ ರೋಟರಿಯನ್ನರಾದ ಡಾ. ಗಿರೀಶ ಮಾಸೂರಕರ, ಚಂದ್ರಶೇಖರ ಕಟ್ಟೇಗೇರಿ, ಅಶೋಕ ಶಿರಬೂರ, ಶಿವಕುಮಾರ ನಂದಿಕೋಲಮಠ ಸೇರಿದಂತೆ ಕ್ಲಬ್‌ನ ಹಲವು ಸದಸ್ಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬಾಗೇಪಲ್ಲಿ | ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಹಕರಿಸಲಿ: ಅನಿಲ್‌ಕುಮಾರ್ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿರುವ ಹಣಕಾಸು ಅಕ್ರಮಗಳ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...