ಬಾಗಲಕೋಟೆ | ಮತದಾರರ ಪಟ್ಟಿ ಪರಿಷ್ಕರಣೆ ನಿಖರವಾಗಿ ನಡೆಸಿ: ಜಿಲ್ಲಾಧಿಕಾರಿ ಸೂಚನೆ

Date:

ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಗಾರ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿ ವೀಕ್ಷಣೆ ಮಾಡಿ ಮಾತನಾಡಿ, “ಎಸ್ಐಆರ್ ಪ್ರಕ್ರಿಯೆಗೆ ತರಬೇತಿ ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಸಂಪೂರ್ಣವಾಗಿ ಪಡೆದುಕೊಂಡು ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ದೋಷ ರಹಿತವಾಗಿ ಕೈಗೊಳ್ಳುವ ಉದ್ದೇಶದಿಂದ ಚುನಾವಣಾ ಆಯೋಗ ನಿರ್ದೇಶನದಂತೆ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳಿಂದ ನೇಮಕಗೊಂಡ ಬೂತ್ ಮಟ್ಟದ ಏಜೆಂಟ್‌ಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ಶಿವಂ ಪ್ರಕರಣದ ಬಳಿಕ ಮತ್ತೊಂದು ಶಾಕ್: ಬೆಳಗಾವಿಯಲ್ಲಿ ಹೂಡಿಕೆ ಜಾಲ ಬಯಲು

“ಜೂನ್ 30ರಿಂದ ಜುಲೈ 29ರವರೆಗೆ ಒಂದು ತಿಂಗಳ ಕಾಲ ನಡೆಯುವ ಮನೆಮನೆ ಸಮೀಕ್ಷೆ ವೇಳೆ ಸಾರ್ವಜನಿಕರು ಅಗತ್ಯ ಮಾಹಿತಿ ನೀಡುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸಬೇಕು” ಎಂದು ಜಿಲ್ಲಾಧಿಕಾರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...