ಬಾಗಲಕೋಟೆ | ಘಟಪ್ರಭಾಗೆ ವೈಜ್ಞಾನಿಕ ರೈಲು ಸೇತುವೆ ನಿರ್ಮಿಸಿ: ಸಂಸದ ಪಿ.ಸಿ ಗದ್ದಿಗೌಡರ

Date:

ಮುಧೋಳ ತಾಲೂಕಿನ ಜಾಲಿಬೇರಿ ಗ್ರಾಮದ ಸಮೀಪ ಘಟಪ್ರಭಾ ನದಿಗೆ ನಿರ್ಮಾಣವಾಗಲಿರುವ ರೈಲು ಸೇತುವೆಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿ, ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಸದ ಪಿ.ಸಿ ಗದ್ದಿಗೌಡ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾಲಿಬೇರಿ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ರೈಲು ಸೇತುವೆ ನಿರ್ಮಾಣ ಕುರಿತಂತೆ ರೈಲ್ವೆ ಅಧಿಕಾರಿಗಳು ಹಾಗೂ ರೈತರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೇತುವೆ ನಿರ್ಮಾಣದ ವೇಳೆ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಸ್ತುತ ಬಾಗಲಕೋಟೆ–ಕುಡಚಿ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಂಡರೆ ರೈಲು ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ ಜಿಲ್ಲೆಯ ಸಾರಿಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ ಎಂದು ತಿಳಿಸಿದರು.

ಕಾಮಗಾರಿಯ ಪ್ರತಿಯೊಂದು ಹಂತವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ರೈತರು ಸಲ್ಲಿಸಿರುವ ನ್ಯಾಯಸಮ್ಮತ ಬೇಡಿಕೆಗಳನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರು ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ, “ಘಟಪ್ರಭಾ ನದಿಯ ಪ್ರವಾಹದ ಸ್ವರೂಪವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸೇತುವೆ ವಿನ್ಯಾಸ ರೂಪಿಸಬೇಕು. ಮಳೆಗಾಲದಲ್ಲಿ ಪ್ರವಾಹ ಬಂದಾಗ ರೈತರ ಜಮೀನುಗಳಿಗೆ ನೀರು ನುಗ್ಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಸಂಬಂಧ ಕೆಬಿಜೆಎನ್‌ಎಲ್, ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ನಾರಾಯಣ ಭಾಂಡಗೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಭಾರತೀಯ ರೈಲ್ವೆ ಇಲಾಖೆಯ ಡೆಪ್ಯೂಟಿ ಸಿಇಒ ಶಿವಕುಮಾರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು ನಾಯಕ, ಆಡಳಿತಾಧಿಕಾರಿ ಉಮೇಶ ನಾಯಕ ಹಾಗೂ ಎಡಿಎಲ್‌ಆರ್ ಮಹೇಶ ಪತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...