ಬಾಗಲಕೋಟೆ | ವಕೀಲ ವೃತ್ತಿ ಯಶಸ್ಸಿಗೆ ನಿರಂತರ ಅಧ್ಯಯನ, ಭಾಷಾ ಪ್ರೌಢಿಮೆ ಅಗತ್ಯ: ಪದ್ಮಾವತಿ ಮಾನೆ

Date:

ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ ವೃತ್ತಿಯಾಗಿದ್ದು, ಇದರಲ್ಲಿ ಯಶಸ್ಸು ಸಾಧಿಸಲು ಬೌದ್ಧಿಕ ಕೌಶಲ್ಯ, ಭಾಷಾ ಪ್ರೌಢಿಮೆ, ಸಂವಹನ ಕಲೆ, ಶ್ರದ್ಧೆ ಹಾಗೂ ನಿರಂತರ ಅಧ್ಯಯನ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪದ್ಮಾವತಿ ಮಾನೆ ಹೇಳಿದರು.

- Advertisement -

ಬಾಗಲಕೋಟೆ ನಗರದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್‌ಎಸ್‌ಎಸ್, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ವಕೀಲ ವೃತ್ತಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶವಿರುವ ಕ್ಷೇತ್ರವಾಗಿದೆ. ರಾಜಕಾರಣಿಗಳು, ಐಎಎಸ್ ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ಜನರವರೆಗೆ ಎಲ್ಲ ವರ್ಗದವರೊಂದಿಗೆ ಸಂಪರ್ಕ ಹೊಂದುವ ವಿಶಿಷ್ಟ ಅವಕಾಶ ಈ ವೃತ್ತಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ವಕೀಲ ವೃತ್ತಿಯಲ್ಲಿ ಹಲವು ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದು, ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಮುನ್ನಡೆಯಬೇಕು ಎಂದರು.

Advertisements

ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಕ್ರೀಡೆ, ಎನ್‌ಎಸ್‌ಎಸ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದ ಮೂಲಕ ಉತ್ತಮ ವಕೀಲರಾಗಿ ಹೊರಹೊಮ್ಮಿ ಕಾಲೇಜು ಮತ್ತು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಎಂ.ಪಿ. ಚಂದ್ರಿಕಾ ಮಾತನಾಡಿ, ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಶ್ರದ್ಧೆ ಮತ್ತು ಸತತ ಪ್ರಯತ್ನದಿಂದ ಅಸಾಧ್ಯವಾದುದನ್ನೂ ಸಾಧಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಶೈಕ್ಷಣಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ನ್ಯಾಯವಾದಿಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.ಸಂಗಯ್ಯ ಏಣಗಿಮಠ ಪ್ರಾರ್ಥಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ. ಸುಧೀಂದ್ರ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಸರೋಜಾ ನಾಯಕ ವಂದಿಸಿದರು. ತೇಜಸ್ವಿನಿ ಮೊಹರೆ ಕಾರ್ಯಕ್ರಮ ನಿರೂಪಿಸಿದರು.ಸಮಾರಂಭದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್‌ ಜಿ.ಟಿ ನಿಟ್ಟಾಲಿ ನೇಮಕ

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಐಎಎಸ್‌...

ಇರಾನ್‌ನ ಪರಮಾಣು ಕಾರ್ಯಕ್ರಮದ ಮಾಹಿತಿ ಕೊಟ್ಟವರಿಗೆ 2 ಕೋಟಿ ಡಾಲರ್ ಬಹುಮಾನ: ಅಮೆರಿಕ ಘೋಷಣೆ

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಮಹತ್ವದ ಮಾಹಿತಿ ನೀಡುವವರಿಗೆ ಗರಿಷ್ಠ 20...

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು...