ಬಾಗಲಕೋಟೆ | ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ: ನಾಲ್ವರ ಬಂಧನ

Date:

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ ಎಸಗಿರುಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲಾ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, “ವಿಮಾ ಕಂಪೆನಿಯೊಂದರ ರಾಕೇಶ್, ಅನಿಲ್ ಬೀಳಗಿ, ಬಾಲುರಾಜು ಪಾಳೇಗಾರ, ಗಂಗಪ್ಪ ಕೃಷ್ಣ ಬಂಧಿತರು. ಕಲ್ಲಪ್ಪ ಹುಣಸಿಕಟ್ಟಿ ಸೇರಿದಂತೆ 9 ಜನರ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

“ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ತದ್ದಲಿಂಗೇಶ ದೊಡ್ಡಮನಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರನ್ನು ಬಂಧಿಸಲು ಶೋಧನೆ ನಡೆದಿದ್ದು, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಹಣ ಲಪಟಾಯಿಸಿರುವುದನ್ನು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ” ಎಂದರು.

“ವಿಮಾ ಕಂಪೆನಿಗಳ ಪ್ರತಿನಿಧಿಗಳು, ಏಜೆಂಟರು ವಂಚನೆಯಲ್ಲಿ ಭಾಗಿಯಾಗಿದ್ದಾರೆ. ರೈತರಿಂದ ಜಮೀನು ದಾಖಲೆ, ಪಾಸ್ ಬುಕ್, ಆಧಾರ್ ಕಾರ್ಡ್ ವಿವರ ಪಡೆದು ಬೆಳೆ ವಿಮೆಗಾಗಿ ನೋಂದಾಯಿಸಲಾಗುತ್ತದೆ. ಈ ಪೈಕಿ ಹಲವು ಜಮೀನುಗಳಲ್ಲಿ ಬೆಳೆ ಬೆಳೆಯದಿದ್ದರೂ ದಾಖಲೆಗಳಲ್ಲಿ ಮಾಹಿತಿ ದಾಖಲಿಸಲಾಗುತ್ತಿತ್ತು. ಈ ಮಧ್ಯ ಹಲವು ರೈತರು ಬೇರೆ ಬೆಳೆ ಬೆಳೆದಿದ್ದರೂ ಹೆಚ್ಚಿನ ಪರಿಹಾರ ದೊರೆಯುವ ಬೆಳೆ ಬೆಳೆದಿರುವುದು ದಾಖಲೆಯಲ್ಲಿ ತೋರಿಸಲಾಗಿತ್ತು. ನಂತರ ಬೆಳೆಹಾನಿ ಎಂದು ಮಾಹಿತಿ ನೀಡಿ ಪ್ರತಿ ಎಕರೆಗೆ ಅಂದಾಜು ₹15,000ದಿಂದ ₹20,000 ಪರಿಹಾರ ಪಡೆಯಲಾಗುತ್ತಿತ್ತು. ಹೋಬಳಿಯೊಂದರಲ್ಲೇ ವರ್ಷಕ್ಕೆ ಅಂದಾಜು 600 ಎಕರೆ ಜಮೀನಿಗೆ ಹೀಗೆ ವಿಮೆ ಮಾಡಿಸಲಾಗುತ್ತಿತ್ತು. ಮುಧೋಳ ತಾಲೂಕಿನ ಮೆಟಗುಡ್ಡ, ಗುಲಗಾಲಜಂಬಗಿ ಗ್ರಾಮಸ್ಥರು ಈ ಕುರಿತು ಉಪವಿಭಾಗ ಅಧಿಕಾರಿಗೆ ದೂರು ನೀಡಿದ್ದರು. ಕೃಷಿ ಇಲಾಖೆ, ಕಂದಾಯ ಇಲಾಖೆಯಿಂದ ನಡೆಸಿದ ಜಂಟಿ ಸಮೀಕ್ಷೆಯಲ್ಲಿ ವಂಚನೆ ಪ್ರಕರಣ ಬಯಲಾಗಿದೆ” ಎಂಬುದನ್ನು ತಿಳಿಸಿದರು.

“ಈವರೆಗೆ 28 ಲಕ್ಷ ರೂಪಾಯಿ ಲಪಟಾಯಿಸಿರುವುದು ತನಿಖೆಯಿಂದ ಹೊರಬಿದ್ದಿದೆ. 2021ರಿಂದ 2025ರ ವರೆಗೆ ಅಂದಾಜು 30 ಕೋಟಿ ರೂ. ವಂಚಿಸಿರಬಹುದು ಎನ್ನಲಾಗಿದೆ. ಜಿಲ್ಲೆಯ ಬೀಳಗಿ, ಹುನಗುಂದ ತಾಲೂಕುಗಳಲ್ಲೂ ಇಂತಹ ವಂಚನೆ ಪ್ರಕರಣಗಳು ನಡದಿವೆ. ಸದ್ಯ ಪೊಲೀಸರು ಇಂತಹ ವಂಚನೆ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ಪ್ರಕರಣದ ತನಿಖೆಗೆ ವಿಷೇಶ ತನಿಖಾ ತಂಡ ರಚಿಸಲಾಗಿದೆ. ವಿಮಾ ಕಂಪನಿಗಳ ಏಜಂಟರು, ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...