ಬಾಗಲಕೋಟೆ | ಮನರೇಗಾ ಅಡಿ ಹೆಚ್ಚುವರಿ 50 ದಿನಗಳ ಕೆಲಸಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ

Date:

ಕರ್ನಾಟಕದಲ್ಲಿ ಬರಗಾಲದ ಕಾರಣಕ್ಕೆ ಹೆಚ್ಚುವರಿ 50 ಮಾನವ ದಿನಗಳನ್ನು ಘೋಷಣೆ ಮಾಡುವುದು ಹಾಗೂ ಮನರೇಗಾ ಅಡಿಯಲ್ಲಿ 3 ತಿಂಗಳಿನಿಂದ ಸ್ಥಗಿತಗೊಂಡಿರುವ ಕೂಲಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕು ಎಂದು ಗ್ರಾಕೂಸ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡೆ ತಾಲೂಕಿನ ಗ್ರಾಕೂಸ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, “ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಡಿ ದುಡಿದ ಕಾರ್ಮಿಕರಿಗೆ ಮೂರು ತಿಂಗಳುಗಳಿಂದ ಕೂಲಿ ಹಣ ಬಂದಿಲ್ಲ. ಆ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಜತೆಗೆ ಮೂರು ತಿಂಗಳ ಹಣಕ್ಕೆ ಬಡ್ಡಿಯನ್ನೂ ಸೇರಿಸಿ ಕೂಲಿ ಹಣ ನೀಡಬೇಕು” ಎಂದು ಒತ್ತಾಯಿಸಿದರು.

“ಕರ್ನಾಟಕ ರಾಜ್ಯದಲ್ಲಿ ಈ ವರ್ಷ ಭಯಂಕರ ಬರಗಾಲ ಬಂದಿದೆ. ರಾಜ್ಯ ಸರ್ಕಾರ ಈಗಾಗಲೇ ಬರಗಾಲ ಘೋಷಣೆ ಮಾಡಿದೆ. ಕೇಂದ್ರ ಸರ್ಕಾವೂ ಬರಗಾಲ ಘೋಷಿಸಿ ಕೂಲಿ ಕಾರ್ಮಿಕರಿಗೆ ಮನರೇಗಾದಲ್ಲಿ ಹೆಚ್ಚುವರಿ 50 ಮಾನವ ದಿನಗಳ ಕೆಲಸ ಕೊಡುವುದಾಗಿ ಘೋಷಣೆ ಮಾಡಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ಡಿ.28ಕ್ಕೆ ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ‘ಬೆಂಗಳೂರು ಚಲೋ’

ತಾವು ಈ ವಿಷಯಗಳ ಮೇಲೆ ಕೂಡಲೇ ನಿರ್ಧಾರ ತೆಗೆದುಕೊಳ್ಳುತ್ತೀರೆಂದು ಕರ್ನಾಟಕದ ಲಕ್ಷಾಂತರ ಕೂಲಿ ಕಾರ್ಮಿಕರು ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ಕೂಡಲೇ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು” ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...

ತುಮಕೂರು | ಪ್ರತಿಭಟನೆಯ ವೇಳೆ ಡಿವೈಎಸ್‌ಪಿ ಮೇಲೆರಗಿದ ಬಿಜೆಪಿ ಕಾರ್ಯಕರ್ತರು; ಮೂಗಿಗೆ ಗಾಯ

ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂಬ...