ಬಾಗಲಕೋಟೆ | ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ಮಾ.11ರಿಂದ ಮುಷ್ಕರ

Date:

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 11ರಿಂದ 15ರವರೆಗೆ ಆರೋಗ್ಯ ಇಲಾಖೆ ವೈದ್ಯರು, ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ತಿಳಿಸಿದೆ.

- Advertisement -

ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಹಲವಾರು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಮಾ.11 ರಿಂದ 15ರವರೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಔಷಧಾಲಯಗಳ ಸಿಬ್ಬಂದಿ ಮುಷ್ಕರ ಕೈಗೊಳ್ಳಲಿದ್ದಾರೆ.‌ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಾಗುತ್ತದೆ. ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮಾ.16ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

“ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಕಾಲಕ್ಕೆ ಔಷಧಿ ವಿತರಣೆಯಾಗದಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿಯಾಗಬೇಕು. 1997ರಿಂದ ಈವರೆಗೆ ನಿಯಮ ತಿದ್ದುಪಡಿಯಾಗಿಲ್ಲ. ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆ 67 ಸಾವಿರದಷ್ಟಿದೆ. ಆದರೆ 37,620 ಹುದ್ದೆಗಳು ಖಾಲಿಯಿವೆ. ಇದರಿಂದ ಅಧಿಕಾರಿಗಳು, ನೌಕರರು ನಾನಾ ಹುದ್ದೆಗಳ ಜವಾಬ್ದಾರಿ ನಿಭಾಯಿಸಬೇಕಿದೆ. ಐದು ವರ್ಷಗಳಿಂದ ಜೇಷ್ಠತಾ ಪಟ್ಟಿ ಪ್ರಕಟಿಸದ್ದಕ್ಕೆ ಬಡ್ತಿ ದೊರೆತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

“ಸೇವಾನಿರತ ವೈದ್ಯರು, ಅಧಿಕಾರಿಗಳು, ನೌಕರರು ಉನ್ನತ ವ್ಯಾಸಂಗ ಕೈಗೊಳ್ಳಲು ಅವಕಾಶ ದೊರೆತಿಲ್ಲ. ವರ್ಗಾವಣೆ ಕಾಯಿದೆ ಸರಿಪಡಿಸುವ ಬದಲು ಅವೈಜ್ಞಾನಿಕ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಎನ್ ಕೇಡ‌ರ್ ಹುದ್ದೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ನೇಮಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...