ಬಾಗಲಕೋಟೆ | ಮನರೇಗಾ ಕಾರ್ಮಿಕರ ವೇತನ ಬಿಡುಗಡೆಗೆ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕೆಲಸ ಮಾಡಿ ಎರಡು ತಿಂಗಳಾದರೂ ದುಡಿಮೆಯ ಹಣ ಜಜೆ ಆಗಿರುವುದಿಲ್ಲ ಎಂದು ಆರೋಪಿಸಿ ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿಯ ಜೆ ಪಿ ಗ್ರಾಮ ಮತ್ತು ತುಂಬರಮಟ್ಟಿ ಗ್ರಾಮದಲ್ಲಿ ಕೂಲಿ ಕಾರ್ಮಿಕರ ಸಂಘಟನೆ ಸಹಯೋಗದಲ್ಲಿ ಪ್ರತಿಭಟನೆ ನಡೆಸಿದರು.

“ತಮಗೆ ಬೇಕಾದವರಿಗೆ ಪಗಾರ ಕೊಟ್ಟಾರ, ನಮಗೆ ದುಡಿದ ಪಗಾರ ಕೊಡದೆ ನಮ್ಮ ಬದುಕಿನೊಂದಿಗೆ ಆಟ ಆಡುತ್ತಿದ್ದಾರೆ. ತಮಗ ಹಿಂಗ ಆಗಿದ್ದರೆ ಸುಮ್ಮನಿರುತ್ತಿದ್ದರಾ?. ಮನರೇಗಾದಲ್ಲಿ ಕೆಲಸ ಮಾಡಿ ಎರಡು ತಿಂಗಳಾಯಿತು. ಇವತ್ತಿಗೂ ಕೂಲಿ ಹಣ ಜಮೆಯಾಗಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗಿದೆ” ಎಂದು ಮಹಿಳಾ ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಣ ಕೇಳಿದರೆ, ಆ ವೇತನ ರಿಜೆಕ್ಟ್‌ ಮಾಡಿದ್ದಾರೆಂದು ಹೇಳುತ್ತಾರೆ. ಅದನ್ನು ಪ್ರಶ್ನಿಸಿದರೆ, ಅಧ್ಯಕ್ಷರ ಡೊಂಗಲ್ ಇಲ್ಲವೆಂದು ಕುಂಟು ನೆಪ ಹೇಳಿ ಮುಂದೂಡುತ್ತಿದ್ದಾರೆ” ಎಂದು ಮಹಿಳಾ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪತ್ರಕರ್ತರ ಸಮಸ್ಯೆ ಪರಿಹರಿಸುವಂತೆ ಒತ್ತಾಯ

“ಕಾನೂನು 2005ರ ಪ್ರಕಾರ ನಮಗೆ ಕೂಲಿ ಹಣ ಮತ್ತು ನಷ್ಟ ಪರಿಹಾರ ಕೊಡಲೇಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರು, ಗ್ರಾಮಸ್ಥರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ

ವಿದ್ಯಾರ್ಥಿಯನ್ನು ಚುಡಾಯಿಸಿ, ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ಆಕೆಯ ಮೇಲೆ ಪುಂಡ...

ಬಾಗಲಕೋಟೆ | ಶತಮಾನದ ಶಾಲೆಗೆ ಗತವೈಭವ ಮರಳಿ ತಂದ ಯುವಕರ ಗುಂಪು

ತಾವು ಕಲಿತಾ ಸರ್ಕಾರಿ ಶಾಲೆ ಶತಮಾನೋತ್ಸವ ಆಚರಿಸಿಕೊಂಡು ಆರು ವರ್ಷಗಳೇ ಕಳೆದಿವೆ....

ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ

ನಾಡಿನ ಹಿರಿಯ ಪತ್ರಕರ್ತ, ಬಾಗಲಕೋಟೆಯ ರಾಮ ಮನಗೂಳಿ ಅವರು ಅನಾರೋಗ್ಯದಿಂದ ಶುಕ್ರವಾರ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...