ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

Date:

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಅಲ್ಪ ಪ್ರಮಾಣದ ಪ್ರೋತ್ಸಾಹ ಧನದಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಖರ್ಚುಗಳನ್ನು ಭರಿಸುವುದು ಕಷ್ಟವಾಗಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ಜೀವನಯೋಗ್ಯ ವೇತನ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆ ಸಂಘದ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ವಿರೇಶ ಎನ್.ಎಸ್. ಆಗ್ರಹಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಮುದೋಳ ನಗರದ ಹಳೆ ಬಸಪ್ಪ ದೇವಾಲಯದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆ ಸಂಘ (ರಿ.) ಹಾಗೂ ಎಐಯುಟಿಯುಸಿ ಸಂಯೋಜನೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಆಶಾ ಕಾರ್ಯಕರ್ತೆಯರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಗ್ರಾಮೀಣ ಪ್ರದೇಶಗಳಲ್ಲಿ ತಾಯಿ-ಮಗುವಿನ ಆರೋಗ್ಯ ರಕ್ಷಣೆ, ಗರ್ಭಿಣಿಯರ ಆರೈಕೆ, ಮಕ್ಕಳ ಆರೋಗ್ಯ, ಲಸಿಕಾ ಕಾರ್ಯಕ್ರಮಗಳು ಹಾಗೂ ಆರೋಗ್ಯ ಜಾಗೃತಿ ಸೇರಿದಂತೆ ಸರ್ಕಾರದ ವಿವಿಧ ಆರೋಗ್ಯ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಆರೋಗ್ಯ ವ್ಯವಸ್ಥೆಯ ಪ್ರಮುಖ ಕೊಂಡಿಯಾಗಿರುವ ಇವರಿಗೆ ಸಮರ್ಪಕ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸದೆ, ಕೇವಲ ಪ್ರೋತ್ಸಾಹ ಧನದ ಆಧಾರದಲ್ಲಿ ದುಡಿಸಿಕೊಳ್ಳುವುದು ಅನ್ಯಾಯದ ಕ್ರಮವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಸೀಮಿತ ಪ್ರೋತ್ಸಾಹ ಧನದಲ್ಲಿ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ವೆಚ್ಚಗಳನ್ನು ಭರಿಸುವುದು ಸಾಧ್ಯವಾಗುತ್ತಿಲ್ಲ. ಜನರ ಆರೋಗ್ಯಕ್ಕಾಗಿ ನಿರಂತರವಾಗಿ ಶ್ರಮಿಸುವ ಆಶಾ ಕಾರ್ಯಕರ್ತೆಯರ ಬದುಕಿನ ಭದ್ರತೆಗೆ ಸರ್ಕಾರಗಳು ಆದ್ಯತೆ ನೀಡಬೇಕು. ಬಡ ಮಹಿಳೆಯರ ಶ್ರಮವನ್ನು ಅಗ್ಗದ ಅಥವಾ ಉಚಿತ ದುಡಿಮೆಯಾಗಿ ಬಳಸಿಕೊಳ್ಳುವ ನೀತಿಯನ್ನು ಕೈಬಿಟ್ಟು, ಅವರ ದುಡಿಮೆಗೆ ತಕ್ಕ ಗೌರವ ಮತ್ತು ಪ್ರತಿಫಲ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರದ ಆರೋಗ್ಯ ವ್ಯವಸ್ಥೆಯ ಅವಿಭಾಜ್ಯ ಅಂಗವೆಂದು ಪರಿಗಣಿಸಿ, ಗೌರವಯುತ ವೇತನದ ಜತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ಹಕ್ಕುಗಳಿಗಾಗಿ ಮುಂದಿನ ದಿನಗಳಲ್ಲಿ ಬಲಿಷ್ಠ ಹೋರಾಟ ರೂಪಿಸುವ ಅಗತ್ಯವಿದೆ. ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸಂಘಟನೆಯನ್ನು ಬಲಪಡಿಸಿ, ಎಲ್ಲ ಆಶಾ ಕಾರ್ಯಕರ್ತೆಯರನ್ನು ಒಗ್ಗೂಡಿಸಬೇಕು. ಸಂಘಟಿತ ಹೋರಾಟದ ಮೂಲಕವೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ಕರೆ ನೀಡಿದರು.

ಸಮಾವೇಶದಲ್ಲಿ ಮುದೋಳ ತಾಲೂಕು ಆಶಾ ಕಾರ್ಯಕರ್ತೆ ಸಂಘದ ನೂತನ ತಾಲೂಕು ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ವಾಸಂತಿ ಪೂಜಾರಿ, ಉಪಾಧ್ಯಕ್ಷರಾಗಿ ಲಕ್ಷ್ಮೀ ಜಾದವ, ಬೋರವ್ವ ತುಪ್ಪದ ಹಾಗೂ ಮಂಜುಳಾ ಸಿಡ್ಲವಗೋಳ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ದಾನಮ್ಮ ವಜ್ರಮಟ್ಟಿ, ಜಂಟಿ ಕಾರ್ಯದರ್ಶಿಗಳಾಗಿ ಹಮಿನಾ ನದಾಫ್ ಹಾಗೂ ಲಕ್ಷ್ಮೀ ಹೂಳೆಪ್ಪನವರ ಆಯ್ಕೆಯಾದರು. ಇದರೊಂದಿಗೆ 15 ಜನರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಮಲಾ ತೇಲಿ, ಜಮಖಂಡಿ ತಾಲೂಕು ಅಧ್ಯಕ್ಷೆ ಮಂಜುಳಾ ಸರಕರಿ ಹಾಗೂ ತಾಲೂಕು ಕಾರ್ಯದರ್ಶಿ ಸುನಿತಾ ಜಂಬಗಿ ಉಪಸ್ಥಿತರಿದ್ದರು. ಮುದೋಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನೂರಾರು ಆಶಾ ಕಾರ್ಯಕರ್ತೆಯರು ಸಮಾವೇಶದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಮರಹಳ್ಳಿಯ ಮಾದಿಗರ ಹಟ್ಟಿಯಲ್ಲಿ ಚರಂಡಿಯಿಲ್ಲದೆ ಹದಗೆಟ್ಟ ರಸ್ತೆ; ಸಾಂಕ್ರಾಮಿಕ ರೋಗದ ಭೀತಿ!

ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಮಾದಿಗರ...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...

ಫ್ರಾನ್ಸ್‌ನಲ್ಲಿ ಭಾರೀ ಜನಾಕ್ರೋಶ: 4 ಲಕ್ಷಕ್ಕೂ ಹೆಚ್ಚು ಜನರ ಪ್ರತಿಭಟನೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಡಳಿತಾವಧಿಯ ಕೊನೆಯ ಹಂತದಲ್ಲಿ ದೇಶಾದ್ಯಂತ...