ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ವಾರದೊಳಗೆ ಕಾಣಲಿದೆ ‌ಅಂತಿಮ ಚಿತ್ರಣ

Date:

ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತ ತಲುಪಿದ್ದು, ವಾರದೊಳಗೆ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಜಿಲ್ಲಾಧ್ಯಕ್ಷರ ಆಯ್ಕೆಗೆ ವೀಕ್ಷಕರು ಜಿಲ್ಲಾದ್ಯಂತ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿಗೆ ವರದಿ ಸಲ್ಲಿಸಿರುವುದು, ಆಯ್ಕೆ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ.

- Advertisement -

ಕಾಂಗ್ರೆಸ್‌ನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಮುಖಂಡರ ಅಭಿಪ್ರಾಯದ ಜತೆಗೆ ಸಾಮಾಜಿಕ ಪ್ರಾತಿನಿಧ್ಯಕ್ಕೂ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಆದಿವಾಸಿ ಘಟಕದ ಉಪಾಧ್ಯಕ್ಷ ಬೆಲ್ಲಯ್ಯ ನಾಯಕ್ ತೇಜೋವತ್ ಅವರು ಬಾಗಲಕೋಟೆ ಜಿಲ್ಲೆಯ ವೀಕ್ಷಕರಾಗಿ ವಿವಿಧ ಮುಖಂಡರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಂತಿಮ ವರದಿಯನ್ನು ಈಗಾಗಲೇ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಮಧ್ಯೆ ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಪ್ರಮುಖ ಮುಖಂಡರು ಶುಕ್ರವಾರ ಸಭೆ ನಡೆಸುವ ಸಾಧ್ಯತೆ ಇದ್ದು, ಸಭೆಯಲ್ಲಿ ಒಮ್ಮತದ ಹೆಸರು ಆಯ್ಕೆ ಮಾಡಿ ಹೈಕಮಾಂಡ್‌ಗೆ ಶಿಫಾರಸು ಮಾಡುವ ಸಾಧ್ಯತೆ ಇದೆ. ಬಳಿಕ ಕೆಪಿಸಿಸಿ ಹಾಗೂ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಾಮಾಜಿಕ ಪ್ರಾತಿನಿಧ್ಯಕ್ಕೆ ಆದ್ಯತೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧ್ಯಕ್ಷರ ಆಯ್ಕೆಗೆ ರೋಸ್ಟರ್ ಪದ್ಧತಿ ಅನುಸರಿಸಲು ಕಾಂಗ್ರೆಸ್ ಮುಂದಾಗಿದೆ. ಜಾತಿ, ವರ್ಗ ಹಾಗೂ ಸಾಮಾಜಿಕ ಪ್ರಾತಿನಿಧ್ಯವನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಈ ಬಾರಿ ಯಾವ ಸಮುದಾಯಕ್ಕೆ ಅವಕಾಶ ಸಿಗಲಿದೆ ಎಂಬ ಕುತೂಹಲ ಮೂಡಿದೆ.

ಪಕ್ಷದ ಮೂಲಗಳ ಪ್ರಕಾರ, ಈ ಬಾರಿ ಸಾಮಾನ್ಯ ವರ್ಗ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರಿಗೆ ಜಿಲ್ಲಾಧ್ಯಕ್ಷ ಸ್ಥಾನ ಒಲಿಯುವ ಸಾಧ್ಯತೆ ಇದೆ. ಈವರೆಗೆ ಸಾಮಾನ್ಯ ವರ್ಗ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹೆಚ್ಚಿನ ಅವಧಿಯಲ್ಲಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿಗೆ ಅವಕಾಶ ನೀಡಬೇಕು ಎಂಬ ವಾದವೂ ಪಕ್ಷದೊಳಗೆ ಕೇಳಿಬರುತ್ತಿದೆ.

32 ಆಕಾಂಕ್ಷಿಗಳಿಂದ ಅರ್ಜಿ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬರೋಬ್ಬರಿ 32 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಮಹಿಳಾ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಮುಖಂಡರು ಇದ್ದಾರೆ.

ಮಾಜಿ ಸಚಿವರಾದ ಬಿ.ಬಿ. ಚಿಮ್ಮನಕಟ್ಟಿ, ದಿ.ಸಿದ್ದು ನ್ಯಾಮಗೌಡ ಹಾಗೂ ಮಾಜಿ ಸಂಸದ ಆರ್.ಎಸ್. ಪಾಟೀಲ ಸೇರಿದಂತೆ ಜಿಲ್ಲೆಯ ಹಲವು ಮುಂಚೂಣಿ ನಾಯಕರು ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಬಿ. ಸೌದಾಗರ ಹಾಗೂ ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರು ದೀರ್ಘಾವಧಿಗೆ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ.

ಯುವ ಮುಖಗಳಿಗೆ ಮಣೆ?

ಸದ್ಯ ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರು ಸುಮಾರು ಏಳು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಇದೀಗ ಸಂಘಟನೆಗೆ ಯುವ ಮುಖಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ಬೇಡಿಕೆ ಪಕ್ಷದೊಳಗೆ ಬಲವಾಗಿದೆ.

ಮೊದಲ ಹಂತದಲ್ಲಿ 50 ವರ್ಷದೊಳಗಿನವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಬಳಿಕ ಎಲ್ಲ ವರ್ಗದವರಿಗೂ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅರ್ಜಿ ಸಲ್ಲಿಸಿರುವ 32 ಆಕಾಂಕ್ಷಿಗಳ ಪೈಕಿ ಬಹುತೇಕರು ಯುವಕರಾಗಿರುವುದು ಈ ಬಾರಿಯ ಆಯ್ಕೆಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಮುಂಬರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.

ಈ ಸುದ್ದಿ ಓದಿದ್ದೀರಾ? ಸಚಿವ ಸಂಪುಟದಲ್ಲಿ ಮಹಿಳೆಯ ಸದ್ದಿಲ್ಲ; ಇದು ಪ್ರಾತಿನಿಧ್ಯವೋ, ನಾಟಕವೋ?

ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಬಳಿಕ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಸೇರಿದಂತೆ ವಿವಿಧ ಪದಾಧಿಕಾರಿಗಳ ನೇಮಕಾತಿ ನಡೆಯಲಿದೆ. ಹೀಗಾಗಿ ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬುದರ ಜತೆಗೆ ಹೊಸ ಜಿಲ್ಲಾ ಕಾಂಗ್ರೆಸ್ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬ ಚರ್ಚೆಯೂ ಈಗಾಗಲೇ ಪಕ್ಷದ ವಲಯದಲ್ಲಿ ಆರಂಭವಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...

ಈ ದಿನ ಸಂಪಾದಕೀಯ | ಗ್ಯಾನೇಶ್ ರಕ್ಷಣೆಗಾಗಿ ಯುವತಿಯರನ್ನು ಪೀಡಿಸುವ ಕೀಚಕರಾಗುತ್ತಿದ್ದಾರೆಯೇ ದೆಹಲಿ ಪೊಲೀಸರು?

ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...