ಬಾಗಲಕೋಟೆ | ಏ.8ರಂದು ಸಭೆಗೆ ಅವಕಾಶವಿಲ್ಲವೆಂಬ ಸಾಮಾನ್ಯ ಜ್ಞಾನ ಕಾರಜೋಳ ಅವರಿಗೆ ಇಲ್ಲವೇ?: ಸಚಿವ ಎಂ ಬಿ ಪಾಟೀಲ

Date:

ಯುಕೆಪಿ ಯೋಜನೆ ಕುರಿತು ಏಪ್ರಿಲ್‌ 8ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಟೀಕಿಸಿದರು.

- Advertisement -

ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ನಿಮಿತ್ತ ಭಗವತಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, “ವಿಧಾನಸಭೆ ಉಪಚುನಾವಣೆ ಪ್ರಚಾರ ಪ್ರಕ್ರಿಯೆ ಏ.7ರ ಸಂಜೆ ಮುಗಿಯುತ್ತದೆ. ಹೀಗಾಗಿ 8ರಂದು ಸಭೆ ನಡೆಸಲು ಅವಕಾಶವೇ ಇಲ್ಲ ಎಂಬ ಸಾಮಾನ್ಯ ಜ್ಞಾನ ಕಾರಜೋಳ ಅವರಿಗೆ ಇಲ್ಲವೇ? ಕೇವಲ ಪ್ರಚಾರಕ್ಕಾಗಿ, ಉಡಾಫೆಗಾಗಿ ಇಂತಹ ಹೇಳಿಕೆಗಳನ್ನು ನೀಡಿರುವ ಇವರು ಯುಕೆಪಿಗಾಗಿ ಏನು ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಜೆಪಿಯವರ ಕಿಸೆಯಲ್ಲಿ ಬೆಂಕಿ ಪೊಟ್ಟಣ: ಎಂ ಬಿ ಪಾಟೀಲ ಟೀಕೆ

“ಏನೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರೂ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ. ಬಿಜೆಪಿಗರಿಗೆ ಮಾತನಾಡಲು ಯಾವುದೇ ವಿಷಯವೂ ಇಲ್ಲ. ಬೆಂಕಿ ಪೊಟ್ಟಣವನ್ನು ಕಿಸೆಯಲ್ಲಿ ಇಟ್ಟುಕೊಂಡು ಕಂಡ ಕಂಡಲ್ಲಿ ಜಾತಿ, ಮತ, ದ್ವೇಷದ ಮೂಲಕ ಬೆಂಕಿ ಹಚ್ಚುವ ಇವರು, ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಪ್ರಚಾರಕ್ಕಾಗಿ ಭಾಷಣ ಮಾಡುವ ಇವರು ಎಲ್ಲ ರಂಗಗಳಲ್ಲಿ ವಿಫಲರಾಗಿದ್ದಾರೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಮಾಡುವುದಾಗಿ ತಿಳಿಸಿದ್ದರು. ಮೋದಿ ಅವರು ಅಧಿಕಾರಕ್ಕೆ ಬಂದು 12ವರ್ಷ ಆಯಿತು. ಅದರಂತೆ 24 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದಾರೆ? ರೈತರ ಸಾಲ ಮನ್ನಾ ಮಾಡದೇ, ಅಂಬಾನಿ, ಅದಾನಿ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿಯ ಈ ದೋರಣೆಯನ್ನು ಕಂಡ ಯುವಜನರು ಭ್ರಮನಿರಸರಾಗಿದ್ದಾರೆ” ಎಂದರು.

ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಎಂ ಬಿ ಪಾಟೀಲ 1

ಕಾಂಗ್ರೆಸ್ ಮುಖಂಡ ಗಿರೀಶ ನಾಡಗೌಡ ಕೆರಕಲಮಟ್ಟಿ ಮಾತನಾಡಿ, “ಮೇಟಿ ಅವರು ಸರ್ವಜನಾಂಗದ ನಾಯಕರು. ಎಲ್ಲರೂ ಅವರ ಮನೆಗೆ ನೇರವಾಗಿ ಹೋಗಬಹುದು. ಸಾಮಾನ್ಯರು ಯಾರೂ ವೀರಣ್ಣ ಚರಂತಿಮಠ ಅವರ ಮನೆಗೆ ಕಾಲಿಡಲು ಆಗುವುದಿಲ್ಲ. ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ” ಎಂದರು.

ಭಗವತಿ ಗ್ರಾಮದ ನಂತರ ಕಿರಸೂರ, ಮುಗಳೊಳ್ಳಿ, ಬೆಣ್ಣೂರ ಗ್ರಾಮಗಳಲ್ಲಿ ಸಚಿವ ಎಂ ಬಿ ಪಾಟೀಲ ಅವರು ಬಿಜೆಪಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ತಿಕೋಟಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರು ದಾಶ್ಯಾಳ ಸೇರಿದಂತೆ ಹಲವು ಕಾಂಗ್ರೆಸ್ ಪದಾಧಿಕಾರಿಗಳು ಮನೆ ಮನೆಗೆ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ನಡೆಸಿದರು.

ಇದನ್ನೂ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂ ಮತದಾರರ ಪ್ರಚಾರ, ಪಾಠ ಕಲಿಯುವುದೇ ಹೈಕಮಾಂಡ್?

ವೇದಿಕೆಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಬ್ದುಲ ಹಮೀದ ಮುಶ್ರಿಫ್, ಸುರೇಶ ಗೂಳಪ್ಪ ರಕರೆಡ್ಡಿ, ಕಲಬಸಪ್ಪ ಹಳ್ಳೂರ, ಸಿದ್ದಣ್ಣ ರಕರೆಡ್ಡಿ, ಶರಣಪ್ಪ ಗುಳೇದ, ಬಿ. ಜಿ. ಪಾಟೀಲ ವಕೀಲರು. ಚನ್ನಪ್ಪ ಕಲ್ಲೋಳ, ಸಂಗಪ್ಪ ಪೈಲದ, ಆದರ್ಷ ಹೊಸಮನಿ, ಪ್ರಭು ಪಾಟೀಲ ಕಂದಗಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...