ಬಾಗಲಕೋಟೆ | ಕರಡು ಮತದಾರರ ಪಟ್ಟಿ ಪ್ರಕಟ: 47,430 ಮಂದಿಗೆ ನೋಟಿಸ್

Date:

ಬಾಗಲಕೋಟೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಎಸ್‌ಡಿಡಿಒ ಮತದಾರರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಒಟ್ಟು 13,92,523 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ. 47,430 ಮಂದಿಗೆ ನೋಟಿಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದರು.

- Advertisement -

ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕರಡು ಪಟ್ಟಿಯಲ್ಲಿರುವ 13,92,523 ಮತದಾರರ ಪೈಕಿ 6,93,130 ಮಂದಿ ಪುರುಷರು, 6,99,318 ಮಂದಿ ಮಹಿಳೆಯರು ಹಾಗೂ 75 ಮಂದಿ ಇತರೆ ಮತದಾರರು ಇದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಮುಧೋಳದಲ್ಲಿ 1,84,471, ತೇರದಾಳದಲ್ಲಿ 2,06,387, ಜಮಖಂಡಿಯಲ್ಲಿ 1,93,267, ಬೀಳಗಿಯಲ್ಲಿ 2,08,155, ಬಾದಾಮಿಯಲ್ಲಿ 2,02,575, ಬಾಗಲಕೋಟೆಯಲ್ಲಿ 2,02,830 ಹಾಗೂ ಹುನಗುಂದ ಕ್ಷೇತ್ರದಲ್ಲಿ 1,94,838 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ” ಎಂದು ತಿಳಿಸಿದರು.

“ಮತದಾರರ ಪಟ್ಟಿಯ ಡಿಜಿಟೈಜೇಷನ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅನ್ಯೂಮಲೈಸ್ ಹಾಗೂ ಮ್ಯಾಪಿಂಗ್ ಪ್ರಕರಣಗಳು ಪತ್ತೆಯಾಗಿವೆ. ಇವುಗಳ ಕುರಿತು ವಿಚಾರಣೆ ನಡೆಸಲು ದಿನಾಂಕ ನಿಗದಿಪಡಿಸಿ ಸಂಬಂಧಿಸಿದ ಮತದಾರರಿಗೆ ನೋಟಿಸ್ ನೀಡಲಾಗುವುದು. ನೋಟಿಸ್ ಪಡೆದ ಮತದಾರರು ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ತಮ್ಮ ಮತದಾರರ ವಿವರಗಳನ್ನು ಸಮರ್ಥಿಸಿಕೊಳ್ಳಬೇಕು” ಎಂದು ಸಂಗಪ್ಪ ಹೇಳಿದರು.

“ಜಿಲ್ಲೆಯಲ್ಲಿ ಒಟ್ಟು 31,039 ಅನಾಮಲಸ್(ಅಪೂರ್ಣ ಮಾಹಿತಿ), 16,391 ನೋ ಮ್ಯಾಪಿಂಗ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 47,430 ಮತದಾರರಿಗೆ ನೋಟಿಸ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

ಆಕ್ಷೇಪಣೆಗೆ ಅವಕಾಶ

“ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ವೆಬ್‌ಸೈಟ್, ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ ಹಾಗೂ ಭಾರತ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ತಿದ್ದುಪಡಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್‌ 24ರಿಂದ ಸೆಪ್ಟಂಬರ್‌ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ನಮೂನೆ-6 ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು” ಎಂದರು.

“ಚುನಾವಣಾ ಆಯೋಗದ ನಿರ್ದೇಶನದಂತೆ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿದ್ದ ಮತಗಟ್ಟೆಗಳನ್ನು ಪುನರ್‌ವಿಂಗಡಿಸಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತಗಟ್ಟೆಗಳ ಸಂಖ್ಯೆ 1,785ರಿಂದ 1,855ಕ್ಕೆ ಏರಿಕೆಯಾಗಿದೆ” ಎಂದು ಸಂಗಪ್ಪ ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಭಾರೀ ಮಳೆಗೆ ತ್ರಿವೇಣಿ ಸಂಗಮ ಭರ್ತಿ: ಉದ್ಯಾನ, ಗದ್ದೆಗಳು ಜಲಾವೃತ

“ಮತದಾರರ ಅನುಕೂಲ ಹಾಗೂ ಚುನಾವಣಾ ಪ್ರಕ್ರಿಯೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಎ.ಎಸ್.ಡಿ.ಡಿ.ಒ ಮತದಾರರನ್ನು ಹೊರತುಪಡಿಸಿ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ಗುರುತಿಸಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ” ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಚುನಾವಣಾ ವಿಭಾಗದ ಶಿರಸ್ತೇದಾರ ಮಹೇಶ ಪಾಂಡವ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...