ಬಾಗಲಕೋಟೆ | ಹುತ್ತಗಳಿಗೆ ಹಾಲೆರೆಯದೆ, ಹಸಿದವರಿಗೆ ಹಾಲು ಕೊಡಿ: ದಸಾಪ ಅಧ್ಯಕ್ಷ

Date:

ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್‌ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಜೈನ ಅನಾಥ ಆಶ್ರಮದಲ್ಲಿ ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕ ಹಾಗೂ ಭಾರತೀಯ ವಿದ್ಯಾರ್ಥಿ ಸಂಘ ಒಗ್ಗೂಡಿ ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸಿದರು. ಈ ವೇಳೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪ್ರಬಲ ಸಮುದಾಯವು ಸಮಾಜದಲ್ಲಿ ಮೂಡನಂಬಿಕೆಗಳನ್ನು ಬಿತ್ತಿ, ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಕಲ್ಲನಾಗರಕ್ಕೆ ಹಾಲು ಎರೆದರೆ ಯಾವುದೇ ಪ್ರಯೋಜನವಿಲ್ಲ., ಇಂತಹ ಮೂಡನಂಬಿಕೆಗಳನ್ನು ಬಿಟ್ಟು, ಅದೇ ಹಾಲನ್ನು ಹಸಿದವರಿಗೆ ನೀಡಬೇಕು” ಎಂದು ಈರಪ್ಪ ಸುತಾರ ಹೇಳಿದರು.

ಬಿವಿಎಸ್ ಮುಖಂಡ ಪ್ರವೀಣ ಮೌರ್ಯ ಮಾತನಾಡಿ, “ದೇಶದಲ್ಲಿ ಇನ್ನು ಕೂಡ ಅಪೌಷ್ಟಿಕತೆ ಕಾಡುತ್ತಿದೆ. ಹಾಲನ್ನು ವ್ಯರ್ಥ ಮಾಡದೇ ಅಗತ್ಯ ಇರುವವರಿಗೆ ಕುಡಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಮುಖಂಡರಾದ ಮಹಾದೇವ ಮೌರ್ಯ, ಕಲ್ಮೇಶ ಮಾದರ ಮತ್ತು ಗಣೇಶ್ ಮಾಂಗ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...